ಮಂಡ್ಯ ಅಭ್ಯರ್ಥಿ ಆಯ್ಕೆ: ಇಂದು ದೆಹಲಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ- ಅಮಿತ್ ಶಾ ಮತ್ತೊಂದು ಸುತ್ತಿನ ಮಾತುಕತೆ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದೆಂದು ನಿಶ್ಚಯವಾಗಿದೆ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ್ದ ಸಂದರ್ಭ(ಸಂಗ್ರಹ ಚಿತ್ರ)
ಹೆಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ್ದ ಸಂದರ್ಭ(ಸಂಗ್ರಹ ಚಿತ್ರ)
Updated on

ಬೆಂಗಳೂರು: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದೆಂದು ನಿಶ್ಚಯವಾಗಿದೆ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಇಂದು ಶನಿವಾರ ದೆಹಲಿಗೆ ತೆರಳಿದ್ದಾರೆ.

ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆ ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಂತಿಮವಾಗಿ ಮಾತುಕತೆ ನಡೆಸಿ ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯಿದೆ. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ಎಂದು ಈಗಾಗಲೇ ಘೋಷಿಸಿರುವ ಜೆಡಿಎಸ್ ಮಂಡ್ಯ ಮತ್ತು ಕೋಲಾರ ಅಭ್ಯರ್ಥಿ ಯಾರೆಂದು ಇನ್ನೂ ಘೋಷಣೆ ಮಾಡಿಲ್ಲ. ಮಂಡ್ಯದಿಂದ ಇಷ್ಟು ದಿನ ತಾನು ಮತ್ತು ಪುತ್ರ ನಿಖಿಲ್ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಿದ್ದ ಕುಮಾರಸ್ವಾಮಿ ಈಗ ಮನಸ್ಸು ಬದಲಿಸಿದಂತೆ ಕಾಣುತ್ತಿದೆ.

ಹೆಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ್ದ ಸಂದರ್ಭ(ಸಂಗ್ರಹ ಚಿತ್ರ)
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಿಂದ ಸ್ಪರ್ಧೆ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ: ಹೆಚ್ ಡಿ ಕುಮಾರಸ್ವಾಮಿ

ನಿನ್ನೆ ಮಂಡ್ಯದಲ್ಲಿ ನಡೆದ ಸಭೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ, ಕ್ಷೇತ್ರದ ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದು ಪುತ್ರ ನಿಖಿಲ್ ನ ಮನವೊಲಿಸುತ್ತೇನೆ ಎಂದು ಹೇಳಿದ್ದರು. ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನಿಂತರೆ ಅಚ್ಚರಿಯಿಲ್ಲ.

ಮಾರ್ಚ್ 25ಕ್ಕೆ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಘೋಷಣೆ: ಮಾರ್ಚ್‌ 21ಕ್ಕೆ ನನಗೆ ಅಪರೇಷನ್ ಇದೆ. ಮಾರ್ಚ್‌ 25ಕ್ಕೆ ಇಲ್ಲಿಗೆ ಬಂದು ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ. ನಿಖಿಲ್ ಒಪ್ಪಿಸಲು ನಾನು ಮುಂದಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಈ ಹಿಂದೆ ನಾನು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಭಿಮಾನಿಗಳು, ನಾಯಕರು ನಿಖಿಲ್‌ ಸ್ಪರ್ಧೆಯ ಬಗ್ಗೆ ಒಲವು ವ್ಯಕ್ತಪಡಿಸುತ್ತಿರುವ ಕಾರಣ ಈಗ ಅವರ ನಿಲುವು ಏನು ಎನ್ನುವುದು ಸದ್ಯದ ಕುತೂಹಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com