ವಿನಯ್ ಕುಮಾರ್ ಸೊರಕೆ
ವಿನಯ್ ಕುಮಾರ್ ಸೊರಕೆ

ಕೆಪಿಸಿಸಿಗೆ ಮೇಜರ್ ಸರ್ಜರಿ: ನಾಲ್ವರು ಕಾರ್ಯಾಧ್ಯಕ್ಷರ ಬದಲಾವಣೆ, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಸೊರಕೆ ನೇಮಕ

ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಮೇಜರ್ ಸರ್ಜರಿ ಮಾಡಲಾಗಿದೆ.
Published on

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ಚುರುಕು ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ಮೇಜರ್ ಸರ್ಜರಿ ಮಾಡಲಾಗಿದ್ದು, ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿ, ಹೊಸದಾಗಿ ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಸದ್ಯದ ಇರೋ ನಾಲ್ವರು ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಲಾಗಿದೆ. ನೂತನ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧಾರವಾಡ ಶಾಸಕ ವಿನಯ್ ಕುಲಕರ್ಣಿ, ತನ್ವೀರ್ ಸೇಠ್, ಜಿ.ಸಿ.ಚಂದ್ರಶೇಖರ್, ಮಂಜುನಾಥ್ ಭಂಡಾರಿ ಹಾಗೂ ವಸಂತ್ ಕುಮಾರ್ ಅವರನ್ನು ನೇಮಕ ಮಾಡಿ ಎಐಸಿಸಿ ಶನಿವಾರ ಆದೇಶ ಹೊರಡಿಸಿದೆ.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವಿನಯ್ ಕುಮಾರ್ ಸೊರಕೆ ನೇಮಕ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಹಾಗೂ ಸಹ ಅಧ್ಯಕ್ಷರಾಗಿ ಎಲ್ ಹನುಮಂತಯ್ಯ ಅವರನ್ನು ನೇಮಕ ಮಾಡಲಾಗಿದೆ.

ವಿನಯ್ ಕುಮಾರ್ ಸೊರಕೆ
ಜೆಡಿಎಸ್ MLC ಮರಿತಿಬ್ಬೇಗೌಡ, ಮಾಜಿ MLC ಅಪ್ಪಾಜಿ ಗೌಡ ಕಾಂಗ್ರೆಸ್ ಸೇರ್ಪಡೆ

ಅಲ್ಲದೆ. ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com