ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ: ನಳಿನ್ ಕುಮಾರ್ ಕಟೀಲ್ ಭವಿಷ್ಯ

ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳೊಳಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಮಂಗಳೂರು: ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳೊಳಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದರು.

ಪದಾಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷವು ಎಲ್ಲಾ ಹಂತದ ಚುನಾವಣಾ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಬಿಜೆಪಿ ಶಕ್ತಿ ಕೇಂದ್ರ ಮತ್ತು ಮಹಾಶಕ್ತಿ ಕೇಂದ್ರದ ಸಭೆಗಳೂ ಪೂರ್ಣಗೊಂಡಿವೆ. ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಒಂದು ಸುತ್ತಿನ ಭೇಟಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಹೇಳಿದರು.

ಮುಂದಿನ 40 ದಿನಗಳ ಯೋಜನೆಯನ್ನು ರೂಪಿಸಲು ಸಭೆಯನ್ನು ನಡೆಸಲಾಗುವುದು. ಹಿಂದಿನ ದಾಖಲೆಗಳನ್ನು ಮುರಿದು ಕ್ಯಾಪ್ಟನ್ ಚೌಟಾ ಅವರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಹೊಸ ಮುಖಗಳಿಗೆ ಪಕ್ಷ ಅವಕಾಶ ನೀಡಿದರೆ ಸ್ವಾಗತಿಸುತ್ತೇನೆ: ನಳಿನ್ ಕುಮಾರ್ ಕಟೀಲ್

ಕೆಎಸ್ ಈಶ್ವರಪ್ಪ ಅವರ ಕುರಿತ ಪ್ರಶ್ನೆಗೆ ಉತ್ತರಿಸಿ, ಪಕ್ಷದ ಹಿರಿಯ ನಾಯಕರು ಶೀಘ್ರದಲ್ಲೇ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.

ದ.ಕ.ಜಿಲ್ಲೆಯಲ್ಲಿ ಬಿಜೆಪಿಯೊಳಗಿನ ಭಿನ್ನಮತದ ಕುರಿತು ಮಾತನಾಡಿ, ಪಕ್ಷಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಎಲ್ಲಾ ಸಣ್ಣಪುಟ್ಟ ಸಮಸ್ಯೆಗಳನ್ನು ನಾವು ನಿವಾರಿಸುತ್ತೇವೆ, ಭಾರತ ಮಾತೆಗಾಗಿ ಎಲ್ಲಾ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಮತ್ತು ಪ್ರಧಾನಿ ಮೋದಿಯವರ ಗೆಲುವಿಗೆ ಶ್ರಮಿಸುತ್ತಾರೆ ಎಂದರು.

ನಾನು ಪಕ್ಷದ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೇನೆ, ನಾನು ನಮ್ಮ ಕ್ಷೇತ್ರಕ್ಕಾಗಿ ಹೆಚ್ಚಿನ ಸಮಯವನ್ನು ಮೀಸಲಿಡುತ್ತೇನೆಯ ಪಕ್ಷದ ಹಿರಿಯ ನಾಯಕರ ನಿರ್ದೇಶನದಂತೆ ಕೇರಳದಲ್ಲಿಯೂ ಕೆಲಸ ಮಾಡುತ್ತೇನೆ. ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಚೌಟಾ ಅವರ ಗೆಲುವಿಗೆ ಶ್ರಮಿಸುತ್ತೇನೆ ಮತ್ತು ದಕ್ಷಿಣ ಕನ್ನಡದಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರ ಗೆಲ್ಲುವಂತೆ ನೋಡಿಕೊಳ್ಳುತ್ತೇನೆ ಎಂದು ಹೇಳಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com