ರೈತರಿಗೆ ಬೆಂಬಲ ಬೆಲೆ ಕೊಡಿಸುವುದು ನನ್ನ ಗುರಿ, ತಂದೆ ಹಾದಿಯಲ್ಲಿ ಸಾಗಲು ಆಶೀರ್ವದಿಸಿ: ಗೀತಾ ಶಿವರಾಜ್ ಕುಮಾರ್

ರೈತರಿಗೆ ಬೆಂಬಲ ಬೆಲೆ ಕೊಡಿಸುವುದು ನನ್ನ ಗುರಿಯಾಗಿದ್ದು, ತಂದೆ ಹಾದಿಯಲ್ಲಿ ಸಾಗಲು ಆಶೀರ್ವದಿಸಿ ಎಂದು ಗೀತಾ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.
ಬುಧವಾರ ಸಂಜೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯಲ್ಲಿ ನಟ ಶಿವರಾಜಕುಮಾರ್ ಹಾಗೂ ಅವರ ಪತ್ನಿ ಗೀತಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಬುಧವಾರ ಸಂಜೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯಲ್ಲಿ ನಟ ಶಿವರಾಜಕುಮಾರ್ ಹಾಗೂ ಅವರ ಪತ್ನಿ ಗೀತಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ: ರೈತರಿಗೆ ಬೆಂಬಲ ಬೆಲೆ ಕೊಡಿಸುವುದು ನನ್ನ ಗುರಿಯಾಗಿದ್ದು, ತಂದೆ ಹಾದಿಯಲ್ಲಿ ಸಾಗಲು ಆಶೀರ್ವದಿಸಿ ಎಂದು ಗೀತಾ ಶಿವರಾಜ್ ಕುಮಾರ್ ಅವರು ಹೇಳಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜನರು ಆಶಿರ್ವಾದ ಮಾಡಿದರೆ ಕ್ಷೇತ್ರವನ್ನು ಅಭಿವೃದ್ಧಿ ಪಥದಲ್ಲಿ ಕೊಡೊಯ್ಯುವ ಮಹತ್ವಾಕಾಂಕ್ಷೆಯಿದೆ. ಮುಖ್ಯಮಂತ್ರಿಗಳಾಗಿದ್ದಾಗ ತಂದೆ ಬಂಗಾರಪ್ಪನವರು ಅನುಷ್ಠಾನಕ್ಕೆ ತಂದ ಯೋಜನೆಗಳು ಇಂದಿಗೂ ಜ್ವಲಂತ. ಅವರು ಹಾಕಿಕೊಟ್ಟ ಅಭಿವೃದ್ಧಿ ಹಾದಿಯಲ್ಲಿಯೇ ಸಾಗುತ್ತೇನೆ ಎಂದು ಹೇಳಿದರು.

ಮಧು ಸೋಲು ನಮ್ಮ ತಂದೆ ಬಂಗಾರಪ್ಪ ಅವರಿಗೆ ನೆಮ್ಮದಿ ನೀಡಿರಲಿಲ್ಲ. ನಾನು ಅನೇಕರನ್ನು ಶಾಸಕರನ್ನಾಗಿ ಮಾಡಿದ್ದೇನೆ. ಮಗನನ್ನು ಶಾಸಕನನ್ನಾಗಿ ಮಾಡಲು ಆಗಲಿಲ್ಲ ಎಂದು ಬೇಸರಪಟ್ಟುಕೊಳ್ಳುತ್ತಿದ್ದರು. ಆರಂಭದಲ್ಲಿ ಸೋಲು ನೀಡಿದ್ದರೂ, ಸೊರಬದ ಜನರು ಕೊನೆಗೆ ದೊಡ್ಡ ಗೆಲುವನ್ನು ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಮಂತ್ರಿ ಮಾಡಿದರು. ತಂದೆ ಹಾಗೂ ತಮ್ಮ, ಬಡವರ ಪರವಾಗಿ ಸೇವೆ ಮಾಡಿದ್ದಾರೆ. ನನಗೂ ಜನರ ಸೇವೆ ಮಾಡುವ ಅವಕಾಶ ಕೊಡಿ ಎಂದು ಕೇಳಿದರು.

ಸಚಿವ ಮಧು ಬಂಗಾರಪ್ಪ ಮಾತನಾಡಿ, ನಮ್ಮ ತಂದೆ ದಿವಂಗತ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರು ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿದಿರುವ ನನ್ನ ಸಹೋದರಿ ಗೀತಾ ಶಿವರಾಜಕುಮಾರ್ ಅವರಿಗೆ ಗ್ರಾಮೀಣ ಮತದಾರರು ಬೆಂಬಲ ನೀಡಬೇಕೆಂದು ಮನವಿ ಮಾಡಿಕೊಂಡರು.

