ರಾಜ ಪರಿವಾರದ ವಿರುದ್ಧ ಹುರಿಯಾಳು ಯಾರು? ಗುಟ್ಟು ಬಿಡದ ನಾಯಕರು; ಯತೀಂದ್ರ ಸ್ಪರ್ಧಿಸಲ್ಲ- ಸಿದ್ದರಾಮಯ್ಯ

ಈ ನಡುವೆ ಮೈಸೂರು-ಕೊಡಗು ಮತ್ತು ಚಾಮರಾಜನಗರದಲ್ಲಿ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ಸವಾಲಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಧಿಕಾರ ನೀಡಲಾಗಿದೆ
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲುಮಾರ್ಚ್ 19 ರಂದು ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ಸೇರಲಿದ್ದು,ಅಂತಿಮ ಪಟ್ಟಿಯಲ್ಲಿರುವ ಆಕಾಂಕ್ಷಿಗಳ ಬಗ್ಗೆ ಪಕ್ಷದ ಹೈಕಮಾಂಡ್ ಮೊದಲ ಮಾಹಿತಿ ಸಂಗ್ರಹಿಸಲು ಪ್ರಾರಂಭಿಸಿದೆ.

ಪಕ್ಷದ ಟಿಕೆಟ್ ಪಡೆಯಲು ಹಲವು ಆಕಾಂಕ್ಷಿಗಳು ಲಾಬಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಚಾನ್ಸ್ ತೆಗೆದುಕೊಳ್ಳುವ ಮನಸ್ಥಿತಿಯಲ್ಲಿಲ್ಲ, ಆದ್ದರಿಂದ ಹಾಲಿ ಮತ್ತು ಮಾಜಿ ಶಾಸಕರು ಆಕಾಂಕ್ಷಿಗಳ ಅಭಿಪ್ರಾಯಗಳನ್ನು ಸಂಗ್ರಹಿಸುವಂತೆ ಸೂಚಿಸಿದೆ.

ಕೇಂದ್ರ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳನ್ನು ಕರೆಯುವ ಮೊದಲು ಸ್ಥಳೀಯ ಮುಖಂಡರ ಅಭಿಪ್ರಾಯಗಳನ್ನು ಪರಿಗಣಿಸಲು ಬಯಸಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಅರ್ಹ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನಿರಾಕರಿಸದಂತೆ ಪ್ರದೇಶ ಕಾಂಗ್ರೆಸ್ ಸಮಿತಿಯು ಆಂತರಿಕ/ಗೌಪ್ಯ ವರದಿಗಳನ್ನು ಸಿಇಸಿ ಮುಂದೆ ಮಂಡಿಸಲಿದೆ ಎಂದು ಎಐಸಿಸಿ ಮೂಲಗಳು ಖಚಿತಪಡಿಸಿವೆ. ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಯ ಬಗ್ಗೆ ಒಮ್ಮತವಿಲ್ಲದಿದ್ದರೆ ಸಿಇಸಿ ಬೇರೆ ಆಕಾಂಕ್ಷಿಗಳ ವಿವರಗಳನ್ನು ಹುಡುಕಬಹುದು ಮತ್ತು ಹೊಸ ಮುಖವನ್ನು ಆಯ್ಕೆ ಮಾಡಬಹುದು ಎಂದು ಹೇಳಲಾಗಿದೆ.

ಈ ನಡುವೆ ಮೈಸೂರು-ಕೊಡಗು ಮತ್ತು ಚಾಮರಾಜನಗರದಲ್ಲಿ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ಸವಾಲಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಧಿಕಾರ ನೀಡಲಾಗಿದೆ.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಚಾಮರಾಜನಗರದಿಂದ ಸ್ಪರ್ಧಿಸಲು ನಿರಾಕರಿಸಿದ್ದಾರೆ, ಆಕಾಂಕ್ಷಿಗಳ ಪಟ್ಟಿಯಲ್ಲಿ ಅವರ ಪುತ್ರ ಸುನೀಲ್ ಬೋಸ್, ಮಾಜಿ ಶಾಸಕ ನಂಜುಂಡಸ್ವಾಮಿ, ಮಾಜಿ ಸಂಸದ ಎಂ.ಶಿವಣ್ಣ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಇದ್ದಾರೆ. ಹಾಲಿ ಬಿಜೆಪಿ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರ ಅಳಿಯ ಮೋಹನ್ ಕುಮಾರ್ ಅವರು ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಮೈಸೂರು-ಕೊಡಗಿನಲ್ಲಿ ತಮ್ಮ ಪುತ್ರ ಡಾ.ಯತೀಂದ್ರ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿರುವ ಸಿದ್ದರಾಮಯ್ಯ, ಒಕ್ಕಲಿಗ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಮತ್ತು ಮೈಸೂರು ಕಾಂಗ್ರೆಸ್ ಮುಖ್ಯಸ್ಥ ಬಿಜೆ ವಿಜಯ್ ಕುಮಾರ್ ಎಂಬ ಇಬ್ಬರ ಹೆಸರನ್ನು ಕೆಪಿಸಿಸಿ ಶಿಫಾರಸು ಮಾಡಿದೆ.

ಸಿದ್ದರಾಮಯ್ಯ
ಮೈಸೂರು: ಯದುವೀರ್ ಗೆಲುವಿಗೆ ಶ್ರಮಿಸಲು ಜೆಡಿಎಸ್ ಶಪಥ!

ಸಿಎಂ ತವರು ಜಿಲ್ಲೆ ಮೈಸೂರು ಪ್ರತಿಷ್ಠಿತ ಕ್ಷೇತ್ರವಾಗಿದ್ದು ಗೆಲ್ಲಲೇ ಬೇಕೆಂಬ ಪಣ ತೊಟ್ಟಿದ್ದಾರೆ. ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಹಾಲಿ ಶಾಸಕರಿಂದಲೂ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಮೈಸೂರು ರಾಜವಂಶಸ್ಥ ಯದುವಿರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿರುವುದು ಸಿದ್ದರಾಮಯ್ಯಗೆ ತಲೆನೋವಾಗಿದೆ, ಇಲ್ಲಿಯವರೆಗೂ ಮೈಸೂರು ಕ್ಷೇತ್ರದ ಅಭ್ಯರ್ಥಿ ಯಾರು ಎಂಬ ಬಗ್ಗೆ ಕಾಂಗ್ರೆಸ್ ಮುಖಂಡರು ಎಲ್ಲಿಯೂ ಗುಟ್ಟು ಬಿಟ್ಟುಕೊಟ್ಟಿಲ್ಲ.

ಸಿದ್ದರಾಮಯ್ಯ
ಕೊಡಗಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಪರಿಹರಿಸಲು ನನ್ನ ಅನುಭವ ಬಳಸಿಕೊಳ್ಳುತ್ತೇನೆ: ಯದುವೀರ್ ಒಡೆಯರ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com