ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ: ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಂಬರೀಶ್

ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿ ಟಿಕೆಟ್ ವಂಚಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಮನವೊಲಿಕೆ ಕಾರ್ಯ ನಡೆದಿದೆ.
ಸುಮಲತಾ ಅಂಬರೀಶ್, ಬಿ.ವೈ. ವಿಜಯೇಂದ್ರ
ಸುಮಲತಾ ಅಂಬರೀಶ್, ಬಿ.ವೈ. ವಿಜಯೇಂದ್ರ

ಬೆಂಗಳೂರು: ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿ ಟಿಕೆಟ್ ವಂಚಿತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರ ಮನವೊಲಿಕೆ ಕಾರ್ಯ ನಡೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಜೆಪಿ ನಗರದಲ್ಲಿರುವ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ತೆರಳಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸುವ ಮೂಲಕ ಅವರ ಅಸಮಾಧಾನವನ್ನು ಶಮನಗೊಳಿಸುವ ಪ್ರಯತ್ನ ಮಾಡಿದರು.

ಸುಮಲತಾ ಅಂಬರೀಶ್, ಬಿ.ವೈ. ವಿಜಯೇಂದ್ರ
ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಗೆ ಸುಮಲತಾ ಗೈರು: ಮಾರ್ಚ್ 30ರಂದು ಬೆಂಬಲಿಗರ ಜೊತೆ ಸಮಾಲೋಚನೆ

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅಂಬರೀಶ್, ನಾಳೆ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿದ ನಂತರ ತಮ್ಮ ಮುಂದಿನ ನಡೆ ತಿಳಿಸುವುದಾಗಿ ಹೇಳಿದ್ದೇನೆ. ವಿಜಯೇಂದ್ರ ತಮ್ಮ ಅಭಿಪ್ರಾಯ ಮತ್ತು ನಿರೀಕ್ಷೆಗಳನ್ನು ವ್ಯಕ್ತಪಡಿಸಿದರು. ನನಗೂ ಜಿಲ್ಲೆ ಮತ್ತು ಚುನಾವಣೆಯ ಬಗ್ಗೆ ಇರುವ ಕಾಳಜಿಯನ್ನು ಹೇಳಿದ್ದೇನೆ. ನಾನು ಬಿಜೆಪಿಯಲ್ಲೇ ಇರಬೇಕೆಂದು ಬಯಸಿದ್ದರಿಂದ ಪಕ್ಷ ಸೇರುವಂತೆ ಕೇಳಿಕೊಂಡರು. ನನ್ನ ಬೆಂಬಲಿಗರನ್ನು ಸಂಪರ್ಕಿಸದೆ ಏಕಪಕ್ಷೀಯವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅವರ ನಿರೀಕ್ಷೆ ಮತ್ತು ಅಭಿಪ್ರಾಯಗಳನ್ನು ಆಲಿಸುವುದು ನನ್ನ ಕರ್ತವ್ಯ. ಮಂಡ್ಯದಲ್ಲಿಯೇ ನನ್ನ ನಿಲುವು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದೇನೆ ಎಂದು ತಿಳಿಸಿದರು.

ಸುಮಲತಾ ಅಂಬರೀಶ್, ಬಿ.ವೈ. ವಿಜಯೇಂದ್ರ
ಸಂಸದೆ ಸುಮಲತಾ ತಾಳ್ಮೆಯಿಂದಿದ್ದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯಲಿದೆ: ಬಿ.ಎಸ್ ಯಡಿಯೂರಪ್ಪ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕ್ಷೇತ್ರ ಬಿಟ್ಟು ಕೊಡುವ ಬದಲು ತನಗಾಗಿಯೇ ಉಳಿಸಿಕೊಳ್ಳಬೇಕಿತ್ತು ಎಂದು ಪುನರುಚ್ಚರಿಸಿದ ಸುಮಲತಾ, ಈಗಾಗಲೇ ಮುಗಿದಿರುವ ವಿಷಯಗಳನ್ನು ಚರ್ಚಿಸಲು ಯಾವುದೇ ಅರ್ಥವಿಲ್ಲ. ಮುಂದಿನ ದಿನಗಳಲ್ಲಿ ತನ್ನ ನಿಲುವನ್ನು ಖಂಡಿತವಾಗಿ ಬಹಿರಂಗಪಡಿಸುತ್ತೇನೆ ಎಂದರು. ಇದೇ ವೇಳೆ ಕುಮಾರಸ್ವಾಮಿ ಭೇಟಿ ಮಾಡಲು ಇಚ್ಛಿಸಿರುವ ಕುರಿತು ಪ್ರತಿಕ್ರಿಯಿಸಿದ ಸುಮಲತಾ, ಅವರನ್ನು ಭೇಟಿ ಮಾಡಲು ನನ್ನ ಅಭ್ಯಂತರವಿಲ್ಲ ಎಂದು ಹೇಳಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ , ತಮ್ಮ ಮನವಿಗೆ ಸುಮಲತಾ ಸ್ಪಂದಿಸಿದ್ದಾರೆ. ಆದರೆ, ತನ್ನ ಬೆಂಬಲಿಗರೊಂದಿಗೆ ಚರ್ಚಿಸಿದ ನಂತರ ಮುಂದಿನ ನಡೆ ತಿಳಿಸುವುದಾಗಿ ಹೇಳಿದ್ದಾರೆ."ಅವರು ನಮ್ಮೊಂದಿಗೆ ಉಳಿದು ನಮ್ಮ ಪಕ್ಷವನ್ನು ಬಲಪಡಿಸುತ್ತಾರೆ ಎಂಬ ದೃಢ ನಂಬಿಕೆ ನನಗಿದೆ. ಇದು ಅವರ ಸೋಲು ಎಂದು ಭಾವಿಸಬಹುದು ಆದರೆ ಎಲ್ಲವೂ ಸರಿಯಾಗುತ್ತದೆ ಎಂದು ಹೇಳಿರುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com