ಬುಧವಾರ ಸಂಜೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯಲ್ಲಿ ನಟ ಶಿವರಾಜಕುಮಾರ್ ಹಾಗೂ ಅವರ ಪತ್ನಿ ಗೀತಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಪತ್ನಿ ಗೀತಾ ಪರ ಪ್ರಚಾರ: ನಟ ಶಿವರಾಜ್ ಕುಮಾರ್ ಚಿತ್ರ, ಜಾಹೀರಾತು ನಿಷೇಧಿಸಿ; ಆಯೋಗಕ್ಕೆ ಬಿಜೆಪಿ ದೂರು

ರಾಜ್ಯದ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರಿಗೆ ಭರವಸೆಯ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತಿವೆ. ಅದೇ ರೀತಿ, ಎಸ್ ಬಂಗಾರಪ್ಪ ಅವರ ಆಡಳಿತದಲ್ಲಿ, ತುಳಿತಕ್ಕೊಳಗಾದ ವರ್ಗಗಳನ್ನು ಬೆಂಬಲಿಸಲು ಉಚಿತ ವಿದ್ಯುತ್ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ.

ರೈತರು ಎದುರಿಸುತ್ತಿರುವ ಶರಾವತಿ ಯೋಜನೆ ಮತ್ತು ‘ಬಗರ್ ಹುಕುಂ’ ಸಮಸ್ಯೆಗಳಿಗೆ ಪರಿಹಾರ ದೆಹಲಿಯಲ್ಲಿದೆ. ಕಳೆದ 10 ವರ್ಷಗಳಿಂದ ಸಂಸದರಾಗಿದ್ದರೂ ಬಿವೈ ರಾಘವೇಂದ್ರ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಹೀಗಾಗಿ ಈ ಬಾರಿ ಗೀತಾ ಶಿವರಾಜ್ ಕುಮಾರ್ ಅವರನ್ನು ಗೆಲುವು ಸಾಧಿಸುವಂತೆ ಮಾಡಿ. ಗೀತಾ ಅವರು ಗೆಲವು ಜಿಲ್ಲೆಯ ತುಳಿತಕ್ಕೊಳಗಾದ ವರ್ಗಗಳಿಗೆ ನ್ಯಾಯವನ್ನು ನೀಡುತ್ತದೆ ಎಂದು ಹೇಳಿದರು.

ಈ ವೇಳೆ ಮಾತನಾಡಿದ ಗೀತಾ ಅವರು, ರೈತರಿಗೆ ಬೆಂಬಲ ಬೆಲೆ ದೊರಕಿಸಿಕೊಡಲು ಶ್ರಮಿಸುವುದಾಗಿ ಭರವಸೆ ನೀಡಿದರು. ಸಚಿವ ಮಧು ಬಂಗಾರಪ್ಪ ಅವರು ರಾಜ್ಯ ಮಟ್ಟದಲ್ಲಿ ರೈತರಿಗೆ ಸಹಾಯ ಮಾಡಿದರೆ, ಕೇಂದ್ರ ಮಟ್ಟದಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದರು.

ಬುಧವಾರ ಸಂಜೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯಲ್ಲಿ ನಟ ಶಿವರಾಜಕುಮಾರ್ ಹಾಗೂ ಅವರ ಪತ್ನಿ ಗೀತಾ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಲೋಕಸಭೆ ಚುನಾವಣೆ: 39 ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ

ಬಳಿ ಮಾತನಾಡಿದ ನಟ ಶಿವರಾಜಕುಮಾರ್ ಅವರು, ಬದಲಾವಣೆಯ ಅಗತ್ಯವನ್ನು ಒತ್ತಿ ಹೇಳಿದರು, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಡವರಿಗೆ ಪರಿಣಾಮಕಾರಿಯಾಗಿ ಸಹಾಯ ಮಾಡಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳು ಮೌಲ್ಯಯುತವಾಗುತ್ತವೆ. ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ಪ್ರಯೋಜನವನ್ನು ನೀಡಿದೆ ಎಂದು ನಾನು ನಂಬಿದ್ದೇನಂದು ಹೇಳಿದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಮಾತನಾಡಿ, ಮಾಜಿ ಸಿಎಂ ಬಂಗಾರಪ್ಪ ಅವರು ಏತ ಲಿಫ್ಟ್ ನೀರಾವರಿ ಯೋಜನೆಗಳು ಹೆಮ್ಮೆಯ ವಿಷಯವಾಗಿದೆ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗಿದೆ. ಇದೀಗ ಬಿಜೆಪಿಯನ್ನು ಬೇರು ಸಮೇತ ಕಿತ್ತೊಗೆಯುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗೀತಾ ಅವರ ಹಿಂದೆ ಒಗ್ಗೂಡೋಣ ಎಂದು ಕರೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com