ಮೈಸೂರು ಲೋಕಸಭೆ ಕ್ಷೇತ್ರ: ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿನ ಕನಸು ಭಗ್ನ; ಟಿಕೆಟ್ ಕೈತಪ್ಪಿದ ಬೆನ್ನಲೇ ಸಿಂಹ ಹೇಳಿದ್ದೇನು?

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ.
ಪ್ರತಾಪ್ ಸಿಂಹ
ಪ್ರತಾಪ್ ಸಿಂಹ

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ.

ಮೂರನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ್ದು ಮಹಾರಾಜ ಯದುವೀರ್ ಒಡೆಯರ್ ಅವರನ್ನು ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿ ಯದುವೀರ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಪ್ರತಾಪ್ ಸಿಂಹ
ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಪ್ರತಾಪ್ ಸಿಂಹಗೆ ಕೊಕ್, ಯದುವೀರ್ ಗೆ ಟಿಕೆಟ್

ಅಭಿನಂದನೆಗಳು ಮಹಾರಾಜ ಶ್ರೀ ಯದುವೀರ್( Congratulations to Maharaja Sri. Yaduveer) ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ” ಎಂದು ಸಿಂಹ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಟಿಕೆಟ್ ಘೋಷಣೆಯಾಗಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅವರ ಅಭಿಮಾನಿಗಳು ಸಾಮಾಜಿಕ ತಾಣದಲ್ಲಿ ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com