ಕೋಲಾರ: ಮುನಿಯಪ್ಪ ಅಳಿಯನಿಗೆ ಕಾಂಗ್ರೆಸ್ ಟಿಕೆಟ್? ಸಚಿವ ಸುಧಾಕರ್ ಸೇರಿ ಆರು ಶಾಸಕರ ವಿರೋಧ, ರಾಜೀನಾಮೆ ಬೆದರಿಕೆ!

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಸಚಿವ ಕೆ.ಹೆಚ್​​ಮುನಿಯಪ್ಪ ಅವರ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುತ್ತೇವೆ ಎಂದು ಸಚಿವ ಎಂ ಸಿ ಸುಧಾಕರ್ ಸೇರಿ ಜಿಲ್ಲೆಯ ಆರು ಶಾಸಕರು ಮತ್ತು ಇಬ್ಬರು ವಿಧಾನ ಪರಿಷತ್ ಸದಸ್ಯರು ಬೆದರಿಕೆ ಹಾಕುತ್ತಿದ್ದಾರೆ.
ಸಚಿವ ಮುನಿಯಪ್ಪ
ಸಚಿವ ಮುನಿಯಪ್ಪ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಸಚಿವ ಕೆ.ಹೆಚ್​​ಮುನಿಯಪ್ಪ ಅವರ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣ ಅವರಿಗೆ ಟಿಕೆಟ್ ನೀಡಿದರೆ ರಾಜೀನಾಮೆ ನೀಡುತ್ತೇವೆ ಎಂದು ಸಚಿವ ಎಂ ಸಿ ಸುಧಾಕರ್ ಸೇರಿ ಜಿಲ್ಲೆಯ ಆರು ಶಾಸಕರು ಮತ್ತು ಇಬ್ಬರು ವಿಧಾನ ಪರಿಷತ್ ಸದಸ್ಯರು ಬೆದರಿಕೆ ಹಾಕುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಕ್ಷೇತ್ರದ ಭಿನ್ನಮತ ಸ್ಫೋಟ ವಿಷಯ ತಲುಪಿದ್ದು ಸದ್ಯಕ್ಕೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸದೆ ತಡೆಹಿಡಿಯಲು ನಿರ್ಧರಿಸಿದ್ದಾರೆ.

ಕೋಲಾರ ಕಾಂಗ್ರೆಸ್ ನಲ್ಲಿ ಎದ್ದಿರುವ ಭಿನ್ನಮತವನ್ನು ಶಮನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಧಾನ ಸಭೆ ನಡೆಸಿದರೂ, ನಾಯಕರ ನಡುವಿನ ಭಿನ್ನಮತ ಶಮನವಾಗಿಲ್ಲ. ಕಾಂಗ್ರೆಸ್ ಟ್ರಬಲ್ ಶೂಟರ್ ಡಿ ಕೆ ಶಿವಕುಮಾರ್ ಅವರು ಈ ಬಗ್ಗೆ ಹೈಕಮಾಂಡ್ ಮತ್ತು ಅಸಮಾಧಾನಿತ ಶಾಸಕರ ಜೊತೆ ಮಾತನಾಡಿದ್ದಾರೆ. ಉತ್ತರ ಕನ್ನಡದಲ್ಲಿ ದೇವಸ್ಥಾನ ಭೇಟಿಯಲ್ಲಿರುವ ಶಿವಕುಮಾರ್ ಅವರು ಬೆಂಗಳೂರಿಗೆ ಬಂದು ನಿಮ್ಮ ಜೊತೆ ಮಾತನಾಡುತ್ತೇನೆ, ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಅಸಮಾಧಾನಿತ ಶಾಸಕರ ಜೊತೆ ಮಾತನಾಡಿದ್ದಾರೆ.

ಶಾಸಕರ ವಿರೋಧವೇನು?: ಕೆ ಹೆಚ್ ಮುನಿಯಪ್ಪ ಅವರು ದೇವನಹಳ್ಳಿಯ ಶಾಸಕರಾಗಿ ಸಚಿವರಾಗಿದ್ದಾರೆ. ಅವರ ಪುತ್ರಿ ರೂಪಕಲಾ ಕೆಜಿಎಫ್ ನ ಶಾಸಕಿಯಾಗಿದ್ದು ಈಗ ಅಳಿಯನಿಗೂ ಟಿಕೆಟ್ ಕೇಳುತ್ತಿರುವುದು ಇದು ಕುಟುಂಬ ರಾಜಕೀಯವನ್ನು ತೋರಿಸುತ್ತದೆ. ಒಂದೇ ಕುಟುಂಬಕ್ಕೆ ಟಿಕೆಟ್ ನೀಡಿದರೆ ಜಿಲ್ಲೆಯ ಬೇರೆ ನಾಯಕರಿಗೆ ಅನ್ಯಾಯವಾಗುತ್ತದೆ, ಪಕ್ಷಕ್ಕಾಗಿ ಬೇರೆ ಶಾಸಕರು, ನಾಯಕರು ಕೆಲಸ ಮಾಡಿದ್ದಾರೆ ಎನ್ನುತ್ತಾರೆ ಜಿಲ್ಲೆಯ ಸಚಿವರಾದ ಎಂ ಸಿ ಸುಧಾಕರ್. ಈಗಾಗಲೇ ಐವರು ಶಾಸಕರು ಬಂಡಾಯವೆದ್ದು ರಾಜೀನಾಮೆ ಬೆದರಿಕೆ ಹಾಕಿದ್ದು ಅವರ ಜೊತೆ ಈಗ ಎಸ್ ಎನ್ ನಾರಾಯಣಸ್ವಾಮಿ ಕೂಡ ಸೇರಿದ್ದಾರೆ ಎನ್ನಲಾಗಿದೆ

ಕೆ.ಹೆಚ್​.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್​ ನೀಡಿದರೇ ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನ ಪರಿಷತ್ ಕಾಂಗ್ರೆಸ್​​​ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್​​ ರಾಜೀನಾಮೆ ನೀಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

12 ಗಂಟೆಗೆ ಸುಮಾರಿಗೆ ಸಭಾಪತಿಗೆ ಕಚೇರಿಗೆ ಭೇಟಿ ನೀಡಿ, ರಾಜಿನಾಮೆ ಪತ್ರ ನೀಡುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣ ಮಾಡುತ್ತೇವೆ. ಸಂಜೆ ನಾಲ್ಕು ಗಂಟೆಗೆ ಸಭಾಪತಿಗಳನ್ನು ಭೇಟಿ ಮಾಡಲಿದ್ದೇವೆ ಎಂದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ನಮ್ಮ ಬಣಕ್ಕೆ ಟಿಕೆಟ್ ನೀಡುವಂತೆ ಮಾಡಿದ್ದೇವೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಪಕ್ಷ ಗೆಲ್ಲಿಸುವ ಜವಾಬ್ದಾರಿ ನಮ್ದು. ಹೈಕಮಾಂಡ್​ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧವಾಗಿದ್ದೇವೆ. ನಾನು, ರಮೇಶ್​​ಕುಮಾರ್ ಸೇರಿ ಒಟ್ಟಿಗೆ ಕೆಲಸ ಮಾಡುವುದಾಗಿ ಹೇಳಿದ್ದೇವೆ ಕೋಲಾರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೊತ್ತೂರು ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com