ಶಿವಾನಂದ ಪಾಟೀಲ್ ಪುತ್ರಿಗೆ ಕಾಂಗ್ರೆಸ್ ಟಿಕೆಟ್ ಎಂಬ ವರದಿ; ವೀಣಾ ಕಾಶಪ್ಪನವರ್ ಬೆಂಬಲಿಗರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್‌ ಬೆಂಬಲಿಗರು ಬುಧವಾರ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಸಂಯುಕ್ತಾ ಪಾಟೀಲ್‌ - ವೀಣಾ ಕಾಶಪ್ಪನವರ್
ಸಂಯುಕ್ತಾ ಪಾಟೀಲ್‌ - ವೀಣಾ ಕಾಶಪ್ಪನವರ್

ಬಾಗಲಕೋಟ: ಸಚಿವ ಶಿವಾನಂದ ಪಾಟೀಲ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎಂಬ ವರದಿಯಿಂದ ಕೆರಳಿದ ಪ್ರಬಲ ಟಿಕೆಟ್ ಆಕಾಂಕ್ಷಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ್‌ ಬೆಂಬಲಿಗರು ಬುಧವಾರ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ವಿಜಯಪುರ ಜಿಲ್ಲೆಯವರಾದ ಸಂಯುಕ್ತಾ ಪಾಟೀಲ್ ಅವರನ್ನು ‘ಹೊರಗಿನವರು’ ಎಂದು ಟೀಕಿಸಿದ ವೀಣಾ ಬೆಂಬಲಿಗರು, ಪಕ್ಷದ ಹೈಕಮಾಂಡ್ ಸ್ಥಳೀಯರಿಗೆ ಟಿಕೆಟ್ ನೀಡಬೇಕೇ ಹೊರತು ಹೊರಗಿನವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದರು.

ಪಕ್ಷದ ಕಚೇರಿಯ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಬೆಂಬಲಿಗರು, ಪಕ್ಷದ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿದರು ಮತ್ತು ಟೈರ್‌ಗಳನ್ನು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಸಂಯುಕ್ತಾ ಪಾಟೀಲ್‌ - ವೀಣಾ ಕಾಶಪ್ಪನವರ್
ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್: ಐವರು ಸಚಿವರ ಮಕ್ಕಳಿಗೆ ಟಿಕೆಟ್; ಅಧಿಕೃತ ಘೋಷಣೆಯೊಂದೇ ಬಾಕಿ!

ಬೆಂಬಲಿಗರ ಪ್ರಕಾರ, ಹುನಗುಂದದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಪತ್ನಿಯೂ ಆಗಿರುವ ವೀಣಾ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದ ಬಿಜೆಪಿಯ ಪಿ.ಸಿ.ಗದ್ದಿಗೌಡರ ವಿರುದ್ಧ ಸೋತ ನಂತರವೂ ಪಕ್ಷಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ.

ಜಿಲ್ಲೆಯಾದ್ಯಂತ ಪ್ರವಾಸ ಮಾಡಿ ಜನರನ್ನು ಭೇಟಿ ಮಾಡುತ್ತಿದ್ದು, ಕ್ಷೇತ್ರದ ಮತದಾರರೊಂದಿಗೆ ಸಂಪರ್ಕದಲ್ಲಿದ್ದಾರೆ. ದೀರ್ಘ ಕಾಲದಿಂದ ಪಕ್ಷಕ್ಕಾಗಿ ದುಡಿದಿರುವ ಅವರು ಟಿಕೆಟ್‌ಗೆ ಅರ್ಹರು ಎಂದು ಪ್ರತಿಭಟನಾಕಾರರು ಹೇಳಿದರು.

ವೀಣಾ ಕಾಶಪ್ಪನವರ್ ಬೆಂಬಲಿಗರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ
ವೀಣಾ ಕಾಶಪ್ಪನವರ್ ಬೆಂಬಲಿಗರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ

ಪ್ರತಿಭಟನಾಕಾರರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆದರು. ಇದರಿಂದ ಕೋಪಗೊಂಡ ಬೆಂಬಲಿಗರು ಪೊಲೀಸ್ ಸಿಬ್ಬಂದಿಯೊಂದಿಗೆ ತೀವ್ರ ವಾಗ್ವಾದ ನಡೆಸಿದರು.

ಇತ್ತೀಚಿನವರೆಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಸ್ಪರ್ಧಿಗಳಲ್ಲಿ ಆನಂದ್ ನ್ಯಾಮೇಗೌಡ, ವೀಣಾ ಕಾಶಪ್ಪನವರ್ ಪ್ರಬಲ ಆಕಾಂಕ್ಷಿಯಾಗಿದ್ದರು. ಕಳೆದ ವಾರದಿಂದೀಚೆಗೆ ಸಚಿವ ಶಿವಾನಂದ ಪಾಟೀಲ್‍ರವರ ಪುತ್ರಿ ಸಂಯುಕ್ತ ಪಾಟೀಲ್‍ರ ಹೆಸರು ಪ್ರಬಲವಾಗಿ ಕೇಳಿಬರುತ್ತಿದೆ.

ಸಮೀಕ್ಷೆಗಳ ಪ್ರಕಾರ, ಸಂಯುಕ್ತ ಪಾಟೀಲ್ ಗೆಲುವು ಸುಲಭ ಎಂದು ವಿಶ್ಲೇಷಿಸಲಾಗಿದೆ. ಹೀಗಾಗಿ ರಾಜ್ಯ ನಾಯಕರು ಸಚಿವರ ಪುತ್ರಿಗೆ ಮಣೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ವೀಣಾ ಕಾಶಪ್ಪನವರ ಬೆಂಬಲಿಗರು ಬೀದಿಗಿಳಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com