ಮಾರ್ಚ್ 20ರಂದು ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ: ಡಿ ಕೆ ಶಿವಕುಮಾರ್

ಲೋಕಸಭೆ ಚುನಾವಣೆ 2024ಕ್ಕೆ ದಿನಾಂಕ ನಿಗದಿಯಾಗಿದೆ. ಮಾ.20ರಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ದಿನಾಂಕ ನಿಗದಿಯಾಗಿದೆ. ಮಾ.20ರಂದು ಕಾಂಗ್ರೆಸ್​ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮಾರ್ಚ್​​ 19ರಂದು ಸಭೆ ಇದ್ದು ಅಂದೇ ತೀರ್ಮಾನ ಮಾಡುತ್ತೇವೆ. 20ರಂದು ಘೋಷಣೆ ಮಾಡುತ್ತೇವೆ ಎಂದರು. ಇಂದು ಭಾರತ್ ಜೋಡೋ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯುತ್ತಿದೆ. ನಾವೆಲ್ಲ ಆ ಕಾರ್ಯಕ್ರಮಕ್ಕೆ ಮುಂಬೈಗೆ ಹೋಗುತ್ತಿದ್ದೇವೆ. ಶಿವಾಜಿ ಪಾರ್ಕ್​​ನಲ್ಲಿ ಕಾರ್ಯಕ್ರಮ ಇದೆ. ಹೀಗಾಗಿ ಮಾ. 20ರಂದು ಘೋಷಣೆ ಮಾಡುತ್ತೇವೆ ಎಂದರು.

ಗ್ಯಾರಂಟಿ ಸಮಿತಿಗೆ ನೇಮಕ: ಗ್ಯಾರಂಟಿ ಅಧ್ಯಕ್ಷರನ್ನು ಪ್ರತಿ ತಾಲೂಕಿನಲ್ಲಿ ಮಾಡಿದ್ದೇವೆ. ಮಾರ್ಚ್ 21 ರಂದು ಸಭೆ ಕರೆಯಬೇಕು ಎಂದು ತೀರ್ಮಾನ ಮಾಡಿದ್ದೇವೆ. ಸರ್ಕಾರ ಯಾರನ್ನೆಲ್ಲ ಗ್ಯಾರಂಟಿ ಸಮಿತಿಗೆ ನೇಮಕ ಮಾಡಿದೆ ಅವರನೆಲ್ಲ ನಾವು ಇಲ್ಲಿಗೆ ಕರಿಯುತ್ತೇವೆ. ಅವರಿಗೆಲ್ಲಾ ಚುನಾವಣೆ ಜವಾಬ್ದಾರಿ ಕೊಡುತ್ತೇವೆ. ಈ ಚುನಾವಣೆಯಲ್ಲಿ ನಾಮಿನೇಶನ್ ಮಾಡುವುದು ಅಷ್ಟೆ ಅಲ್ಲಾ, ಪಕ್ಷಕ್ಕೂ ದುಡಿಯಬೇಕು ಎಂದರು.

ಇತ್ತಿಚೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿತ್ತು. ಕರ್ನಾಟಕದ 7 ಲೋಕಸಭಾ ಕ್ಷೇತ್ರಗಳು ಸೇರಿ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿ.ಕೆ.ಸುರೇಶ್, ಶಿವಮೊಗ್ಗದಿಂದ ಗೀತಾ ಶಿವರಾಜ್​ಕುಮಾರ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಬಿಜೆಪಿ ತೊರೆದು ಬಂದ ಮುದ್ದ ಹನುಮೇಗೌಡರಿಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಆಗಿದೆ. ಮಂಡ್ಯದಲ್ಲಿ ಸ್ಟಾರ್​ ಚಂದ್ರು, ವಿಜಯಪುರದಲ್ಲಿ ರಾಜು ಅಲಗೂರಗೆ ಟಿಕೆಟ್ ನೀಡಲಾಗಿದೆ. ಹಾವೇರಿಯಿಂದ ಆನಂದ್ ಗಡ್ಡದೇವರ ಮಠ, ಹಾಸನದಿಂದ ಶ್ರೇಯಸ್ ಪಟೇಲ್​ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com