KPSC ನೇಮಕಾತಿಯಲ್ಲಿ ರಾಜ್ಯ ಕಾಂಗ್ರೆಸ್ ಬಹುದೊಡ್ಡ ಅಕ್ರಮ; ನೇಮಕಾತಿ ಪಟ್ಟಿ ನಾಪತ್ತೆ ಆಗಿರುವುದೇ ಇದಕ್ಕೆ ಸಾಕ್ಷಿ: ಬಿಜೆಪಿ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕೆಪಿಎಸ್‌ಸಿ ನೇಮಕಾತಿಯಲ್ಲಿ ಬಹುದೊಡ್ಡ ಅಕ್ರಮ ನಡೆಸಿದ್ದು, ನೇಮಕಾತಿ ಪಟ್ಟಿಯೇ ನಾಪತ್ತೆ ಆಗಿರುವುದೇ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಹೇಳಿದೆ.
ಬಿಜೆಪಿ
ಬಿಜೆಪಿ
Updated on

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕೆಪಿಎಸ್‌ಸಿ ನೇಮಕಾತಿಯಲ್ಲಿ ಬಹುದೊಡ್ಡ ಅಕ್ರಮ ನಡೆಸಿದ್ದು, ನೇಮಕಾತಿ ಪಟ್ಟಿಯೇ ನಾಪತ್ತೆ ಆಗಿರುವುದೇ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಲೆಕ್ಷನ್‌, ಕಮಿಷನ್‌, ಟ್ರಾನ್ಸ್‌ಫರ್‌ ದಂಧೆ ನಡೆಸುತ್ತಿರುವ ಮಜಾವಾದಿ ಸಿದ್ದರಾಮಯ್ಯ ಸರ್ಕಾರ, ಇದೀಗ ಕೆಪಿಎಸ್‌ಸಿ ನೇಮಕಾತಿಯಲ್ಲೂ ಅಕ್ರಮ ನಡೆಸಿದೆ. ಈ ಅಕ್ರಮ ಬಯಲಿಗೆ ಬರಬಾರದು ಎಂದು ನೇಮಕಾತಿ ಪಟ್ಟಿಯನ್ನೇ ಕಳ್ಳತನ ಮಾಡಿ ನಾಪತ್ತೆ ಆಗಿದೆ ಎಂದು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದೆ ಎಂದು ಆರೋಪಿಸಿದೆ.

ಬಿಜೆಪಿ
KPSC ಕರ್ಮಕಾಂಡ: ಉದ್ಯೋಗ ಸೌಧ ಕಚೇರಿಯಿಂದ JEಗಳ ಆಯ್ಕೆ ಪಟ್ಟಿ ಗೌಪ್ಯ ಕಡತ ನಾಪತ್ತೆ!

ಮಜಾವಾದಿ ಸರ್ಕಾರ ಅಧಿಕಾರದಲ್ಲಿದ್ದಾಗ ಸರ್ಕಾರಿ ಕಡತಗಳು ಸುಟ್ಟು ಹೋಗುವುದು, ನಾಪತ್ತೆ ಆಗುವುದು ಸಾಮಾನ್ಯವಾಗಿ ಬಿಟ್ಟಿದೆ. ಕಡತಗಳು ದೊರೆತರೇ ಮಾತ್ರ ಕಳ್ಳರು ಸಿಕ್ಕು ಬೀಳುತ್ತಾರೆ. ಕಡತವೇ ಇಲ್ಲ ಎಂದರೆ, ಕಳ್ಳರು ರಾಜಾರೋಷವಾಗಿ ಓಡಾಡಬಹುದು ಎನ್ನುವುದೇ ಸ್ಲೀಪಿಂಗ್ ಸರ್ಕಾರ ದ ಮೂಲ ಮಂತ್ರ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com