ನನ್ನ ಬೆಂಬಲಿಗರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ: ಕೆ.ಎಸ್.ಈಶ್ವರಪ್ಪ ಆರೋಪ

ನನ್ನ ಬೆಂಬಲಿಗರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಮಂಗಳವಾರ ಆರೋಪಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ನನ್ನ ಬೆಂಬಲಿಗರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ಮಂಗಳವಾರ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ‘ಶುಭ ಮಂಗಳ’ ಸಮಾವೇಶದಲ್ಲಿ ಗ್ರಾಮೀಣ ಮತಗಟ್ಟೆ ಮಟ್ಟದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ನನ್ನ ಬೆಂಬಲಿಗರು ನನಗೆ ಕರೆ ಮಾಡಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ. ಆದರೆ ಬಹಿರಂಗವಾಗಿ ಅದನ್ನು ಹೇಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ನನ್ನ ಬೆಂಬಲಿಗರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಎಲ್ಲಾ ಬೆಳವಣಿಗೆಗಳು ಗೊತ್ತಿದ್ದರು, ನನ್ನನ್ನು ಬೆಂಬಲಿಸಲು ಹಲವರು ಇಲ್ಲಿಗೆ ಬಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ. ಕೇವಲ ಬಿಜೆಪಿ ಕಾರ್ಯಕರ್ತರಷ್ಟೇ ಅಲ್ಲ, ಕಾಂಗ್ರೆಸ್ ಬೆಂಬಲಿಗರೂ ಕೂಡ ನನಗೆ ಬೆಂಬಲ ನೀಡುತ್ತಿದ್ದಾರೆ, ಲೋಕಸಭೆ ಚುನಾವಣೆಯಲ್ಲಿ ನನ್ನ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆಂದು ಹೇಳಿದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 108 ಸ್ಥಾನಗಳನ್ನು ಗೆಲ್ಲಲು ನಾವು ಶ್ರಮಿಸಿದ್ದೇವೆ. ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದರು. ಆದರೆ, ಇದೀಗ ಪಕ್ಷದ ಸ್ಥಾನ 66ಕ್ಕೆ ಇಳಿದಿದೆ. ಕರ್ನಾಟಕದಲ್ಲಿ ಬಿಜೆಪಿಯ ದಯನೀಯ ಸ್ಥಿತಿಗೆ ಕಾರ್ಯಕರ್ತರು ಕಾರಣರಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಕೇಂದ್ರ ನಾಯಕರು ಹೇಳಿದಾಗ ಅದಕ್ಕೆ ನಾನು ಒಪ್ಪಿದ್ದೆ. ಪಕ್ಷದ ಹಲವರ ಪೈಕಿ ನಾನೊಬ್ಬನೇ ಈ ನಿರ್ಧಾರಕ್ಕೆ ಒಪ್ಪಿದ್ದೆ. ಆದರೆ. ನನ್ನ ಮಗನಿಗೂ ಲೋಕಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿಲಾಗಿದೆ. ಇದು ನನ್ನ ತಪ್ಪೇ?, ನಾನು ಕೇಂದ್ರ ನಾಯಕರ ಮಾತನ್ನು ಪ್ರಾಮಾಣಿಕವಾಗಿ ಅನುಸರಿಸಿದ್ದೇನೆಂದು ತಿಳಿಸಿದರು.

ಕೆ.ಎಸ್.ಈಶ್ವರಪ್ಪ
ಏಪ್ರಿಲ್ 12ಕ್ಕೆ ನಾಮಪತ್ರ ಸಲ್ಲಿಕೆ: ಪಕ್ಷೇತರನಾಗಿ ಸ್ಪರ್ಧೆ ಎಂದು ಘೋಷಿಸಿರುವ ಕೆ ಎಸ್ ಈಶ್ವರಪ್ಪ

ಬಳಿಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡ ಈಶ್ವರಪ್ಪ, ಈಶ್ವರಪ್ಪ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿದ್ದೇ ಆದರೆ, ತಮ್ಮ ಪುತ್ರ ಬಿವೈ ವಿಜಯೇಂದ್ರ ಅವರನ್ನೂ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕೆಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಯಡಿಯೂರಪ್ಪ ಒತ್ತಡ ಹೇರಿದ್ದರು. ಆದರೆ, ವಿಜಯೇಂದ್ರ ಶಾಸಕ ಕೂಡ ಆಗಿರಲಿಲ್ಲ. ಅವರನ್ನು ಸಂಪುಟಕ್ಕೆ ಹೇಗೆ ಸೇರಿಸಿಕೊಳ್ಳಲು ಸಾಧ್ಯ ಎಂದು ಬೊಮ್ಮಾಯಿ ಪ್ರಶ್ನಿಸಿದ್ದರು. ಈ ವಏಳೆ ಯಡಿಯೂರಪ್ಪ ಅವರು ತಮ್ಮ ಮಗನನ್ನು ಮಂತ್ರಿ ಮಾಡಿ ನಂತರ ಅವರನ್ನು ಎಂಎಲ್‌ಸಿ ಮಾಡಬಹುದು ಎಂದು ಹೇಳಿದ್ದರು. ಹೀಗಾಗಿಯೇ ನನಗೆ ಸಚಿವ ಸ್ಥಾನ ನೀಡಿರಲಿಲ್ಲ ಎಂದು ಆರೋಪಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com