ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆ ಸ್ಥಗಿತ: 'ನಿಮ್ಮ ಖರ್ಚಲ್ಲೇ ಚುನಾವಣೆ ಎದುರಿಸಿ'; ಸಂಪುಟ ಸಹೋದ್ಯೋಗಿಗಳಿಗೆ ಸಿಎಂ-ಡಿಸಿಎಂ ಸೂಚನೆ

ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಹಣ ಖರ್ಚು ಮಾಡಲು ಪಕ್ಷದ ಹಿರಿಯ ನಾಯಕರ ಕೈ ಕಟ್ಟಿಹಾಕಿದಂತೆ ಆಗಿದೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಆಯೋಗಕ್ಕೆ ಪಕ್ಷಗಳ ಚುನಾವಣಾ ಬಾಂಡ್ ದಾಖಲೆಗಳನ್ನು ಸಲ್ಲಿಸಿದ ನಂತರ ಕಾಂಗ್ರೆಸ್ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪಕ್ಷದ ಹಿರಿಯ ನಾಯಕರ ಕೈ ಕಟ್ಟಿಹಾಕಿದಂತೆ ಆಗಿದೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಆದರೆ ತಮ್ಮ ಸಂಬಂಧಿಕರಿಗೆ ಟಿಕೆಟ್ ಗಿಟ್ಟಿಸಿಕೊಂಡಿರುವ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಚುನಾವಣೆ ಖರ್ಚುವೆಚ್ಚಗಳಿಗೆ ಹಣ ನೀಡುವ ಜವಾಬ್ದಾರಿಯನ್ನು ವಹಿಸಿದ್ದಾರೆ, ಹತ್ತಕ್ಕೂ ಹೆಚ್ಚು ಹಿರಿಯ ನಾಯಕರು ಮತ್ತು ಸಚಿವರ ಪುತ್ರಿಯರು, ಪುತ್ರರು ಮತ್ತು ಇತರ ಸಂಬಂಧಿಕರಿಗೆ ಕಾಂಗ್ರೆಸ್ ನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಪಡೆದಿದ್ದು, ಅವರನ್ನು ಮತದಾರರು ಆಯ್ಕೆ ಮಾಡುವ ಜವಾಬ್ದಾರಿ ಮತ್ತು ಚುನಾವಣಾ ಖರ್ಚುವೆಚ್ಚಗಳನ್ನು ಅವರಿಗೇ ವಹಿಸಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
Electoral bonds: ಕಾಂಗ್ರೆಸ್ ಬ್ಯಾಂಕ್ ಖಾತೆ, 300 ಕೋಟಿ ರೂ ಸ್ಥಗಿತ..: ಮೋದಿ ಸರ್ಕಾರದ ವಿರುದ್ಧ ಖರ್ಗೆ ಕಿಡಿ

"ಕೆಲವು ಅಭ್ಯರ್ಥಿಗಳನ್ನು ಹೊರತುಪಡಿಸಿ, ಪಕ್ಷವು ನಿಧಿಯ ಬಗ್ಗೆ ಚಿಂತಿಸಬೇಕಾಗಿಲ್ಲ, ಸಚಿವರುಗಳೇ ತಮ್ಮ ಸ್ವಂತ ಖರ್ಚಿನಿಂದ ನಿರ್ವಹಿಸುತ್ತಾರೆ" ಎಂದು ಕಾಂಗ್ರೆಸ್ ನಾಯಕರೊಬ್ಬರು TNIE ಗೆ ತಿಳಿಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಲ್ಲಿ ಅಪಾರ ಪ್ರಮಾಣದ ಬಂಡವಾಳ ಹೂಡಿದ ಡಿಸಿಎಂ ಡಿ ಕೆ ಶಿವಕುಮಾರ್ ಈಗ ಅಸಹಾಯಕರಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸಿಬ್ಬಂದಿಗೆ ಕೂಲಿ ಕೊಡಲೂ ತಮ್ಮ ಬಳಿ ಹಣವಿಲ್ಲ ಎಂದು ಕೈ ಚೆಲ್ಲಿದರು. ಕೆಪಿಸಿಸಿ ಸಂಗ್ರಹಿಸಿದ ದೇಣಿಗೆಯಲ್ಲಿ ಸುಮಾರು 120 ಕೋಟಿ ರೂಪಾಯಿಗಳನ್ನು ಸ್ಥಗಿತಗೊಳಿಸಲಾಗಿದ್ದು, ಚುನಾವಣೆಗೆ ಹಣ ನೀಡಲು ಸಿಎಂ ಹಾಗೂ ಪಕ್ಷದ ಶಾಸಕರ ನೆರವು ಕೋರಲಾಗಿದೆ ಎಂದರು.

