ಮತದಾರರು ಬಿಜೆಪಿಗೆ ಮತದಾನ ಮಾಡಿ ಕಾಂಗ್ರೆಸ್​​ಗೆ ಕಪಾಳ ಮೋಕ್ಷ ಮಾಡಲಿದ್ದಾರೆ: ಮಾಜಿ ಸಿಎಂ ಬೊಮ್ಮಾಯಿ

ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಕಪಾಳಕ್ಕೆ ಹೊಡಿತಾರೆ. ಈ ಮೂಲಕ ಪರೋಕ್ಷವಾಗಿ ಮತದಾರರು ಕಾಂಗ್ರೆಸ್​ಗೆ ಕಪಾಳಮೋಕ್ಷ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on: 

ಹುಬ್ಬಳ್ಳಿ: ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಕಪಾಳಕ್ಕೆ ಹೊಡಿತಾರೆ. ಈ ಮೂಲಕ ಪರೋಕ್ಷವಾಗಿ ಮತದಾರರು ಕಾಂಗ್ರೆಸ್​ಗೆ ಕಪಾಳಮೋಕ್ಷ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ಸಚಿವ ಶಿವರಾಜ್‌ ತಂಗಡಗಿ ಮಾಡಿರುವ ಟೀಕೆಗೆ ತಿರುಗೇಟು ನೀಡಿದರು.

ಬಳಿಕ ಚುನಾವಣ ಪ್ರಚಾರ ವಿಚಾರವಾಗಿ ಮಾತನಾಡಿ, ನಮ್ಮ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಚಾರಕ್ಕೆ ಬರುತ್ತಾರೆ. ರಾಷ್ಟ್ರೀಯ ನಾಯಕರು ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ‌ 3-2 ದಿನಗಳಲ್ಲಿ ರಾಷ್ಟ್ರೀಯ ನಾಯಕರ ಟೂರ್ ಫಿಕ್ಸ್ ಆಗಲಿದೆ ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ
ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಸಚಿವ ಶಿವರಾಜ್ ತಂಗಡಗಿ ವಿರುದ್ಧ ದೂರು ದಾಖಲು

ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣಯಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ಹೀಗಾಗಿ ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತದೆ. ಈಗಾಗಲೇ ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ. ಅವರು ಧಾರವಾಡ ಮತ್ತು ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ ಎಂದು ತಿಳಿಸಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಬಂದಿರುವುದರಿಂದ ಬಲ ಹೆಚ್ಚಿದೆ. 3-4 ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ. ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಎಂಬ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅದು ಅವರ ಅನುಭವದ ಮಾತು ಎಂದು ಹೇಳುವ ತಿರುಗೇಟು ನೀಡಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರನ್ನು ಬೆಂಬಲಿಸಲು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ನಿರಾಕರಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಹೇಳಿಕೆ ನೀಡಿದವರೇ ಇದಕ್ಕೆ ಉತ್ತರ ನೀಡಲು ಸಾಧ್ಯ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com