ಲೋಕಸಭೆ ಚುನಾವಣೆ: JDSಗೆ ಕೋಲಾರ ಸೇರಿ 3 ಕ್ಷೇತ್ರ; ಬಿಜೆಪಿ ಅಧಿಕೃತ ಘೋಷಣೆ

ಜೆಡಿಎಸ್-ಬಿಜೆಪಿ ದೋಸ್ತಿಗಳಿಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ.
ಬಿಜೆಪಿ ರಾಜ್ಯ ಮಟ್ಟದ ಕಾರ್ಯಾಗಾರ
ಬಿಜೆಪಿ ರಾಜ್ಯ ಮಟ್ಟದ ಕಾರ್ಯಾಗಾರ

ಬೆಂಗಳೂರು: ಜೆಡಿಎಸ್-ಬಿಜೆಪಿ ದೋಸ್ತಿಗಳಿಗೆ ಕಗ್ಗಂಟಾಗಿದ್ದ ಕೋಲಾರ ಕ್ಷೇತ್ರವನ್ನು ಕೊನೆಗೂ ಬಿಜೆಪಿಯು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಈ ಸಂಬಂಧ ಇಂದು ಅರಮನೆ ಮೈದಾನದ ಸಭಾಂಗಣದಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಘೋಷಣೆ ಮಾಡಿದ್ದಾರೆ.

ಕೋಲಾರ ಸೀಟು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದೇವೆ. ಈ ಮೂಲಕ ಜೆಡಿಎಸ್‍ಗೆ ಮೂರು ಸೀಟು ಬಿಟ್ಟು ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಕೋಲಾರ, ಹಾಸನ, ಮಂಡ್ಯ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ. ನಿಮಗೆ ಕೈ ಮುಗಿದು ಕೇಳಿಕೊಳ್ತೀನಿ, ಪ್ರಧಾನಿ ಮೋದಿಗಾಗಿ ಕೆಲಸ ಮಾಡಿ. ಮೂರು ಕ್ಷೇತ್ರದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿ. ನಿಮ್ಮ ವೈಯಕ್ತಿಕ ಮುನಿಸು ಏನೇ ಇದ್ರೂ ಬಿಟ್ಟುಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ 25 ಅಭ್ಯರ್ಥಿಗಳ ಆಯ್ಕೆ ಮಾಡಿದೆ. ಜೆಡಿಎಸ್‍ಗೆ ಮೂರು ಕ್ಷೇತ್ರ ಬಿಟ್ಟು ಕೊಟ್ಟಿದ್ದೇವೆ. ಅಭ್ಯರ್ಥಿ ಯಾರಾಗಾಬೇಕು ಅಂತ ನಾವು ಹಸ್ತಕ್ಷೇಪ ಮಾಡಿಲ್ಲ. ಆದರೆ ಒಟ್ಟಾಗಿ ಕೆಲಸ ಮಾಡಿ ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ಮಟ್ಟದ ಕಾರ್ಯಾಗಾರ
ಲೋಕಸಭಾ ಚುನಾವಣೆ: ವಾರದಲ್ಲಿ ಸೀಟು ಹಂಚಿಕೆ ಅಂತಿಮ, ಕೋಲಾರ-ಮಂಡ್ಯದಿಂದ ಪ್ರಚಾರ ಆರಂಭ; ದೇವೇಗೌಡ

ಬಿಜೆಪಿ ಕಾರ್ಯಗಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕರಾದ ವಿ. ಸುನೀಲ್ ಕುಮಾರ್ ಉಪಸ್ಥಿತಿತರಿದ್ದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com