ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಬೇಡಿ: ವರಿಷ್ಠರಿಗೆ ಬಿಜೆಪಿ ವಕ್ತಾರ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಸುಮಾರು ಐದು ವರ್ಷಗಳ ಕಾಲ ಕ್ಷೇತ್ರದಿಂದ ದೂರ ಉಳಿದುಕೊಂಡಿದ್ದ ಹೆಗಡೆ, ಚುನಾವಣೆಗೆ ಟಿಕೆಟ್ ಪಡೆಯುವ ಉದ್ದೇಶದಿಂದ ಏಕಾಏಕಿ ಸಕ್ರಿಯರಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಛಲವಾದಿ ನಾರಾಯಣಸ್ವಾಮಿ
ಛಲವಾದಿ ನಾರಾಯಣಸ್ವಾಮಿ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸೀಟು ಗೆದ್ದರೆ ಸಂವಿಧಾನ ಬದಲಿಸುತ್ತೇವೆ ಎಂಬ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ವಕ್ತಾರ, ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಹೆಗಡೆಗೆ ಲೋಕಸಭೆಯಲ್ಲಿ ಟಿಕೆಟ್ ನೀಡಬಾರದು ಎಂದು ಪಕ್ಷದ ಕೇಂದ್ರ ನಾಯಕರಿಗೆ ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯಲ್ಲಿದ್ದರೂ ಸಂವಿಧಾನ ಬದಲಿಸುವ ಯಾವುದೇ ಬಿಜೆಪಿ ನಾಯಕರ ಹೇಳಿಕೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ. ನನ್ನ ನಿಲುವಿನ ಬಗ್ಗೆ ನಾನು ತುಂಬಾ ಸ್ಪಷ್ಟವಾಗಿ ಮತ್ತು ದೃಢವಾಗಿದ್ದೇನೆ.

ಈ ಹಿಂದೆ ಹೆಗಡೆ ಅವರು ಇದೇ ರೀತಿಯ ಹೇಳಿಕೆಯನ್ನು ನೀಡಿದಾಗ ನಾನು ಅವರ ಹೇಳಿಕೆಯನ್ನು ಕಟುವಾಗಿ ವಿರೋಧಿಸಿದ್ದೇನೆ. ಇಂದು ಕೂಡ ನಾನು ನನ್ನ ನಿಲುವಿನಲ್ಲಿ ದೃಢವಾಗಿದ್ದೇನೆ ಎಂದು ಅವರು ಹೇಳಿದರು.

ಛಲವಾದಿ ನಾರಾಯಣಸ್ವಾಮಿ
ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಬೇಕು: ಸಂಸದ ಅನಂತ ಕುಮಾರ್ ಹೆಗಡೆ

ಸುಮಾರು ಐದು ವರ್ಷಗಳ ಕಾಲ ಕ್ಷೇತ್ರದಿಂದ ದೂರ ಉಳಿದುಕೊಂಡಿದ್ದ ಹೆಗಡೆ, ಚುನಾವಣೆಗೆ ಟಿಕೆಟ್ ಪಡೆಯುವ ಉದ್ದೇಶದಿಂದ ಏಕಾಏಕಿ ಸಕ್ರಿಯರಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ನಾರಾಯಣಸ್ವಾಮಿ, ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com