‘ಸುಮಲತಾ ನನ್ನ ಅಕ್ಕ ಇದ್ದಂತೆ; ಮಂಡ್ಯ ಕಳೆದುಕೊಂಡರೆ ನಾವು ಬದುಕಿದ್ದೂ ಸತ್ತಂತೆ': ಸಂಸದೆ ವಿರುದ್ಧ ಕದನ ವಿರಾಮ ಘೋಷಣೆ!

2019ರಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು. ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿ ಇದೆ. ನನ್ನ ಜನ್ಮ ಭೂಮಿ ಹಾಸನ. ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ. ನನ್ನ ಜೀವ ಮಿಡಿಯುವುದು ಮಂಡ್ಯಗಾಗಿ.
ಕುಮಾರಸ್ವಾಮಿ ಮತ್ತು ಸುಮಲತಾ
ಕುಮಾರಸ್ವಾಮಿ ಮತ್ತು ಸುಮಲತಾ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ನನ್ನ ಅಕ್ಕ ಇದ್ದಂತೆ, ರಾಜಕೀಯದಲ್ಲಿ ಆಗ ಏನೋ ಆಗಿತ್ತು. ನಮ್ಮಿಬ್ಬರ ನಡುವಿನ ಸಂಘರ್ಷವನ್ನು ಮುಂದುವರಿಸಿಕೊಂಡು ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಸಂಬಂಧ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಸಂಬಂಧ ಸಭೆ ಆಯೋಜನೆಗೊಂಡಿತ್ತು. ಈ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಕುಮಾರಸ್ವಾಮಿ. ಅಂಬರೀಶ್ ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು. ನಾನು ಸಿಎಂ ಆಗಿದ್ದಾಗಲೇ ರಾಜ್ ಕುಮಾರ್, ಅಂಬರೀಶ್ ನಿಧನರಾದರು.

ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ವ್ಯಕ್ತಿ. ಅಂಬರೀಶ್‌ಗೆ ಗೌರವ ನೀಡುವ ಮೂಲಕ ಮಂಡ್ಯದ ಜನರಿಗೂ ಗೌರವ ನೀಡಿದ್ದೇವೆ. ಸುಮಲತಾ ಅಂಬರೀಶ್ ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ‌ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ.
ಎಚ್.ಡಿ ಕುಮಾರಸ್ವಾಮಿ- ಮಾಜಿ ಮುಖ್ಯಮಂತ್ರಿ

ರಾಜ್ ಸಮಾಧಿ ಮಾಡಿದ್ದು ನಾನು. ಅಂಬರೀಶ್ ಸಮಾಧಿಗೂ ಜಾಗ ಗುರುತಿಸಿ, ಗೌರವ ಕೊಟ್ಟಿದ್ದೇನೆ. ವಿಷ್ಣುವರ್ಧನ್ ಸ್ಮಾರಕ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಆತನಿಗೆ ನಮನ ಸಲ್ಲಿಸಬೇಕಾಗಿದ್ದು ನಮ್ಮ ಕರ್ತವ್ಯ. ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ವ್ಯಕ್ತಿ. ಅಂಬರೀಶ್‌ಗೆ ಗೌರವ ನೀಡುವ ಮೂಲಕ ಮಂಡ್ಯದ ಜನರಿಗೂ ಗೌರವ ನೀಡಿದ್ದೇವೆ. ಸುಮಲತಾ ಅಂಬರೀಶ್ ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ‌ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ ಎಂಬ ಭರವಸೆಯನ್ನು ನೀಡಿದ್ದಾರೆ.

2019, 2023ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನತೆ ನಮಗೆ ಅನ್ಯಾಯ ಮಾಡಲಿಲ್ಲ. ಮಂಡ್ಯ ಜಿಲ್ಲೆಯ ಮತದಾರ ಬಂಧುಗಳೇ ನಮ್ಮ ತಂದೆ-ತಾಯಿಯಂದಿರು. ರಾಜಕೀಯವಾಗಿ ನಮ್ಮಿಂದ ಸಣ್ಣಪುಟ್ಟ ತಪ್ಪುಗಳಾಗಿರಬಹುದು. ಈ ಜಿಲ್ಲೆಯ ಜನತೆಗೆ ಸ್ಪಷ್ಟ ಮನವಿ ಮಾಡಲು ಬಯಸುತ್ತೇವೆ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ತಪ್ಪು ತಿದ್ದಿಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಕುಮಾರಸ್ವಾಮಿ ಮತ್ತು ಸುಮಲತಾ
ಮಂಡ್ಯ ಅಭ್ಯರ್ಥಿ ಆಯ್ಕೆ: ಇಂದು ದೆಹಲಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ-ಅಮಿತ್ ಶಾ ಮತ್ತೊಂದು ಸುತ್ತಿನ ಮಾತುಕತೆ

ಮಂಡ್ಯ ಜಿಲ್ಲೆಯ ಜನರ ಜೊತೆ ಮೊದಲಿಂದಲೂ ನಾನು ಇದ್ದೇನೆ. 2019ರಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು. ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿ ಇದೆ. ನನ್ನ ಜನ್ಮ ಭೂಮಿ ಹಾಸನ. ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ. ನನ್ನ ಜೀವ ಮಿಡಿಯುವುದು ಮಂಡ್ಯಗಾಗಿ. ಮಂಡ್ಯ ಕಳೆದು ಕೊಂಡರೆ ಬದುಕಿದ್ದರೂ ಸತ್ತಂತ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

2019ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್, ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಭಿಮಾನದ ಕಹಳೆ ಮೊಳಗಿಸಿದ್ದರು. ಇತ್ತ ಜೆಡಿಎಸ್​​ನಿಂದ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್​ರನ್ನು ಚುನಾವಣೆಯಲ್ಲಿ ನಿಲ್ಲಿಸಿದ್ದರು. ಇಲ್ಲಿಂದ ಸುಮಲತಾ ಮತ್ತು ಕುಮಾರಸ್ವಾಮಿ ನಡುವೆ ಜಿದ್ದಾಜಿದ್ದಿ ಶುರುವಾಗಿತ್ತು. ಲೋಕಸಭೆ ಚುನಾವಣೆ ಮುಗಿದ ನಂತರವೂ ಮಂಡ್ಯ ಕ್ಷೇತ್ರದ ವಿಚಾರವಾಗಿ ಪರಸ್ಪರ ಕೆಸರೆರಚಾಟ ನಡೆಸಿಕೊಂಡು ಬರುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com