ಲೋಕಸಭಾ ಚುನಾವಣೆ: ಸ್ಟಾರ್ ಪ್ರಚಾರಕರೊಂದಿಗೆ ಬಿಜೆಪಿ ಮಾತುಕತೆ- ಬಸವರಾಜ ಬೊಮ್ಮಾಯಿ

ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸ್ಟಾರ್ ಪ್ರಚಾರಕರ ಜೊತೆ ರಾಜ್ಯ ಬಿಜೆಪಿ ಮಾತುಕತೆ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಿಚ್ಚ ಸುದೀಪ್, ಬೊಮ್ಮಾಯಿ ಸಾಂದರ್ಭಿಕ ಚಿತ್ರ
ಕಿಚ್ಚ ಸುದೀಪ್, ಬೊಮ್ಮಾಯಿ ಸಾಂದರ್ಭಿಕ ಚಿತ್ರ
Updated on

ಹಾನಗಲ್ : ಮುಂಬರುವ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಸ್ಟಾರ್ ಪ್ರಚಾರಕರ ಜೊತೆ ರಾಜ್ಯ ಬಿಜೆಪಿ ಮಾತುಕತೆ ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ತಾಲೂಕಿನ ಮಾಸನಕಟ್ಟೆ ಗ್ರಾಮದಲ್ಲಿ ಮಂಗಳವಾರ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಮೋದಿ ಪರ ಅಲೆ ಎದ್ದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

ಇದೇ ವೇಳೆ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಪ್ರಚಾರಕ್ಕೆ ಬರ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಪಕ್ಷ ಮತ್ತು ಸೂಪರ್ ಸ್ಟಾರ್ ನಡುವೆ ಮಾತುಕತೆ ನಡೆಯುತ್ತಿದೆ. ನಾವು ಇತರ ಸೆಲೆಬ್ರಿಟಿಗಳೊಂದಿಗೆ ಮಾತುಕತೆ ನಡೆಸುತ್ತಿರುವುದರಿಂದ ಶೀಘ್ರದಲ್ಲೇ ಎಲ್ಲವನ್ನೂ ಪಕ್ಷ ನಿರ್ಧರಿಸುತ್ತದೆ" ಎಂದು ಅವರು ಹೇಳಿದರು.

ಕಿಚ್ಚ ಸುದೀಪ್, ಬೊಮ್ಮಾಯಿ ಸಾಂದರ್ಭಿಕ ಚಿತ್ರ
ಪತ್ನಿ ಗೀತಾ ಪರ ಪ್ರಚಾರ: ನಟ ಶಿವರಾಜ್ ಕುಮಾರ್ ಚಿತ್ರ, ಜಾಹೀರಾತು ನಿಷೇಧಿಸಿ; ಆಯೋಗಕ್ಕೆ ಬಿಜೆಪಿ ದೂರು

ಕಳೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಪಕ್ಷದ ಹಲವು ಅಭ್ಯರ್ಥಿಗಳ ಪರ ಸುದೀಪ್ ಪ್ರಚಾರ ನಡೆಸಿದ್ದರು.ಆದರೆ, ಈ ಬಾರಿ ಇನ್ನೂ ಪ್ರಚಾರಕ್ಕೆ ಯಾರೂ ಕರೆದಿಲ್ಲ ಎಂದು ಅವರು ಇತ್ತೀಚಿಗೆ ಹೇಳಿದ್ದರು.

ಇನ್ನೂ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಕೊಪ್ಪಳದ ಹಾಲಿ ಸಂಸದ ಕರಡಿ ಸಂಗಣ್ಣ ಅವರೊಂದಿಗೆ ಮಾತನಾಡಿದ್ದು, ಪಕ್ಷದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು. ಸಂಸದ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಲಾಗಿದೆ.

ಇಂದು ಬಿ.ಎಸ್.ಯಡಿಯೂರಪ್ಪ ದಾವಣಗೆರೆಗೆ ತೆರಳಿ ಪರಿಸ್ಥಿತಿಯನ್ನು ಸರಿದಾರಿಗೆ ತರಲು ಮುಂದಾಗಿದ್ದರು. ನಾಳೆ ಯಡಿಯೂರಪ್ಪನವರು ಬೆಳಗಾವಿಗೆ ತೆರಳಿ ಭಿನ್ನಾಭಿಪ್ರಾಯ ಶಮನಗೊಳಿಸಲಿದ್ದಾರೆ. ನಮ್ಮಲ್ಲೂ ಚುನಾವಣಾ ತಂತ್ರವಿದೆ ಆದರೆ ಅಂತಿಮವಾಗಿ ಯಾರನ್ನು ಬೆಂಬಲಿಸಬೇಕು ಎಂಬುದನ್ನು ಮತದಾರರು ನಿರ್ಧರಿಸುತ್ತಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com