ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಧನಾತ್ಮಕ ಪರಿಣಾಮ: ಎಚ್‍ಡಿಕೆ ಭೇಟಿ ಬಳಿಕ ಸಂಸದ ತೇಜಸ್ವಿ ಸೂರ್ಯ ಹೇಳಿಕೆ

ಲೋಕಸಭೆ ಚುನಾವಣೆಯಲ್ಲಿನ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಧನಾತ್ಮಕ ಪರಿಣಾಮ ಬೀರಲಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಎಚ್‍ಡಿಕೆ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ
ಎಚ್‍ಡಿಕೆ ಭೇಟಿಯಾದ ಸಂಸದ ತೇಜಸ್ವಿ ಸೂರ್ಯANI

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಧನಾತ್ಮಕ ಪರಿಣಾಮ ಬೀರಲಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಸಂಸದ ತೇಜಸ್ವಿ ಸೂರ್ಯ ಅವರು ಇಂದು ಭೇಟಿಯಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ಮನವಿ ಮಾಡಿದ್ದು, ಜೆ.ಪಿ.ನಗರದ ನಿವಾಸದಲ್ಲಿ ಶಾಸಕ ಸಿ.ಕೆ.ರಾಮಮೂರ್ತಿ ಅವರೊಂದಿಗೆ ಭೇಟಿಯಾದ ತೇಜಸ್ವಿ ಸೂರ್ಯ ಅವರು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿ, ಶುಭ ಹಾರೈಸಿದರು.

ಎಚ್‍ಡಿಕೆ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ
ಮಂಡ್ಯದಿಂದ ಎಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆ...

ಬಳಿಕ ಲೋಕಸಭಾ ಚುನಾವಣೆ ಬಗ್ಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮರುಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕೋರಿದರು.ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿಜ ತೇಜಸ್ವಿ ಸೂರ್ಯ, 'ಬಿಜೆಪಿ ಮತ್ತು ಜನತಾ ದಳ (ಜಾತ್ಯತೀತ) ಮೈತ್ರಿಯು ಕರ್ನಾಟಕದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಮೇಲೆ "ಸಕಾರಾತ್ಮಕ ಪರಿಣಾಮ" ಬೀರಲಿದೆ. ಬಿಜೆಪಿ-ಜೆಡಿಎಸ್ ಒಗ್ಗೂಡಿಸುವುದರಿಂದ ಎರಡೂ ಪಕ್ಷಗಳಿಗೆ ತಳಮಟ್ಟದಲ್ಲಿ ಬಲ ಬಂದಿದೆ. ಎಲ್ಲಾ 28 ಲೋಕಸಭಾ ಸ್ಥಾನಗಳಲ್ಲಿ ಈ ಮೈತ್ರಿ ಉತ್ತಮ ಪರಿಣಾಮ ಬೀರುತ್ತದೆ ಎಂದು ನನಗೆ ತುಂಬಾ ವಿಶ್ವಾಸವಿದೆ. ನಮ್ಮ ಮತ ಹಂಚಿಕೆ ಉತ್ತಮವಾಗಿರುವ ಹಲವು ಕ್ಷೇತ್ರಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.

ಎಚ್‍ಡಿಕೆ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ
ಇನ್ನೂ ಟೇಕಾಫ್ ಆಗದ ಬಿಜೆಪಿ-ಜೆಡಿಎಸ್ ಮೈತ್ರಿ: ತಳಮಟ್ಟದ ಕಾರ್ಯಕರ್ತರಲ್ಲಿ ಒಗ್ಗಟ್ಟಿನ ಕೊರತೆ

ಅಂತೆಯೇ ಇನ್ನು ಹಲವು ಕ್ಷೇತ್ರಗಳಲ್ಲಿ ಈ ಮೈತ್ರಿ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ತರಲಿದೆ. ಒಟ್ಟಾರೆ, ಇದು ರಾಜ್ಯಕ್ಕೆ ಬಹಳಷ್ಟು ಒಳ್ಳೆಯದನ್ನು ಮಾಡಲಿದೆ. ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಸುವ ವೇಳೆ ನಮ್ಮ ಜೊತೆ ಆಗಮಿಸಿಲು ಹೆಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದೇನೆ. ಅವರು ನಮಗೆಲ್ಲರಿಗೂ ಆಶೀರ್ವಾದ ಮಾಡಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿಯೂ ಸಹ ಎಲ್ಲಾ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಸಂತೋಷವಾಗಿದ್ದಾರೆ ಮತ್ತು ಒಗ್ಗೂಡಿ ಕೆಲಸ ಮಾಡಲಿದ್ದಾರೆ.

ಎಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರಧಾನಿ ಮೋದಿಯವರ ನಾಯಕತ್ವದ ಪರ ಕೆಲಸ ಮಾಡಲು ಉತ್ಸುಕರಾಗಿದ್ದಾರೆ. ಅಭಿವೃದ್ಧಿ ರಾಜಕೀಯವನ್ನು ಬೆಂಬಲಿಸಲು ಅವರು ಉತ್ಸುಕರಾಗಿದ್ದಾರೆ. ಕರ್ನಾಟಕದ ಎಲ್ಲಾ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅದ್ಭುತ ಫಲಿತಾಂಶಗಳನ್ನು ನೀಡುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಅವರು ಹೇಳಿದರು.

ಅಂದಹಾಗೆ ತೇಜಸ್ವಿ ಸೂರ್ಯ ಅವರು ಸೌಹಾರ್ದಯುತವಾಗಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದು, ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ವಿಚಾರ ಚರ್ಚೆಯಾಗಲಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಭೇಟಿಯ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com