ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರಿಗೆ ಆಮಿಷ; ಕಾಂಗ್ರೆಸ್ ನಿಂದ ಕುಕ್ಕರ್ ವಿತರಣೆ: HD ಕುಮಾರಸ್ವಾಮಿ ಆರೋಪ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಕಾಂಗ್ರೆಸ್ ನಿಂದ ಕುಕ್ಕರ್ ಆಮಿಷವೊಡ್ಡಲಾಗುತ್ತಿದೆ ಎಂದು ಮಂಗಳವಾರ ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಕ್ಷೇತ್ರದಲ್ಲಿ ನ್ಯಾಯಯುತ ಮತದಾನಕ್ಕಾಗಿ ಅರಸೇನಾ ಪಡೆ ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಫೋಟೋಗಳನ್ನು ತೋರಿಸಿದ ಹೆಚ್.ಡಿ.ಕುಮಾರಸ್ವಾಮಿ
ಸುದ್ದಿ ಗೋಷ್ಠಿಯಲ್ಲಿ ಫೋಟೋಗಳನ್ನು ತೋರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾರರಿಗೆ ಕಾಂಗ್ರೆಸ್ ನಿಂದ ಕುಕ್ಕರ್ ಆಮಿಷವೊಡ್ಡಲಾಗುತ್ತಿದೆ ಎಂದು ಮಂಗಳವಾರ ಆರೋಪಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಕ್ಷೇತ್ರದಲ್ಲಿ ನ್ಯಾಯಯುತ ಮತದಾನಕ್ಕಾಗಿ ಅರಸೇನಾ ಪಡೆ ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನ್ಯಾಯಯುತವಾಗಿ ಚುನಾವಣೆ ನಡೆಸಲು ಧೈರ್ಯವಿಲ್ಲದ ಜಿಲ್ಲಾಧಿಕಾರಿ, ಸಿಇಒ ಹಾಗೂ ಎಸ್ ಪಿಯನ್ನು ತೆಗೆದುಹಾಕಬೇಕು ಎಂದು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದರು.

ಈಗಾಗಲೇ ಒಂದು ಸುತ್ತಿನ ಕುಕ್ಕರ್, ಸೀರೆ ಸೇರಿದಂತೆ ಇತರೆ ವಸ್ತುಗಳ ವಿತರಣೆ ಪೂರ್ಣಗೊಂಡಿದೆ ಎಂದು ಅವರು ಆರೋಪಿಸಿದರು. ಮತದಾರರಿಗೆ ಕುಕ್ಕರ್ ವಿತರಿಸುತ್ತಿರುವ ವಿಡಿಯೋಗಳು ಮತ್ತು ಫೋಟೋಗಳನ್ನು ತೋರಿಸಿದ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಒಂದೆಡೆ ಅಧಿಕಾರ ದುರುಪಯೋಗ, ಮತ್ತೊಂದೆಡೆ ಹಣಬಲ, ಅಧಿಕಾರಿಗಳ ನೆರವಿನಿಂದ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಮುಂದಾಗಿದೆ. ಈ ಬಗ್ಗೆ ಪರಿಶೀಲಿಸುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸುವುದಾಗಿ ತಿಳಿಸಿದರು.

ಕಾಂಗ್ರೆಸ್ ನಿಜವಾಗಿಯೂ ಬಡವರಿಗಾಗಿ ಕೆಲಸ ಮಾಡಿದ್ದರೆ ಮತ್ತು ಕಳೆದ ಒಂದು ವರ್ಷದಲ್ಲಿನ ಅವರ ಕಾರ್ಯಕ್ರಮಗಳನ್ನು ಜನರು ಮೆಚ್ಚಿದ್ದಾರೆ ಎಂಬ ವಿಶ್ವಾಸ ಅವರಿಗಿದ್ದರೆ, ಅಕ್ರಮವಾಗಿ ಚುನಾವಣೆಗೆ ಯಾಕೆ ಮುಂದಾಗಿದ್ದಾರೆ?

- ಎಚ್ ಡಿ ಕುಮಾರಸ್ವಾಮಿ

“ಈ ರಾಜ್ಯದಲ್ಲಿ ಚುನಾವಣಾ ಆಯೋಗವಿದೆಯೇ? ಡಿಸಿ ಮತ್ತು ಎಸ್‌ಪಿ ಇದ್ದಾರೆಯೇ? ಚುನಾವಣಾ ಆಯೋಗ ಏನು ಮಾಡುತ್ತಿದೆ? ಚುನಾವಣೆ ಘೋಷಣೆಯಾದ ನಂತರ ಬೆಂಗಳೂರು ಗ್ರಾಮಾಂತರ ಸಂಸದೀಯ ಭಾಗದಲ್ಲಿ ಏನಾಗುತ್ತಿದೆ? ಎಂದು ಪ್ರಶ್ನಿಸಿದರು. ಈ ಬಗ್ಗೆ ಪರಿಶೀಲಿಸುವಂತೆ ಮುಖ್ಯ ಚುನಾವಣಾ ಆಯುಕ್ತರನ್ನು ಒತ್ತಾಯಿಸುವುದಾಗಿ ಹೇಳಿದರು. ಒಕ್ಕಲಿಗ ಪ್ರಾಬಲ್ಯವಿರುವ ಈ ಭಾಗದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ, ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಸಿ ಎನ್ ಮಂಜುನಾಥ್ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಫೋಟೋಗಳನ್ನು ತೋರಿಸಿದ ಹೆಚ್.ಡಿ.ಕುಮಾರಸ್ವಾಮಿ
ದೇವೇಗೌಡರ ಸುದೀರ್ಘ ರಾಜಕೀಯ ಇತಿಹಾಸಕ್ಕೆ ಕೊಳ್ಳಿ ಇಟ್ಟರು; ನನಗೆ ವಿಷ ಹಾಕಿದರು: ಡಿಕೆಶಿ ವಿರುದ್ಧ HDK ವಾಗ್ದಾಳಿ

