Loksabha Election 2024: ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ- KS Eshwarappa

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ಮುಂದುವರೆಸಿರುವ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ ಎಂದು ಗುಡುಗಿದ್ದಾರೆ.
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ಮುಂದುವರೆಸಿರುವ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಚುನಾವಣೆಯಲ್ಲಿ ನನ್ನ ಗೆಲುವಿನ ಬಳಿಕ ವಿಜಯೇಂದ್ರ ಅಧ್ಯಕ್ಷ ಸ್ಥಾನ ಕಳೆದುಕೊಳ್ಳಲ್ಲಿದ್ದಾರೆ ಎಂದು ಗುಡುಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್​ಗೆ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಬಿಎಸ್​ ಯಡಿಯೂರಪ್ಪ ಮತ್ತು ಅವರ ಕುಟುಂಬದ ಮೇಲೆ ಮುನಿಸಿಕೊಂಡಿರುವ ಈಶ್ವರಪ್ಪ, ಲೋಕಸಭೆ ಚುನಾವಣೆ ಬಳಿಕ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, 'ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಕೆ.ಎಸ್​. ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ. ನನ್ನ (ಈಶ್ವರಪ್ಪ) ಪುತ್ರ ಕಾಂತೇಶ್​​ಗೆ ವಿಧಾನಪರಿಷತ್​ ಸ್ಥಾನ ಕೊಡುತ್ತೇವೆ ಅಂತ ಹೇಳಿದ್ದರು. ನನ್ನನ್ನು (ಈಶ್ವರಪ್ಪ) ರಾಜ್ಯಪಾಲರನ್ನಾಗಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಹೇಳಿದ್ದರು. ಆದರೆ ನನಗೆ ಸ್ಥಾನಮಾನಗಳು ಬೇಡ, ಪಕ್ಷ ಉಳಿಯಬೇಕು ಅಷ್ಟೆ.

ಕೆ.ಎಸ್.ಈಶ್ವರಪ್ಪ
ಮೋದಿ ಕಾರ್ಯಕ್ರಮಕ್ಕೆ ಚಕ್ಕರ್, ಮಠಗಳಿಗೆ ಹಾಜರ್: ಯಾರಿಗೂ ಬಗ್ಗದ ಈಶ್ವರಪ್ಪ ಪ್ರಚಾರ ಆರಂಭ!

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಥಾನ ಕಳೆದುಕೊಳ್ಳಲಿದ್ದಾರೆ. ನನ್ನ ಮಗನಿಗೆ ಎಂಎಲ್‌ಸಿ ಸ್ಥಾನವನ್ನು ನೀಡುವುದಾಗಿ ಮತ್ತು ನನಗೆ ರಾಜ್ಯಪಾಲರ ಸ್ಥಾನವನ್ನು ನೀಡುವುದಾಗಿ ಅವರು (ಬಿಜೆಪಿ) ನನಗೆ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪ್ರವರ್ಧಮಾನಕ್ಕೆ ಬರಬೇಕು ಎಂಬುದು ನನ್ನ ಏಕೈಕ ಕಾಳಜಿ ಎಂದರು.

ಹಿಂದುತ್ವದ ಕಾರಣಕ್ಕಾಗಿ ಈಶ್ವರಪ್ಪ ಸ್ಪರ್ಧೆ: ಪುತ್ರ ಕಾಂತೇಶ್​​

ಇದೇ ವೇಳೆ ಈಶ್ವರಪ್ಪ ಪುತ್ರ ಕಾಂತೇಶ್ ಮಾತನಾಡಿ, 'ಹಿಂದುತ್ವದ ಕಾರಣಕ್ಕಾಗಿ ಶಿವಮೊಗ್ಗದಲ್ಲಿ ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪಗೆ ಉತ್ತಮ ಬೆಂಬಲ ಸಿಗುತ್ತಿದೆ. ಎಷ್ಟೇ ಮನವೊಲಿಸಿದರೂ ಸ್ಪರ್ಧಿಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಪಕ್ಷ ಉಳಿಯಬೇಕು ಎಂಬುದು ಕಾರ್ಯಕರ್ತರ ಆಶಯವಾಗಿದೆ. ಕೆ.ಎಸ್​. ಈಶ್ವರಪ್ಪಗೆ ಕಾರ್ಯಕರ್ತರ ಬೆಂಬಲ ಕೂಡ ಸಿಗುತ್ತಿದೆ ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಹೇಳಿದರು.

