ಚಿಕ್ಕಬಳ್ಳಾಪುರದಲ್ಲಿ NDAಗೆ ಹಿನ್ನಡೆ: HDK ಆಪ್ತ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಗೆ ಸೇರ್ಪಡೆ

ಲೋಕಸಭೆ ಚುನಾವಣೆಗೂ ಮುನ್ನ ಚಿಕ್ಕಬಳ್ಳಾಪುರದಲ್ಲಿ NDA ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಹಾಗೂ ಬೆಂಬಲಿಗರು ಇಂದು ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಸಿದ್ದರಾಮಯ್ಯ-ಕೆಪಿ ಬಚ್ಚೇಗೌಡ
ಸಿದ್ದರಾಮಯ್ಯ-ಕೆಪಿ ಬಚ್ಚೇಗೌಡ
Updated on: 

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಗೂ ಮುನ್ನ ಚಿಕ್ಕಬಳ್ಳಾಪುರದಲ್ಲಿ NDA ಮೈತ್ರಿಕೂಟಕ್ಕೆ ಹಿನ್ನಡೆಯಾಗಿದ್ದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಆಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಹಾಗೂ ಬೆಂಬಲಿಗರು ಇಂದು ಸಿಎಂ ಸಿದ್ದರಾಮಯ್ಯ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆಯಾದರು.

ಕೆ.ಪಿ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಮೈತ್ರಿ ಅಭ್ಯರ್ಥಿಯಾಗಿ ಡಾ.ಕೆ ಸುಧಾಕರ್​ಗೆ ಟಿಕೆಟ್​ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್​ಗೆ ಸೇರಿದ್ದಾರೆ. ಬಚ್ಚೇಗೌಡ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್​ ಸೇರಿದ್ದು ಇನ್ನು ಏಪ್ರಿಲ್ 2ರಂದು ಅಧಿಕೃತವಾಗಿ ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.

ಸಿದ್ದರಾಮಯ್ಯ-ಕೆಪಿ ಬಚ್ಚೇಗೌಡ
ಬಿಜೆಪಿ-ಜೆಡಿಎಸ್ ಕಾರ್ಯಕರ್ತರಲ್ಲಿ ