ಚಾಮರಾಜನಗರ ಲೋಕಸಭಾ ಟಿಕೆಟ್ ಕೈ ತಪ್ಪಿದ ಹಿನ್ನೆಲೆ: ಶ್ರೀನಿವಾಸ್ ಪ್ರಸಾದ್ ಅಳಿಯ ಕಾಂಗ್ರೆಸ್ ಸೇರ್ಪಡೆ?

ಡಜನ್‌ ಗಟ್ಟಲೇ ಆಕಾಂಕ್ಷಿಗಳಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ಕೊಳ್ಳೇಗಾಲದ ಮಾಜಿ ಶಾಸಕ ಎಸ್‌.ಬಾಲರಾಜ್‌ ಅವರಿಗೆ ಟಿಕೆಟ್‌ ಘೋಷಿಸಿದೆ.
ಶ್ರೀನಿವಾಸ್ ಪ್ರಸಾದ್
ಶ್ರೀನಿವಾಸ್ ಪ್ರಸಾದ್

ಚಾಮರಾಜನಗರ: ಡಜನ್‌ ಗಟ್ಟಲೇ ಆಕಾಂಕ್ಷಿಗಳಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ಕೊಳ್ಳೇಗಾಲದ ಮಾಜಿ ಶಾಸಕ ಎಸ್‌.ಬಾಲರಾಜ್‌ ಅವರಿಗೆ ಟಿಕೆಟ್‌ ಘೋಷಿಸಿದೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದ ಶ್ರೀನಿವಾಸ್ ಪ್ರಸಾದ್ ಅಳಿಯ ಡಾ. ಮೋಹನ್ ಗೆ ನಿರಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮೋಹನ್‌ ಅವರು ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಟಿಕೆಟ್‌ ನೀಡುವುದಾದರೆ ಕಾಂಗ್ರೆಸ್ ಸೇರುವುದಾಗಿ ಮೋಹನ್‌ ಮುಂದಾಗಿದ್ದಾರೆ ಎಂದೂ ಹೇಳಲಾಗಿದೆ. ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಶ್ರೀನಿವಾಸ ಪ್ರಸಾದ್‌ ಪ್ರಭಾವ ಗೆಲುವಿಗೆ ಬಳಸಿಕೊಳ್ಳಲು ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ.

ಶ್ರೀನಿವಾಸ್ ಪ್ರಸಾದ್
ಮಾರ್ಚ್ 17ಕ್ಕೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ: ವಿ ಶ್ರೀನಿವಾಸ್ ಪ್ರಸಾದ್

ಚಾಮರಾಜನಗರದಿಂದ ಮೋಹನ್ ಅವರಿಗೆ ಟಿಕೆಟ್‌ ನೀಡಿದರೆ ಎರಡೂ ಕ್ಷೇತ್ರಗಳಲ್ಲಿ ಮತ ಸೆಳೆಯಲು ಅವಕಾಶ ಆಗಬಹುದು ಎನ್ನುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ನಾಯಕರಿದ್ದಾರೆ. ಹೀಗಾಗಿ ಶ್ರೀನಿವಾಸ್ ಪ್ರಸಾದ್ ಅಳಿಯ ಮೋಹನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com