ಪ್ರೀತಂಗೌಡ ಜೊತೆ ಚರ್ಚಿಸಿ ಸಮಾಧಾನ ಮಾಡುತ್ತೇವೆ: ಬಿಎಸ್ ವೈ ಭೇಟಿ ಬಳಿಕ ಪ್ರಜ್ವಲ್ ರೇವಣ್ಣ ಹೇಳಿಕೆ

ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ತಂದೆ ರೇವಣ್ಣ ಜೊತೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣTNIE

ಬೆಂಗಳೂರು: ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ತಂದೆ ರೇವಣ್ಣ ಜೊತೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

ಬೆಂಗಳೂರಿನ ನಿವಾಸದಲ್ಲಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರನ್ನು ಮಾಜಿ ಸಚಿವ ಎಚ್. ಡಿ. ರೇವಣ್ಣ, ಪ್ರಜ್ವಲ್ ರೇವಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು. ಎನ್‌ಡಿ‌ಎ ಮೈತ್ರಿಕೂಟದ ಜೊತೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಪ್ರಚಾರ ತಂತ್ರದ ಬಗ್ಗೆ ಚರ್ಚಿಸಿದರು.

ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭೆ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದರು, ಇನ್ನೂ ಹಾಸನದ ಬಿಜೆಪಿ ನಾಯಕ ಪ್ರೀತಂ ಗೌಡ ಅವರ ಜೊತೆ ಮಾತನಾಡಿ ಸಮಾಧಾನಪಡಿಸುತ್ತೇವೆ ಎಂದರು.

ಪ್ರಜ್ವಲ್ ರೇವಣ್ಣ
ಲೋಕಸಭೆ ಚುನಾವಣೆ 2024: ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸದಂತೆ ಜಿಲ್ಲಾ ಬಿಜೆಪಿ ಸುತ್ತೋಲೆ!

ಹಾಸನ ಕ್ಷೇತ್ರಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಇನ್ನೂ ಘೋಷಣೆಯಾಗಿಲ್ಲ. ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್ ಪಕ್ಷ ಮಾರ್ಚ್ 25ರಂದು ಕೋಲಾರ, ಹಾಸನ ಮತ್ತು ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com