ಬೆಂಗಳೂರು ಗ್ರಾಮಾಂತರದಲ್ಲಿ ಕುಕ್ಕರ್, ಸೀರೆ ವಿತರಣೆ ಕುರಿತು ಕರ್ನಾಟಕದ ಚುನಾವಣಾಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದ ಕುಮಾರಸ್ವಾಮಿ, ನಿನ್ನೆಯೂ ಎರಡು ವಾಹನಗಳಲ್ಲಿ ಕುಕ್ಕರ್ ಲೋಡ್ ಮಾಡಿದ್ದು, ಚುನಾವಣಾ ದಿನಾಂಕ ಘೋಷಣೆಯಾದ ನಂತರವೂ ಸುಮಾರು 4 ಲಕ್ಷಕ್ಕೂ ಹೆಚ್ಚು ಕುಕ್ಕರ್ ಗಳ ವಿತರಣೆಯಾಗಿದೆ. ಈಗಲೂ ಕೂಡಾ ಕುಕ್ಕರ್ ವಿತರಿಸಲಾಗುತ್ತಿದೆ. ನಿನ್ನೆ ರಾತ್ರಿ ಮತದಾರರಿಗೆ ವಿತರಿಸಲು ಎರಡು ಲಕ್ಷದ 10 ಸಾವಿರ ಕುಕ್ಕರ್ ಗಳನ್ನು ಲೋಡ್ ಮಾಡಲಾಗಿದೆ. ಮರಳವಾಡಿ ಹೋಬಳಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಕಣ್ಣಿಗೆ ಎರಡು ವಾಹನಗಳು ಬಿದಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಈ ವಿಚಾರವನ್ನು ಮುಖ್ಯ ಚುನಾವಣಾಧಿಕಾರಿಗಳ ಗಮನಕ್ಕೆ ತಂದಿದ್ದು, ಅವರು ಈ ಬಗ್ಗೆ ಪರಿಶೀಲಿಸುವಂತೆ ರಾಮನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಫೋಟೋಗಳನ್ನು ತೋರಿಸಿದ ಹೆಚ್.ಡಿ.ಕುಮಾರಸ್ವಾಮಿ
ಕೇವಲ ಎರಡು ಸೀಟು ಪಡೆಯಲು ಇಷ್ಟೆಲ್ಲಾ ಪ್ರಯತ್ನ ಮಾಡಬೇಕಾ? ಬಿಜೆಪಿ ನಡೆಗೆ ಕುಮಾರಸ್ವಾಮಿ ಬೇಸರ

ಈ ವಿಚಾರವನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಡಿಸಿ ವರ್ಗಾಯಿಸಿದ್ದಾರೆ. ಆದರೆ, ಸ್ಥಳಕ್ಕೆ ಭೇಟಿ ನೀಡಿದಾಗ ಅಂತಹ ಯಾವುದೇ ಚಟುವಟಿಕೆ ಕಂಡುಬಂದಿಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಆದರೆ ವಾಸ್ತವ ಇನ್ನೂ ನಡೆಯುತ್ತಿದೆ. ಈ ಉದ್ದೇಶಕ್ಕಾಗಿ ಕುಕ್ಕರ್‌ಗಳನ್ನು ತಯಾರಿಸಲಾಗುತ್ತಿದೆ. ಡಿಕೆ ಸಹೋದರರು ಯಾವುದೇ ಲೇಬಲ್ ಇಲ್ಲದೆ ಕುಕ್ಕರ್ ಬಾಕ್ಸ್‌ಗಳನ್ನು ಕಳುಹಿಸಲು ತಯಾರಕರಿಗೆ ನಿರ್ದೇಶಿಸಿದ್ದಾರೆ. ಡೆಲಿವರಿ ತೆಗೆದುಕೊಂಡ ನಂತರ ಬೇರೆ ಕಡೆಗಳಲ್ಲಿ ಫೋಟೋ ಹಾಗೂ ಲೇಬಲ್ ಅಂಟಿಸಲಾಗುತ್ತಿದೆ. ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕುಕ್ಕರ್ ಉತ್ಪಾದಿಸಲಾಗುತ್ತಿದೆ. ಈ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸದಿದ್ದರೆ, ಮತದಾರರಿಗೆ ಹಂಚಲು ಕುಕ್ಕರ್‌ ದಾಸ್ತಾನು ಮಾಡಿರುವ ಜಾಗಕ್ಕೆ ಬೆಂಕಿ ಹಚ್ಚಲು ಜೆಡಿಎಸ್ ಕಾರ್ಯಕರ್ತರಿಗೆ ಕರೆ ನೀಡುತ್ತೇನೆ, ಯಾರು ಕೇಸ್ ಬುಕ್ ಮಾಡುತ್ತಾರೆ ನೋಡೋಣ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com