ಪ್ರಭಾವಿ ಆಕಾಂಕ್ಷಿತರ ಹೆಚ್ಚಿದ ಒತ್ತಡ: ಬೆಳಗಾವಿ-ಚಿಕ್ಕೋಡಿ ಲೋಕಸಭಾ ಕೈ-ಕಮಲ ಟಿಕೆಟ್ ಯಾರಿಗೆ?

ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಂದ ಪಕ್ಷದ ಟಿಕೆಟ್‌ಗಾಗಿ ಹಲವು ಪ್ರಭಾವಿ ಆಕಾಂಕ್ಷಿಗಳ ತೀವ್ರ ಒತ್ತಡ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಂದ ಪಕ್ಷದ ಟಿಕೆಟ್‌ಗಾಗಿ ಹಲವು ಪ್ರಭಾವಿ ಆಕಾಂಕ್ಷಿಗಳ ತೀವ್ರ ಒತ್ತಡ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಬಿಜೆಪಿ ಹೆಸರಿಸಿದ್ದರೂ ಬೆಳಗಾವಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಬಿ ಎಸ್ ಯಡಿಯೂರಪ್ಪ ಮತ್ತು ಬಿ ವೈ ವಿಜಯೇಂದ್ರ ಅವರ ಜೊತೆ ಮಾತುಕತೆ ನಡೆಸಿ ವಾಪಸ್ಸಾದ ನಂತರ ಹುಬ್ಬಳ್ಳಿಯಲ್ಲಿ ನಿನ್ನೆ ಮಾತನಾಡಿದ್ದ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸುವ ಕೇಂದ್ರ ನಾಯಕರ ಸಲಹೆಗೆ ಒಪ್ಪಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ, ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಕಾಂಗ್ರೆಸ್ ನಾಯಕರು ಹಗ್ಗ ಜಗ್ಗಾಟದಲ್ಲಿ ತೊಡಗಿದ್ದು, ಟಿಕೆಟ್‌ಗಾಗಿ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಆದರೆ, ಎರಡೂ ಕ್ಷೇತ್ರಗಳಲ್ಲಿ ಹೊಸ ಮುಖ ಅಥವಾ ಯುವ ನಾಯಕರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಉತ್ಸುಕವಾಗಿಲ್ಲ. ಆದರೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕ್ರಮವಾಗಿ ಚಿಕ್ಕೋಡಿ ಮತ್ತು ಬೆಳಗಾವಿ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಉತ್ಸುಕರಾಗಿದ್ದಾರೆ.

ಜಗದೀಶ್ ಶೆಟ್ಟರ್
ಬೇಡ ಎಂದರೂ ಬೆಳಗಾವಿ ಕ್ಷೇತ್ರಕ್ಕೆ ಜಗದೀಶ್ ಶೆಟ್ಟರ್‌ ಫಿಕ್ಸ್? ಮಾತುಕತೆ ವೇಳೆ ಶೆಟ್ಟರ್​ಗೆ BSY ಕೊಟ್ಟ ಅಭಯವೇನು?

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸತೀಶ್ ಜಾರಕಿಹೊಳಿ ಅವರ ಅನೇಕ ಸಂಗಡಿಗರು ನಿನ್ನೆ ಗೋಕಾಕ್‌ನಲ್ಲಿರುವ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿ ತಮ್ಮ ಬೆಂಬಲದ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ. ಮಧ್ಯಾಹ್ನ ರಾಯಬಾಗದಲ್ಲಿ ಕಾಂಗ್ರೆಸ್ ಮುಖಂಡರ ಸಭೆ ನಡೆಸಿ, ಪ್ರಿಯಾಂಕಾಗೆ ಬೆಂಬಲ ಸೂಚಿಸಿದರು.

ಚಿಕ್ಕೋಡಿಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಬಿಜೆಪಿ ಹಾಗೂ ಐವರು ಕಾಂಗ್ರೆಸ್‌ ಶಾಸಕರಿದ್ದಾರೆ. ಆದರೆ ಪ್ರಿಯಾಂಕಾ ಹೆಸರನ್ನು ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಕಾಂಗ್ರೆಸ್ ಟಿಕೆಟ್‌ಗಾಗಿ ಚಿಕ್ಕೋಡಿಯಿಂದ ಇತರ ಪ್ರಬಲ ಆಕಾಂಕ್ಷಿಗಳೆಂದರೆ ಲಕ್ಷ್ಮಣರಾವ್ ಚಿಂಗಳೆ ಮತ್ತು ಪ್ರಕಾಶ ಹುಕ್ಕೇರಿ.

ಬೆಳಗಾವಿ ಸ್ಥಾನಕ್ಕೆ ವಕೀಲ ಮೋಹನ್ ಕಾತರಕಿ, ಡಾ.ಗಿರೀಶ್ ಸೋನವಾಲ್ಕರ್, ವಿನಯ್ ನಾವಲಗಟ್ಟಿ ಮತ್ತು ಕಿರಣ್ ಸಾಶುನವರ್ ಅವರಂತಹ ಅನೇಕ ಹೊಸ ಮುಖಗಳು ಕಾಂಗ್ರೆಸ್ ಟಿಕೆಟ್‌ಗಾಗಿ ರೇಸ್‌ನಲ್ಲಿದ್ದರೂ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ.

ಬೆಳಗಾವಿಯಿಂದ ಶೆಟ್ಟರ್ ಬಿಜೆಪಿ ಅಭ್ಯರ್ಥಿಯಾಗುವ ನಿರೀಕ್ಷೆಯಿದ್ದು, ಕಾಂಗ್ರೆಸ್ ನಾಯಕತ್ವವು ‘ಗೆಲುವು’ ಅಂಶದ ಮೇಲೆ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಗಂಭೀರವಾಗಿ ಚಿಂತನೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com