ಕೆ.ಎಸ್.ಈಶ್ವರಪ್ಪ
ಬಿಜೆಪಿ ವರಿಷ್ಠರ ಸಂಧಾನ ವಿಫಲ: ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳದ ಈಶ್ವರಪ್ಪ, ಸ್ವತಂತ್ರ ಸ್ಪರ್ಧೆ ಖಚಿತ!

ತಂದೆ ಅವರ ನಿರ್ಧಾರ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಅನುಗುಣವಾಗಿದೆ. ನನ್ನ ತಂದೆ ಇಷ್ಟು ವರ್ಷಗಳಿಂದ ಮೋಸ ಹೋಗಿಲ್ಲ. ಈ ಬಾರಿ ಮೋಸ, ನಮಗೆ ಅನ್ಯಾಯವಾಗಿದೆ. ಯಡಿಯೂರಪ್ಪ ಅವರ ಮಕ್ಕಳಿಬ್ಬರೂ ಚೆನ್ನಾಗಿರಲಿ, ಆದರೆ ನಾವೇನು ಮಾಡಿದ್ದೇವೆ? ಕಾಂತೇಶ್ ತಿಳಿಸಿದ್ದಾರೆ. ಅಂತೆಯೇ ವಾರ್ಡ್‌ಗಳಲ್ಲಿ ಪ್ರಚಾರ ಆರಂಭಿಸುವಂತೆ ಬೆಂಬಲಿಗರಿಗೆ ಕರೆ ನೀಡಿದ ಅವರು, ಸಭೆಯಲ್ಲಿ ಭಾಷಣ ಮಾಡುವಾಗ ಭಾವುಕರಾಗಿ ಅಳಲು ತೋಡಿಕೊಂಡರು.

ಶಿವಮೊಗ್ಗದ ತಮ್ಮ ನಿವಾಸದಲ್ಲಿ ಹಿರಿಯ ಮುಖಂಡ ಈಶ್ವರಪ್ಪ ಬೆಂಬಲಿಗರ ಸಭೆ ನಡೆಸಿ ನಾಮಪತ್ರ ಸಲ್ಲಿಕೆ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಬೆಂಬಲಕ್ಕೆ ಬರುವಂತೆ ಮನವಿ ಮಾಡಿದರು.

ಈಶ್ವರಪ್ಪ ಆರೋಪ ಸರಿಯಲ್ಲ: ಬಿಎಸ್ ಯಡಿಯೂರಪ್ಪ

ಇನ್ನು ಈಶ್ವರಪ್ಪ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಬಿಎಸ್ ಯಡಿಯೂರಪ್ಪ ಆರೋಪಗಳನ್ನು ನಿರಾಕರಿಸಿದ್ದಾರೆ. ಅಲ್ಲದೆ ಈಶ್ವರಪ್ಪ ಅವರು ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಹೈಕಮಾಂಡ್ ಮೂಲಕ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ಅವರ ಆರೋಪಕ್ಕೆ ಜನ ತಕ್ಕ ಉತ್ತರ ನೀಡುತ್ತಾರೆ. ವಿಜಯೇಂದ್ರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ರಾಜ್ಯದಲ್ಲಿ ಪಕ್ಷ ಬಲವರ್ಧನೆಯಾಗಿರುವುದು ಗೊತ್ತಿರುವ ಸಂಗತಿ. ಚುನಾವಣಾ ಸಮಿತಿಯು ಚರ್ಚೆಯ ನಂತರ ಅಭ್ಯರ್ಥಿಗಳನ್ನು ಘೋಷಿಸಿತು. ಈಶ್ವರಪ್ಪ ಅವರ ಮಗನಿಗೆ ಟಿಕೆಟ್ ಸಿಗದಂತೆ ನೋಡಿಕೊಂಡಿದ್ದೇನೆ ಎಂದು ಅನಗತ್ಯ ಆರೋಪ ಮಾಡುತ್ತಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿ ಈಶ್ವರಪ್ಪ ಅವರು ಸತ್ಯವನ್ನು ಅರ್ಥಮಾಡಿಕೊಂಡು ಸರಿಯಾದ ದಾರಿಗೆ ಬರುತ್ತಾರೆ ಎಂಬ ಭರವಸೆ ನನಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com