ಕೇಂದ್ರ ಸರ್ಕಾರದ ಕಾರ್ಯವೈಖರಿಯಿಂದ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹಿನ್ನಡೆಯಾಗಲಿದೆ ಎಂದರು. ಸ್ಥಳೀಯವಾಗಿ ನಾಯಕರನ್ನು ನಿರ್ವಹಿಸುತ್ತಿದ್ದ ವೆಂಕಟರಮಣ ಗೌಡ ಉರುಫ್ ಸ್ಟಾರ್ ಚಂದ್ರು ಅವರಂತಹ ಶ್ರೀಮಂತ ಅಭ್ಯರ್ಥಿಗಳನ್ನು ಪಕ್ಷ ಆಯ್ಕೆ ಮಾಡಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವಾನಂದ ಪಾಟೀಲ್, ರಾಮಲಿಂಗಾರೆಡ್ಡಿ, ಎಸ್‌ಎಸ್ ಮಲ್ಲಿಕಾರ್ಜುನ್, ಮಧು ಬಂಗಾರಪ್ಪ ತಮ್ಮ ಬಂಧುಗಳಿಗೆ ಟಿಕೆಟ್‌ ಸಿಕ್ಕಿದ್ದು, ಪಕ್ಷದಿಂದ ಹಣ ನಿರೀಕ್ಷಿಸುವ ಸಾಧ್ಯತೆ ಕಡಿಮೆ. ಇದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಮನಿ ಅವರಿಗೂ ಅನ್ವಯಿಸುತ್ತದೆ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
ಯಾವುದೇ ರಾಜಕೀಯ ಪಕ್ಷ ಆದಾಯ ತೆರಿಗೆ ಕಟ್ಟಲ್ಲ, ನಮ್ಮ ಬ್ಯಾಂಕ್ ಅಕೌಂಟ್ ಫ್ರೀಜ್ ಯಾಕೆ: ಕಾಂಗ್ರೆಸ್ ಪ್ರಶ್ನೆ

ಶಿವಕುಮಾರ್ ಅವರ ಸಹೋದರ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಿ ಕೆ ಸುರೇಶ್ ಮತ್ತು ಬೆಂಗಳೂರು ಸೆಂಟ್ರಲ್‌ನಿಂದ ಮಾಜಿ ಕೇಂದ್ರ ಸಚಿವ ಕೆ ರೆಹಮಾನ್ ಖಾನ್ ಅವರ ಪುತ್ರ ಮನ್ಸೂರ್ ಅಲಿ ಖಾನ್ ಅವರು ಸ್ವಂತವಾಗಿ ತಮ್ಮ ಚುನಾವಣಾ ಖರ್ಚುವೆಚ್ಚಗಳನ್ನು ನಿರ್ವಹಿಸಬಹುದು.

ಹಾಸನ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಪಟೇಲ್, ಬೆಂಗಳೂರು ಉತ್ತರ ಅಭ್ಯರ್ಥಿ ಪ್ರೊ ರಾಜೀವ್ ಗೌಡ ಮತ್ತು ತುಮಕೂರಿನ ಎಸ್ಪಿ ಮುದ್ದಹನುಮೇಗೌಡ ರಾಜಕೀಯ ಕುಟುಂಬದಿಂದ ಬಂದವರು, ಅವರಿಗೆ ಸ್ವಲ್ಪ ಬೆಂಬಲ ಬೇಕಾಗಬಹುದು. ಡಿಕೆ ಶಿವಕುಮಾರ್ ಅವರಲ್ಲದೆ, ಕೆಲವು ಒಕ್ಕಲಿಗ ಮುಖಂಡರು ಅವರಿಗೆ ಸಹಾಯ ಮಾಡುವ ಸಾಧ್ಯತೆಯಿದೆ.

ಕುರುಬ ಸಮುದಾಯದ ರಾಜಶೇಖರ್ ಹಿಟ್ನಾಳ್ (ಕೊಪ್ಪಳ) ಮತ್ತು ವಿನೋದ ಅಸೂಟಿ (ಹುಬ್ಬಳ್ಳಿ-ಧಾರವಾಡ) ಮತ್ತು ಎಂ ಲಕ್ಷ್ಮಣ (ಕೊಡಗು-ಮೈಸೂರು) ಅವರ ಸ್ಪರ್ಧೆ ಕಾಂಗ್ರೆಸ್ ಗೆ ಪ್ರತಿಷ್ಠೆಯ ವಿಷಯವಾಗಿದ್ದು, ಸ್ವಲ್ಪ ಮಟ್ಟಿಗೆ ಸಿಎಂ ಸಹಾಯ ಮಾಡುವ ಸಾಧ್ಯತೆಯಿದೆ. ಉಳಿದ ಅಭ್ಯರ್ಥಿಗಳಾದ ಅಂಜಲಿ ನಿಂಬಾಳ್ಕರ್ (ಉತ್ತರ ಕನ್ನಡ), ಆರ್ ಪದ್ಮರಾಜು (ದಕ್ಷಿಣ ಕನ್ನಡ), ಕೆ ಜಯಪ್ರಕಾಶ್ ಹೆಗ್ಡೆ (ಉಡುಪಿ-ಚಿಕ್ಕಮಗಳೂರು), ಕುಮಾರ್ ನಾಯಕ್ (ರಾಯಚೂರು), ಚಂದ್ರಪ್ಪ (ಚಿತ್ರದುರ್ಗ), ಎಚ್ ಆರ್ ಆಲಗೂರು (ವಿಜಯಪುರ) ಮತ್ತು ಆನಂದಸ್ವಾಮಿ ಗಡ್ಡದೇವರಮಠ (ಹಾವೇರಿ- ಗದಗ) ತಮ್ಮ ಎದುರಾಳಿಗಳಿಗೆ ಕಠಿಣ ಹೋರಾಟ ನೀಡಲು ಬೆಂಬಲದ ನಿರೀಕ್ಷೆಯಲ್ಲಿದ್ದಾರೆ. ಈ ಅಭ್ಯರ್ಥಿಗಳು ಸಮರ್ಥವಾಗಿದ್ದರೂ ಕೂಡ ಪಕ್ಷ ಹಣ ಪೂರೈಸಲು ವಿಫಲವಾದರೆ ಅವರು ಚುನಾವಣೆಯಲ್ಲಿ ಸೋಲುವ ಸಾಧ್ಯತೆ ಹೆಚ್ಚಾಗಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com