ಮೈತ್ರಿ ತಾತ್ಕಾಲಿಕವಲ್ಲ, ಚುನಾವಣೆ ನಂತರವೂ ನಮ್ಮ ಬಾಂಧವ್ಯ ಮುಂದುವರಿಯಲಿದೆ: ಎಚ್.ಡಿ. ದೇವೇಗೌಡ

ಮೈತ್ರಿ ತಾತ್ಕಾಲಿಕವಲ್ಲ, ಲೋಕಸಭೆ ಚುನಾವಣೆ ನಂತರವೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ ಹೇಳಿದ್ದಾರೆ.
ಎಚ್.ಡಿ ದೇವೇಗೌಡ
ಎಚ್.ಡಿ ದೇವೇಗೌಡ

ತುಮಕೂರು: ಮೈತ್ರಿ ತಾತ್ಕಾಲಿಕವಲ್ಲ, ಲೋಕಸಭೆ ಚುನಾವಣೆ ನಂತರವೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ತುಮಕೂರಿನಲ್ಲಿ ಶನಿವಾರ ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೇ ದೇವೇಗೌಡರು ಈ ಘೋಷಣೆ ಮಾಡಿದ್ದಾರೆ.

ಇತರೆ ಪಕ್ಷದ ಬೆಂಬಲದೊಂದಿಗೆ ಸರ್ಕಾರ ರಚಿಸಿರುವುದು ಸೇರಿದಂತೆ ದೇಶದಲ್ಲಿ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಸಿದ್ದರಾಮಯ್ಯ ಅವರ ಕುತಂತ್ರ ಬುದ್ಧಿಯಿಂದಾಗಿ ಕಾಂಗ್ರೆಸ್‌ಗೆ ಇಂತಹ ದುಃಸ್ಥಿತಿ ಬಂದಿದೆ. ಪಕ್ಷ ಹೀನಾಯ ಸ್ಥಿತಿಯಲ್ಲಿ ಇದ್ದರೂ ಜೆಡಿಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಂಡಿದ್ದರೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದೆ. ಬಲವಂತವಾಗಿ ಕರೆತಂದು ತುಮಕೂರು ಕ್ಷೇತ್ರದಿಂದ ನಿಲ್ಲುವಂತೆ ಮಾಡಿ ಸೋಲಿಸಿದರು. ಮೈಸೂರು ಕ್ಷೇತ್ರದ ಟಿಕೆಟ್‌ಗಾಗಿ ನನ್ನನ್ನು ನಿಲ್ಲುವಂತೆ ಮಾಡಿದರು. ಸಚಿವ ಕೆ.ಎನ್.ರಾಜಣ್ಣ ಜತೆಗೆ ಸೇರಿಕೊಂಡು ರಾತ್ರಿ ಒಂದು ಗಂಟೆವರೆಗೂ ಸಭೆ ನಡೆಸಿ, ಪಿತೂರಿ ಮಾಡಿ ಸೋಲಿಸಲು ಕಾರಣಕರ್ತರಾಗಿದ್ದೀರಿ ಎಂದು ಆರೋಪಿಸಿದರು.

ಎಚ್.ಡಿ ದೇವೇಗೌಡ
ನಿಮ್ಮೊಳಗಿನ ರಾಜಕೀಯ ನಾಯಕ ಅಷ್ಟೊಂದು ದುರ್ಬಲ ಅಸಹಾಯಕನಾಗಿ ಹೋದನೇ? ಆತ್ಮಾಭಿಮಾನವೂ ಕುಟುಕಲಿಲ್ಲವೇ?

ನಮ್ಮ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇರಲಿಲ್ಲ. ಯಾವ ಸಚಿವರೂ ಸ್ಪರ್ಧಿಸುವುದಾಗಿ ಹೇಳಲಿಲ್ಲ. ಕಾಂಗ್ರೆಸ್ ಇಂತಹ ಸ್ಥಿತಿಯಲ್ಲಿ ಇರಬೇಕಾದರೆ ನನ್ನ ಮೇಲೆ ಇಲ್ಲಸಲ್ಲದ ಆಪಾದನೆ ಮಾಡುತ್ತಿದ್ದಾರೆ. ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡರು ಎನ್ನುತ್ತಿದ್ದಾರೆ. ಅದಕ್ಕೆ ಯಾರು ಕಾರಣ. ನಮ್ಮ ಮೈತ್ರಿ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com