ಜೆಡಿಎಸ್ ಜೊತೆಗಿನ ಮೈತ್ರಿಯೊಂದಿಗೆ ಬಿಜೆಪಿ ಬಲಿಷ್ಠವಾಗಿದೆ: MLC ಎಂ.ಕೆ.ಪ್ರಾಣೇಶ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುತ್ತದೆ ಎಂದು ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶುಕ್ರವಾರ ಹೇಳಿದೆ.
ಚಿಕ್ಕಮಗಳೂರಿನಲ್ಲಿ ಶುಕ್ರವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇರುವುದು.
ಚಿಕ್ಕಮಗಳೂರಿನಲ್ಲಿ ಶುಕ್ರವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇರುವುದು.

ಚಿಕ್ಕಮಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುತ್ತದೆ ಎಂದು ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಶುಕ್ರವಾರ ಹೇಳಿದೆ.

ಎಂಎಲ್‌ಸಿ ಎಂ.ಕೆ.ಪ್ರಾಣೇಶ್ ಮಾತನಾಡಿ, ಎರಡು ಪಕ್ಷಗಳ ನಡುವಿನ ಅಸಮಾಧಾನಗಳ ಬಗೆಹರಿಸಲು ಹಲವು ಸುತ್ತಿನ ಮಾತುಕತೆ ಹಾಗೂ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರು ಮಾತನಾಡಿ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಪರ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ಮುಖಂಡರೊಂದಿಗೆ ಒಗ್ಗಟ್ಟಿನಿಂದ ಭಾಗಿಯಾಗಿ ಗೆಲುವಿಗೆ ಶ್ರಮಿಸಬೇಕಿದೆ ಎಂದು ಕರೆ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಶುಕ್ರವಾರ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇರುವುದು.
ಬಿಜೆಪಿ- ಜೆಡಿಎಸ್ ಸಮನ್ವಯ ಸಭೆ: ಎಲ್ಲಾ 28 ಸ್ಥಾನಗಳಲ್ಲಿ ಗೆಲ್ಲುತ್ತೇವೆ- ಹೆಚ್.ಡಿ. ದೇವೇಗೌಡ

ಪ್ರಸ್ತುತ ಎದುರಾಗಿದ್ದ ಗೊಂದಲಗಳನ್ನು ನಿವಾರಿಸಲಾಗಿದ್ದು, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪೂಜಾರಿ ಅವರನ್ನು ಬೆಂಬಲಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ತಾ.ಪಂ ಮತ್ತು ಜಿಪಂ ಚುನಾವಣೆಯಲ್ಲೂ ಈ ಮೈತ್ರಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಈ ಮೈತ್ರಿಯ ಯಶಸ್ಸನ್ನು ಖಚಿತಪಡಿಸಿಕೊಳ್ಳಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು.

ಆದರೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಕಷ್ಟ. ಇದು ದೇಶದ ಜಾತ್ಯತೀತ ರಚನೆಗೆ ವಿರುದ್ಧವಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರೊಬ್ಬರು ಹೇಳಿದ್ದಾರೆ,

ಈ ನಡುವೆ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಬಿಜೆಪಿಗೆ ಆನೆಯ ಬಲ ಬಂದಿದ್ದು, ಲೋಕಸಭೆ ಚುನಾವಣೆಯಲ್ಲಿ ನಿರಾಯಾಸವಾಗಿ ಗೆಲುವು ಸಾಧಿಸಲಿದೆ ಎಂಬ ಪ್ರಾಣೇಶ್ ಅವರ ಮಾತು ನಿಜವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com