ಚಾಮರಾಜನಗರದಿಂದ ಸುನೀಲ್ ಭೋಸ್ ಸ್ಪರ್ಧೆ ಖಚಿತ: ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ

ಸಚಿವ ಎಚ್.ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಚಾಮರಾಜನಗರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಅವರು ಏ.3ರಂದು ಚಾಮರಾಜನಗರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ
ಸುನೀಲ್ ಬೋಸ್
ಸುನೀಲ್ ಬೋಸ್
Updated on

ಮೈಸೂರು: ಸಚಿವ ಎಚ್.ಸಿ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಚಾಮರಾಜನಗರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಅವರು ಏ.3ರಂದು ಚಾಮರಾಜನಗರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಬುಧವಾರ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಧಿಕೃತವಾಗಿ ಘೋಷಣೆ ಆಗಿಲ್ಲ. ಆದರೆ, ಅವರು ನಾಮಪತ್ರ ಸಲ್ಲಿಕೆ ಹಾಗೂ ಪ್ರಚಾರ ಕಾರ್ಯದ ವೇಳಾಪಟ್ಟಿಯನ್ನು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದಿಂದ‌ ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪೂರ್ವಾನುಮತಿ ಪಡೆದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುನೀಲ್ ಬೋಸ್
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಹಾದೇವಪ್ಪ ನಕಾರ; ದರ್ಶನ್ ಧ್ರುವನಾರಾಯಣಗೆ ಮಣೆ; ರೇಸ್ ನಲ್ಲಿ ಸುನೀಲ್ ಬೋಸ್!

ಸುನೀಲ್ ಬೋಸ್ ಗೆ ಟಿಕೆಟ್ ದೊರೆತಿರುವುದು ಹೈಕಮಾಂಡ್‌ನಿಂದ ಅಧಿಕೃತವಾಗಿ ಪ್ರಕಟವಾಗಬೇಕಾಗಿದೆ. ಅದಕ್ಕೂ ಮುನ್ನವೇ ಪ್ರಚಾರ ಹಾಗೂ ನಾಮಪತ್ರದ ವೇಳಾಪಟ್ಟಿ ಪ್ರಕಟ ಆಗಿರುವುದು ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com