ಟಿಕೆಟ್ ವಿಚಾರದಲ್ಲಿ ಬಂಡಾಯ: ಕೋಲಾರ ಭಾಗದ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ, ಡಿಸಿಎಂ ಸಂಧಾನ ಸಭೆ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂಧಾನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಚಿವ ಡಾ.ಎಂ. ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೊತ್ತನೂರು ಮಂಜುನಾಥ್ ಮತ್ತಿತರ ನಾಯಕರು ಪಾಲ್ಗೊಂಡರು.
ಕೋಲಾರ ಭಾಗದ ಪಕ್ಷದ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಕೋಲಾರ ಭಾಗದ ಪಕ್ಷದ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: ಕೋಲಾರ ಲೋಕಸಭೆ ಕ್ಷೇತ್ರದ ಟಿಕೆಟ್ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಬಣ ರಾಜಕೀಯದಿಂದಾಗಿ ಬುಧವಾರ ರಾಜೀನಾಮೆ ಪ್ರಹಸನದಂತಹ ಹೈಡ್ರಾಮವೇ ನಡೆದಿತ್ತು. ಆಹಾರ ಸಚಿವ ಮುನಿಯಪ್ಪ ಅವರ ಆಳಿಯ ಚಿಕ್ಕಪೆದ್ದಣ್ಣನಿಗೆ ಟಿಕೆಟ್ ಖಚಿತವಾಗುತ್ತಿದ್ದಂತೆಯೇ, ಉನ್ನತ ಶಿಕ್ಷಣ ಸಚಿವ ಡಾ.ಎಂ. ಸಿ. ಸುಧಾಕರ್ ಸೇರಿದಂತೆ ರಮೇಶ್ ಕುಮಾರ್ ಬಣದ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದರು. ಐವರು ಶಾಸಕರು, ಇಬ್ಬರು ವಿಧಾನಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಅವರು ಕೋಲಾರ ನಾಯಕರ ಜೊತೆ ಸಂಧಾನ ಸಭೆ ನಡೆಸಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಂಧಾನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಸಚಿವ ಡಾ.ಎಂ. ಸಿ. ಸುಧಾಕರ್, ಶಾಸಕರಾದ ಪ್ರದೀಪ್ ಈಶ್ವರ್, ಕೊತ್ತನೂರು ಮಂಜುನಾಥ್ ಮತ್ತಿತರ ನಾಯಕರು ಪಾಲ್ಗೊಂಡರು.

ಕೋಲಾರ ಭಾಗದ ಪಕ್ಷದ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಕೋಲಾರ: ಮುನಿಯಪ್ಪ ಅಳಿಯನಿಗೆ ಕಾಂಗ್ರೆಸ್ ಟಿಕೆಟ್? ಸಚಿವ ಸುಧಾಕರ್ ಸೇರಿ ಆರು ಶಾಸಕರ ವಿರೋಧ, ರಾಜೀನಾಮೆ ಬೆದರಿಕೆ!

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಇಂದಿನ ಸಭೆಯಲ್ಲಿ ಜಿಲ್ಲೆಯ ಪಕ್ಷದ ಎಲ್ಲಾ ಶಾಸಕರೂ ಭಾಗವಹಿಸಿದ್ದು, ಸಂಧಾನ ಸಭೆ ಯಶಸ್ವಿಯಾಗಿದೆ. ಹೈಕಮಾಂಡ್ ಆದೇಶಕ್ಕೆ ಬದ್ದ ಎಂದು ಶಾಸಕರು ಹೇಳಿದ್ದಾರೆ. ಟಿಕೆಟ್ ವಿಚಾರದಲ್ಲಿ ಯಾವುದೇ ವ್ಯಕ್ತಿಯ ಹೆಸರು ಚರ್ಚೆ ಆಗಿಲ್ಲ, ಶಾಸಕರ ವೈಯಕ್ತಿ ಅಭಿಪ್ರಾಯವನ್ನು ಸಿಎಂ, ಡಿಸಿಎಂ ಹೇಳಿದ್ದಾರೆ. ಹೈಕಮಾಂಡ್ ಹೇಳಿದ್ದೆ ಪೈನಲ್ ಎಂದು ಶಾಸಕರು ಹೇಳಿದ್ದಾರೆ. ಅಲ್ಲದೇ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಶಾಸಕರುಗಳಿಗೆ ಸಿಎಂ, ಡಿಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಕೋಲಾರ ಭಾಗದ ಪಕ್ಷದ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
ಕೋಲಾರ ಟಿಕೆಟ್ ವಿಚಾರ: ಮುನಿಯಪ್ಪ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ 'ಪುಟಗೋಸಿ' ಪದ ಬಳಕೆ!

ಸಚಿವ ಎಂ.ಸಿ.ಸುಧಾಕರ್ ಮಾತನಾಡಿ, ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸುವುದಾಗಿ ತಿಳಿಸಿದ್ದಾರೆ. ಸಿಎಂ, ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಯಾರಿಗೆ ಟಿಕೆಟ್ ಕೊಟ್ಟರೂ ಒಂದಾಗಿ ಕೆಲಸ ಮಾಡ್ತೀವಿ. ನಮ್ಮ ಜಗಳ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆ ಲಾಭ ಆಗಲ್ಲ. ನಮ್ಮ ಪಕ್ಷದ ಅಭ್ಯರ್ಥಿಯೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನೊಂದೆಡೆ ಮಾತನಾಡಿದ ಮುನಿಯಪ್ಪ, ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 40 ವರ್ಷಗಳಿಂದ ರಾಜಕೀಯ ಮಾಡಿದ್ದು, ಪಕ್ಷ 10 ವರ್ಷ ಕೇಂದ್ರದಲ್ಲಿ ಸಚಿವನನ್ನಾಗಿ ಮಾಡಿದೆ. ಕಾಂಗ್ರೆಸ್ ನ ಹಲವು ಕುಟುಂಬದವರಿಗೆ ಟಿಕೆಟ್ ನೀಡಿರುವುದರಿಂದ ಸಹಜವಾಗಿ ನಾನೂ, ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ದೊರೆಯುವ ಆಶಾಭಾವನೆಯಿದೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿ ಕಾರ್ಯನಿರ್ವಹಿಸುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com