ಮಂಡ್ಯದಿಂದ ಮತ್ತೆ ನಿಖಿಲ್ ಸ್ಪರ್ಧೆಗೆ ಒಪ್ಪಿಸುತ್ತೇನೆ, ಮಾರ್ಚ್‌ 25ಕ್ಕೆ ಘೋಷಣೆ: ಎಚ್ ಡಿ ಕುಮಾರಸ್ವಾಮಿ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮತ್ತೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಮಾರ್ಚ್ 25ಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಮಂಡ್ಯದಲ್ಲಿ ನಡೆದ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ. ಮತ್ತೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಯನ್ನು ಒಪ್ಪಿಸುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ಧಕ್ಕೆ ತರುವುದಿಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮಾರ್ಚ್‌ 21ಕ್ಕೆ ನನಗೆ ಅಪರೇಷನ್ ಇದೆ. ಮಾರ್ಚ್‌ 25ಕ್ಕೆ ಇಲ್ಲಿಗೆ ಬಂದು ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ. ನಿಖಿಲ್ ಒಪ್ಪಿಸಲು ನಾನು ಮುಂದಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಎಚ್ ಡಿ ಕುಮಾರಸ್ವಾಮಿ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಿಂದ ಸ್ಪರ್ಧೆ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ: ಹೆಚ್ ಡಿ ಕುಮಾರಸ್ವಾಮಿ

ಈ ಬಾರಿ ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರವನ್ನ ಜೆಡಿಎಸ್ ಪಡೆದುಕೊಂಡಿದೆ. ಒಂದು ಕಾಲದಲ್ಲಿ ಜೆಡಿಎಸ್​ ಭದ್ರಕೋಟೆಯಾಗಿರುವ ಮಂಡ್ಯಕ್ಕೆ ಕಾಂಗ್ರೆಸ್ ಎಂಟ್ರಿಕೊಟ್ಟಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್​ 6 ಕ್ಷೇತ್ರದಲ್ಲಿ ಗೆಲುವುಸಾಧಿಸಿ ಪ್ರಾಬಲ್ಯ ಮೆರೆದಿದ್ದು, ಲೋಕಸಭೆ ಚುನಾವಣೆಯಲ್ಲೂ ಗೆಲುವು ಪಡೆಯುವ ಉತ್ಸಾಹದಲ್ಲಿದೆ. ಆದರೆ ಜೆಡಿಎಸ್​ ಮಂಡ್ಯವನ್ನು ಮತ್ತೆ ತಮ್ಮ ತೆಕ್ಕೆಗೆ ಪಡೆಯಲು ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಅದಕ್ಕಾಗಿಯೇ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿಯವರನ್ನು ಸ್ಪರ್ಧಿಸುವಂತೆ ಕಾರ್ಯಕರ್ತರು ಹಾಗೂ ಸ್ಥಳೀಯ ನಾಯಕರು ಮನವಿ ಮಾಡುತ್ತಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಈ ಹಿಂದೆ ನಾನು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಭಿಮಾನಿಗಳು, ನಾಯಕರು ನಿಖಿಲ್‌ ಸ್ಪರ್ಧೆಯ ಬಗ್ಗೆ ಒಲವು ವ್ಯಕ್ತಪಡಿಸುತ್ತಿರುವ ಕಾರಣ ಈಗ ಅವರ ನಿಲುವು ಏನು ಎನ್ನುವುದು ಸದ್ಯದ ಕುತೂಹಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com