ಹಾಸನ: ದೇವೇಗೌಡರ ಆಶೀರ್ವಾದ ಪಡೆದು ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ!

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ತಮ್ಮ ತಂದೆ ಹೆಚ್.ಡಿ.ರೇವಣ್ಣ, ಶಾಸಕರಾದ ಎ.ಮಂಜು, ಸಿ.ಎನ್.ಬಾಲಕೃಷ್ಣ ಮತ್ತು ಸ್ವರೂಪ್ ಪ್ರಕಾಶ್ ಅವರ ಸಮ್ಮುಖದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ದೇವೇಗೌಡರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ
ದೇವೇಗೌಡರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ

ಹಾಸನ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಹಾಸನದಲ್ಲಿ ತಮ್ಮ ತಂದೆ ಹೆಚ್.ಡಿ.ರೇವಣ್ಣ, ಶಾಸಕರಾದ ಎ.ಮಂಜು, ಸಿ.ಎನ್.ಬಾಲಕೃಷ್ಣ ಮತ್ತು ಸ್ವರೂಪ್ ಪ್ರಕಾಶ್ ಅವರ ಸಮ್ಮುಖದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ತಮ್ಮ ಕುಟುಂಬದ ಅರ್ಚಕರ ಸಲಹೆಯಂತೆ ಕಟ್ಟುನಿಟ್ಟಾಗಿ ಬೆಳಗ್ಗೆ 11.20ಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರಜ್ವಲ್, ಸರಿಯಾಗಿ 11.30ಕ್ಕೆ ಚುನಾವಣಾಧಿಕಾರಿ ಸಿ ಸತ್ಯಭಾಮಾ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ ಹೊಳೆನರಸೀಪುರ ತಾಲೂಕಿನ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ಹರದನಹಳ್ಳಿಯ ಈಶ್ವರ ದೇವಸ್ಥಾನ ಹಾಗೂ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆಯ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ತಮ್ಮ ತಾತ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಆಶೀರ್ವಾದ ಪಡೆದು ಪ್ರಜ್ವಲ್ ನಾಮಪತ್ರ ಸಲ್ಲಿಸಿದರು.

ಮಾವಿನಕೆರೆ ರಂಗನಾಥನ ಸನ್ನಿಧಿಯಲ್ಲಿ ಡೆಪಾಸಿಟ್ ಹಣದೊಂದಿಗೆ ನಾಮಪತ್ರ ಇರಿಸಿ ಅರ್ಚಕರಿಂದ ಆಶೀರ್ವಾದ ಪಡೆದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ವಲ್, ಏಪ್ರಿಲ್ 4 ರಂದು ಎರಡು ಸೆಟ್ ನಾಮಪತ್ರ ಸಲ್ಲಿಸಲಿದ್ದೇನೆ, ನಂತರ ಹಾಸನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರಿಂದ ಸಾರ್ವಜನಿಕ ರ್ಯಾಲಿ ನಡೆಯಲಿದೆ. ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಮುಖಂಡರಾದ ಬಿಎಸ್‌ ಯಡಿಯೂರಪ್ಪ, ಬಿವೈ ವಿಜಯೇಂದ್ರ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ದೇವೇಗೌಡರ ಆಶೀರ್ವಾದ ಪಡೆದ ಪ್ರಜ್ವಲ್ ರೇವಣ್ಣ
ಲೋಕಸಭಾ ಚುನಾವಣೆ: ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ!

ಹಾಸನದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 40.94 ಕೋಟಿ ಆಸ್ತಿ ಘೋಷಿಸಿಕೊಂಡಿದ್ದಾರೆ. ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಪ್ರಜ್ವಲ್ ಬಳಿ 1 ಕೆಜಿ ಚಿನ್ನ, 23 ಕೆಜಿ ಬೆಳ್ಳಿ ಹಾಗೂ 1.90 ಲಕ್ಷ ಮೌಲ್ಯದ ವಜ್ರಾಭರಣವಿದೆ. ಅವರ ಬಳಿ 9.29 ಲಕ್ಷ ನಗದು ಇದೆ.

ಅವರು ತಮ್ಮ ಕೃಷಿ ಭೂಮಿಯಿಂದ 2.75 ಕೋಟಿ ರೂ. ಮತ್ತು ಕೃಷಿಯೇತರ ಚಟುವಟಿಕೆಗಳಿಂದ 1.33 ಕೋಟಿ ರೂ. ಹಣ ಸಂಪಾದಿಸಿದ್ದಾರೆ. ಬೆಂಗಳೂರು, ಮೈಸೂರು, ನೆಲಮಂಗಲ ಮತ್ತು ಹೊಳೆನರಸೀಪುರದಲ್ಲಿ ವಾಣಿಜ್ಯ ಸಂಕೀರ್ಣ ಸೇರಿದಂತೆ ವಿವಿಧ ಆಸ್ತಿಗಳ ಮಾಲೀಕರೂ ಆಗಿದ್ದಾರೆ.

ಪ್ರಜ್ವಲ್ ತನ್ನ ಕುಟುಂಬ ಸದಸ್ಯರಿಂದ 4.48 ಕೋಟಿ ರೂ. ಸಾಲ ಪಡೆದಿದ್ದಾರೆ. ಪ್ರಜ್ವಲ್ ಬಳಿ 5 ಲಕ್ಷ ಮೌಲ್ಯದ ಟ್ರ್ಯಾಕ್ಟರ್, 31 ಹಸುಗಳು ಮತ್ತು ನಾಲ್ಕು ಹೋರಿಗಳಿವೆ. ಸರ್ಕಾರಕ್ಕೆ 3.04 ಕೋಟಿ ರೂ. ತೆರಿಗೆ ಪಾವತಿಸಬೇಕಾಗಿದೆ ಮತ್ತು ಈ ಪ್ರಕರಣವು ನ್ಯಾಯಾಲಯದಲ್ಲಿ ಬಾಕಿ ಉಳಿದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com