ಬಿಜೆಪಿ 3ನೇ ಪಟ್ಟಿ ಮಾರ್ಚ್ 22ಕ್ಕೆ ಬಿಡುಗಡೆ, ಅಸಮಾಧಾನಿತ ನಾಯಕರೊಂದಿಗೆ ಶೀಘ್ರದಲ್ಲೇ ಮಾತುಕತೆ: ಬಿ.ಎಸ್.ಯಡಿಯೂರಪ್ಪ

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್​ 22 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದರು.
ಸಿಎಂ ಬಿ.ಎಸ್.ಯಡಿಯೂರಪ್ಪ
ಸಿಎಂ ಬಿ.ಎಸ್.ಯಡಿಯೂರಪ್ಪ

ನವದೆಹಲಿ/ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್​ 22 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದರು.

ನವದೆಹಲಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರೊಂದಿಗೆ 5 ಕ್ಷೇತ್ರಗಳ ಕುರಿತು ಚರ್ಚೆ ನಡೆಸಲಾಗಿದೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸಲಾಗುತ್ತದೆ ಎಂದು ಹೇಳಿದರು.

ಸದಾನಂದ ಗೌಡ ಅವರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ನಲ್ಲಿ ಸರಿಯಾದ ಅಭ್ಯರ್ಥಿಗಳಿಲ್ಲ. ಆದ್ದರಿಂದ ಬಿಜೆಪಿಯ ಅತೃಪ್ತ ನಾಯಕರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಲೋಕಸಭೆ ಚುನಾವಣೆ ಬಳಿಕ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಿಂದ ಕೇಳಗಿಳಿಯಬೇಕಾಗುತ್ತೆ ಎಂಬ ಈಶ್ವರಪ್ಪ ಅವರ ಹೇಳಿಕೆ ಉತ್ತರಿಸಿ, ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಬಿಜೆಪಿ ಉತ್ತಮ ಬೆಳವಣಿಗೆ ಕಂಡಿದೆ. ತಮ್ಮ ಮಗನಿಗೆ ಸೀಟು ಸಿಕ್ಕಿಲ್ಲ ಎಂಬ ಕಾರಣಕ್ಕೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ. ಜನ ಉತ್ತರ ಕೊಡ್ತಾರೆ ಎಂದರು.

ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ನಾನೇನೂ ಪ್ರತಿಕ್ರಿಯಿಸುವುದಿಲ್ಲ. ಆ ರೀತಿ ತೀರ್ಮಾನ ತೆಗೆದುಕೊಳ್ಳಬೇಡಿ ಎಂದು ಎಲ್ಲರೂ ಹೇಳಿದ್ದಾರೆ. ಅಂತಿಮವಾಗಿ ಅವರು ಏನು ಮಾಡುತ್ತಾರೆ ನೋಡೋಣ ಎಂದರು.

ಸೀಟು ಹಂಚಿಕೆ ಬಗ್ಗೆ ಜೆಡಿಎಸ್ ಅಸಮಾಧಾನಗೊಂಡಿರುವ ಕುರಿತು ಮಾತನಾಡಿ, ಜೆಡಿಎಸ್ ಮುಖಂಡರು ನಮ್ಮ ಜೊತೆಗೆ ಇರುತ್ತಾರೆ. ಬಿಜೆಪಿ ಹೈಕಮಾಂಡ್ ನ ಅಂತಿಮ ತೀರ್ಮಾನವನ್ನು ಅವರಿಗೆ ಮನವರಿಕೆ ಮಾಡುತ್ತೇವೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಮಾರ್ಚ್ 22 ರಂದು ಘೋಷಣೆಯಾಗುತ್ತದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಅನುಕೂಲ ಆಗಿದೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲಲು ಸಾಧ್ಯವಾಗುತ್ತೆ. ಅಮಿತ್ ಶಾ, ಮೋದಿ ಜೊತೆಗೆ ಹೆಚ್. ಡಿ ದೇವೇಗೌಡರು ಸಂಪರ್ಕದಲ್ಲಿದ್ದಾರೆ ಎಂದರು.

ಸಿಎಂ ಬಿ.ಎಸ್.ಯಡಿಯೂರಪ್ಪ
ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ, ಬೆಳೆಸಿದ್ದಾರೋ ಎಂಬುದು ಚುನಾವಣೆ ಬಳಿಕ ತಿಳಿಯಲಿದೆ: ವಿಜಯೇಂದ್ರ

ಅಸಮಾಧಾನಿತರ ನಾಯಕರ ಕುರಿತು ಮಾತನಾಡಿ, ಅಸಮಾಧಾನಿತ ನಾಯಕರ ಜೊತೆ ನಾನು ಮಾತನಾಡುತ್ತೇನೆ. ಸಂಗಣ್ಣ ಕರಡಿ ಜೊತೆ ನಾನು ಮಾತನಾಡಿದ್ದೇನೆ, ಸಂಗಣ್ಣ ಕರಡಿ ನಮ್ಮ ಜೊತೆ ಇರೋ ವಿಶ್ವಾಸವಿದೆ. ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಹೇಳಿದ್ದೇನೆ. ಮಾಧುಸ್ವಾಮಿ ಜೊತೆ ನಾನು ಮಾತನಾಡುತ್ತೇನೆ. ಜೆಸಿ ಮಾಧುಸ್ವಾಮಿ ಅವರ ಸಹಕಾರದೊಂದಿಗೆ ನಾವು ಚುನಾವಣೆ ಗೆಲ್ಲಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇವೆ. ಅಸಮಾಧಾನಿತರನ್ನು ಸಮಾಧಾನಪಡಿಸುವ ಕೆಲಸ ಆಗುತ್ತಿದೆ. ಅಸಮಾಧಾನಿತ ನಾಯಕರಿದೆ ಮುಂದೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com