ಲೋಕಸಭೆ ಚುನಾವಣೆಯಲ್ಲಿ 50 ಸ್ಥಾನ ಗೆದ್ದು ತೋರಿಸಿ: ಕಾಂಗ್ರೆಸ್'ಗೆ ಬೊಮ್ಮಾಯಿ ಸವಾಲು

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ಧೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ.
ಬೊಮ್ಮಾಯಿ
ಬೊಮ್ಮಾಯಿ
Updated on

ಹಾವೇರಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ಧೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶ್ನಿಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದ ಹಾನಗಲ್‌ನಲ್ಲಿ ಕುಮಾರಸ್ವಾಮಿ ಮಠದ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗಾಗಿ ಇಟ್ಟ ಹಣವನ್ನ ಗ್ಯಾರಂಟಿಗೆ ಹಾಕಿದ್ದಾರೆ. ಮತ್ತೆ ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಭಾಷಣ ಮಾಡುತ್ತಾರೆ ಎಂದು ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

ಜಾತಿ ಗಣತಿ ಬಹಿರಂಗ ಪಡಿಸುತ್ತೇನೆಂದು ಹೇಳಿದ್ದರು. ಹೊರಗಡೆ ಬಂತೇ? ಕಾತರಾಜ್ ವರದಿ ತೆಗೆದುಕೊಂಡಿದ್ದಾರೆ. ಬಹಿರಂಗ ಪಡಿಸಿ. ಚುನಾವಣೆ ಲಾಭಕ್ಕಾಗಿ ವರದಿ ತೆಗೆದುಕೊಂಡಿದ್ದು ಜನರಿಗೆ ಗೊತ್ತಿದೆ. ಮೇಲ್ವರ್ಗದ ಜನರು ಕಾತರಾಜ್ ವರದಿ ವಿರೋಧ ಮಾಡಿದರು. ಈಗ ಆ ವರದಿ ರಾಜ್ಯ ಸರ್ಕಾರ ಬಹಿರಂಗಪಡಿಸುತ್ತಿಲ್ಲ. ಜಾತಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಕಿಡಿಕಾರಿದರು.

ಎಸಿ ಎಸ್ಟಿ ಜನರಿಗೆ ಮೀಸಲಾತಿ ಹೆಚ್ಚು ಮಾಡಿದ್ದು ನಾನು ಸಿಎಂ ಇದ್ದಾಗ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಗೆ ಒಂದು ಬಾರಿ ಮೋಸ ಮಾಡಬಹುದು. ಪದೇ ಪದೇ ಜನರಿಗೆ ಮೋಸ ಮಾಡಲು ಸಾಧ್ಯವಿಲ್ಲ. ಸಬ್ ಕಾ ಸಾಥ್ ಬಸ್ ಕಾ ವಿಕಾಸ ಅಂತಾ ನಾವೂ ಇದ್ದೇವೆ. ಕರ್ನಾಟಕದ 57 ಲಕ್ಷ ಕುಟುಂಬಗಳಿಗೆ 14 ಸಾವಿರ ಕೋಟಿ ರೈತರ ಕುಟುಂಬಕ್ಕೆ ಕಿಸಾನ್ ಸಮ್ಮಾನ್ ಹಣ ಕೇಂದ್ರ ಸರ್ಕಾರ ನೀಡಿದೆ. ಅನ್ನಭಾಗ್ಯ ಅಂತ ಹೇಳುತ್ತಾರೆ. ಒಂದು ಕಾಳು ಅಕ್ಕಿಯನ್ನೂ ರಾಜ್ಯ ಸರ್ಕಾರ ನೀಡುತ್ತಿಲ್ಲ. 1 ಕೋಟಿ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ 5 ಕೆಜೆ ಅಕ್ಕಿ ಬರುತ್ತಿದೆ. 11 ಲಕ್ಷ ಮನೆಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ನೀಡಲಾಗಿದೆ. ಕೇಂದ್ರ ಸರ್ಕಾರ ನಾಲ್ಕು ವರ್ಷದಲ್ಲಿ ಜನರಿಗೆ ವಿವಿಧ ಯೋಜನೆ ನೀಡಿದೆ. 30 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಯೋಜನೆ ನೀಡಿದೆ. ದೇಶದಲ್ಲಿ ಶರವೇಗದಲ್ಲಿ ನ್ಯಾಷನಲ್ ಹೈವೆಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.

ಬೊಮ್ಮಾಯಿ
2024 ಲೋಕಸಭೆ ಚುನಾವಣೆ: ಕಾಂಗ್ರೆಸ್‌ಗೆ ಸೋಲುವ ಭಯ, ಅಭ್ಯರ್ಥಿಗಳೇ ಸಿಗುತ್ತಿಲ್ಲ- ಬಸವರಾಜ ಬೊಮ್ಮಾಯಿ

ಪ್ರತಿ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂ. ಕೊಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ‌. ಬೋಗಸ್ ಗ್ಯಾರಂಟಿಗಳನ್ನು ಕಾಂಗ್ರೆಸ್ ನಾಯಕರು ನೀಡುತ್ತಾರೆ. ಅವರು ಅಧಿಕಾರಕ್ಕೆ ಬರುವುದಿಲ್ಲ ಅದಕ್ಕಾಗಿಯೇ ಈ ರೀತಿಯ ಯೋಜನೆ ಘೋಷಣೆ ಮಾಡುತ್ತಾರೆ ಎಂದರು.

ಇದೇ ವೇಳೆ ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ಬಗ್ಗೆ ಮಾತನಾಡಿದ ಬೊಮ್ಮಾಯಿ ಅವರು, ಪಕ್ಷದ ರಾಷ್ಟ್ರೀಯ ನಾಯಕರು ಸಂಪರ್ಕದಲ್ಲಿದ್ದಾರೆ. "ನಮ್ಮ ರಾಷ್ಟ್ರೀಯ ನಾಯಕರು ಈಶ್ವರಪ್ಪ ಅವರೊಂದಿಗೆ ಮಾತನಾಡುತ್ತಿದ್ದಾರೆ ಮತ್ತು ಯಾವುದೇ ಕಠಿಣ ನಿರ್ಧಾರ ತೆಗೆದುಕೊಳ್ಳದಂತೆ ಅವರಿಗೆ ಮನವರಿಕೆ ಮಾಡಿಕೊಡಲಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com