ಲೋಕಸಭೆ ಚುನಾವಣೆ: ಜಗದೀಶ್ ಶೆಟ್ಟರ್ ಪ್ರಬಲ ವಿರೋಧದ ನಡುವೆಯೂ ಟಿಕೆಟ್ ಗಿಟ್ಟಿಸಿಕೊಂಡ ಪ್ರಹ್ಲಾದ್ ಜೋಶಿ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಘೋಷಣೆಯಾಗಿದೆ. ಜೋಶಿ ಅವರು ಧಾರವಾಡ ಕ್ಷೇತ್ರದಿಂದ ಐದನೇ ಬಾರಿ ಸ್ಪರ್ಧಿಸುತ್ತಿದ್ದು, ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ.
ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ
ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಘೋಷಣೆಯಾಗಿದೆ. ಜೋಶಿ ಅವರು ಧಾರವಾಡ ಕ್ಷೇತ್ರದಿಂದ ಐದನೇ ಬಾರಿ ಸ್ಪರ್ಧಿಸುತ್ತಿದ್ದು, ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೋಶಿ, ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಘೋಷಣೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಎಲ್ಲಾ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮೊದಲ ಬಾರಿಗೆ ಟಿಕೆಟ್ ಗಾಗಿ ತೀವ್ರ ಲಾಬಿ ನಡೆಸಿದ್ದಾರಂತೆ. 2004 ರಲ್ಲಿ ಅವರು ಮೊದಲ ಬಾರಿಗೆ ಸ್ಪರ್ಧಿಸಿದಾಗ ಅವರು ಬಹುಶಃ ಅಷ್ಟೊಂದು ಪ್ರಯತ್ನ ನಡೆಸಿರಲಿಲ್ಲ, ಏಕೆಂದರೆ ಅವರಿಗೆ ದಿವಂಗತ ಎಚ್‌ಎನ್ ಅನಂತಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರ ಬೆಂಬಲವಿತ್ತು. ಆದರೆ, ಈ ಬಾರಿ ಶೆಟ್ಟರ್ ಅವರೇ ಪ್ರಬಲ ಸ್ಪರ್ಧಿ ಎಂಬಂತೆ ಕಣಕ್ಕಿಳಿದಿದ್ದಾರೆ.

ಶೆಟ್ಟರ್ ಅವರು ಕಾಂಗ್ರೆಸ್‌ನಿಂದ ಹಿಂತಿರುಗುವವರೆಗೆ, ಕೆಲವು ಅತೃಪ್ತ ಧ್ವನಿಗಳನ್ನು ಹೊರತುಪಡಿಸಿದರೆ ಯಾರ ವಿರೋಧವೂ ಇರಲಿಲ್ಲ. ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರುಪ್ರವೇಶದೊಂದಿಗೆ ಲಿಂಗಾಯತರ ಲಾಬಿ ಆರಂಭವಾಯಿತು, ಸಾಮಾಜಿಕ ಜಾಲತಾಣಗಳೂ ಧಾರವಾಡದ ಲಿಂಗಾಯತ ಅಭ್ಯರ್ಥಿಯತ್ತ ಒಲವು ತೋರುತ್ತಿರುವುದು ಶೆಟ್ಟರ್‌ಗೆ ಪರೋಕ್ಷ ಬೆಂಬಲ ಸಿಕ್ಕಿದಂತಾಗಿದೆ.

ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ
ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ, ವದಂತಿಗಳಿಗೆ ಕಿವಿಗೊಡಬೇಡಿ: ಕಾರ್ಯಕರ್ತರಿಗೆ ಪ್ರಹ್ಲಾದ್ ಜೋಶಿ

2023 ರ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದ ಲಿಂಗಾಯತ ಮತದಾರರ ನೆಲೆಯು ಕುಸಿದಿದೆ ಎಂದು ಹೇಳಲಾಗುತ್ತಿದೆ. ಲಿಂಗಾಯತ ನಾಯಕರಾದ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರ ಕೈಬಿಟ್ಟಿದ್ದು ಸೋಲಿಗೆ ಕಾರಣ ಎಂದು ತರ್ಕಿಸಲಾಯಿತು. ಪಕ್ಷದ ಕೇಂದ್ರ ನಾಯಕತ್ವವೂ ಕ್ಷೇತ್ರದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರಿಕೆ ವಹಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಶೆಟ್ಟರನ್ನು ಪಕ್ಷಕ್ಕೆ ವಾಪಸ್ ಕರೆತರುವ ಹಿಂದೆ ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಪ್ರಯತ್ನವಿದೆ ಎಂದು ಹೇಳಲಾಗುತ್ತಿದ್ದು, ತಂದೆ-ಮಗ ಶೆಟ್ಟರ್ ಗೆ ಟಿಕೆಟ್ ಕೊಡಿಸಲು ಸಾಕಷ್ಚು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಹಾವೇರಿ ಅಥವಾ ಬೆಳಗಾವಿ ಭಾಗದಲ್ಲಿ ಶೆಟ್ಟರ್ ಪ್ರಭಾವ ಬಳಸಲು ಪಕ್ಷದ ಕೇಂದ್ರ ನಾಯಕತ್ವ ಹಿಂದೇಟು ಹಾಕಿತ್ತು. ಬೆಳಗಾವಿಗೆ ಪಕ್ಷವು ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ ಮತ್ತು ಶೆಟ್ಟರ್ ಅವರಿಗೆ ಅಲ್ಲಿಯೇ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ.

ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ
ವರಿಷ್ಠರು ತೀರ್ಮಾನಿಸಿದರೆ ಲೋಕಸಭೆಗೆ ಸ್ಪರ್ಧಿಸಲು ಸಿದ್ಧ; ಯಾವುದೇ ಕ್ಷೇತ್ರಕ್ಕೆ ಬೇಡಿಕೆಯಿಟ್ಟಿಲ್ಲ: ಜಗದೀಶ್​​ ಶೆಟ್ಟರ್​​

ಈ ನಡುವೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ-ಗದಗ ಕ್ಷೇತ್ರದಿಂದ ಟಿಕೆಟ್ ಘೋಷಣೆಯಾಗಿದ್ದು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಕಳೆದ ವರ್ಷ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ ಅವರಿಗೆ ಲೋಕಸಭೆ ಟಿಕೆಟ್ ನೀಡಲಾಗುತ್ತದೆ ಎಂದು ಊಹಿಸಲಾಗಿತ್ತು. ಹಾಲಿ ಸಂಸದ ಶಿವಕುಮಾರ ಉದಾಸಿ ಸ್ಪರ್ಧಿಸಲು ನಿರಾಕರಿಸಿದ್ದರಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನಿವಾರ್ಯವಾಗಿತ್ತು.

ಹಾಲಿ ಸಂಸದ ವೈ.ದೇವೇಂದ್ರಪ್ಪ ಅವರನ್ನು ಕೈಬಿಟ್ಟು ನಿರೀಕ್ಷೆಯಂತೆ ಬಳ್ಳಾರಿ-ಎಸ್‌ಟಿ ಮೀಸಲು ಕ್ಷೇತ್ರದಿಂದ ಮಾಜಿ ಸಚಿವ ಬಿ.ಶ್ರೀರಾಮುಲು ಕಣಕ್ಕಿಳಿದಿದ್ದು, ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನಿರಾಕರಿಸಿ ಡಾ.ಬಸವರಾಜ ಕವಟೂರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com