ಕೋಲಾರ ಟಿಕೆಟ್ ವಿಚಾರ: ಮುನಿಯಪ್ಪ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ 'ಪುಟಗೋಸಿ' ಪದ ಬಳಕೆ!

ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ-ನಜೀರ್ ಅಹ್ಮದ್
ಸಿಎಂ ಸಿದ್ದರಾಮಯ್ಯ-ನಜೀರ್ ಅಹ್ಮದ್

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಿಂದ ಸಚಿವ ಮುನಿಯಪ್ಪ ಅಳಿಯ ಕೆ.ಜಿ.ಚಿಕ್ಕ ಪೆದ್ದಣ್ಣರನ್ನು ಕಣಕ್ಕಿಳಿಸುವ ವಿಚಾರ ಇದೀಗ ಸ್ಥಳೀಯ ಶಾಸಕರ ಹಾಗೂ ವಿಧಾನ ಪರಿಷತ್ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದ್ದು ರಾಜಿನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಈ ಮಧ್ಯೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಸಚಿವ ಕೆಹೆಚ್​​ ಮುನಿಯಪ್ಪರ ವಿರುದ್ಧ ಪುಟಗೋಸಿ ಪದ ಬಳಕೆ ಮಾಡಿದ್ದಾರೆ. ನಾನು ಸಚಿವನಾಗಿದ್ದಾಗ ಮುನಿಯಪ್ಪ ಬ್ಯಾಗ್​ ಹಿಡಿದುಕೊಂಡು ಬರುತ್ತಿದ್ದ. ಕೆಎಚ್ ಮುನಿಯಪ್ಪ ಒಬ್ಬ ಪುಟಗೋಸಿ. ಮುನಿಯಪ್ಪ ಪುಟಗೋಸಿ ಬ್ಯಾಗ್​ ಹಿಡಿದುಕೊಂಡು ನನ್ ಹಿಂದೆ ಬರುತ್ತಿದ್ದ ಎಂದು ಹೇಳಿದ್ದರು. ಈ ಹೇಳಿಕೆಗೆ ಇದೀಗ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ಇನ್ನು ತಮ್ಮ ವಿರುದ್ಧ ನಜೀರ್ ಅಹ್ಮದ್ ಪುಟಗೋಸಿ ಪದ ಬಳಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮುನಿಯಪ್ಪ ಅವರು, ನಜೀರ್ ಅಹ್ಮದ್ ಸಣ್ಣತನದ ಮಾತನಾಡಿದ್ದಾರೆ. ನಾನು ಅವರಷ್ಟು ಕೆಳಮಟ್ಟಕ್ಕೆ ಇಳಿದು ಮಾತನಾಡುವುದಿಲ್ಲ. ನಾನು ರಾಷ್ಟ್ರಮಟ್ಟದಲ್ಲಿ ರಾಜಕಾರಣ ಮಾಡಿದ್ದೇನೆ. ನಜೀರ್ ಅಹ್ಮದ್​ರ ಯಾವುದೇ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ-ನಜೀರ್ ಅಹ್ಮದ್
ಕೋಲಾರ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ: ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದಕ್ಕೆ ವಿರೋಧ, ಸಚಿವ ಸುಧಾಕರ್ ಸೇರಿ ಆರು ಮಂದಿ ಶಾಸಕರ ರಾಜೀನಾಮೆ ಬೆದರಿಕೆ!

ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಲೋಕಸಭೆ ಚುನಾವಣೆಗೆ ಕೋಲಾರ ಕ್ಷೇತ್ರದ ಟಿಕೆಟ್ ನೀಡುವ ಸಂಬಂಧ ಕಾಂಗ್ರೆಸ್​ನಲ್ಲಿ ಆಂತರಿಕ ಕಲಹ ತಾರಕಕ್ಕೇರಿದ್ದು ಸಚಿವ ಎಂ ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹಮದ್ ತೀವ್ರವಾಗಿ ವಿರೋಧಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಅವರಿಗೆ ಕ್ಷೇತ್ರದ ಭಿನ್ನಮತ ಸ್ಫೋಟ ವಿಷಯ ತಲುಪಿದ್ದು ಸದ್ಯಕ್ಕೆ ಕೋಲಾರ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಘೋಷಿಸದೆ ತಡೆಹಿಡಿಯಲು ನಿರ್ಧರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com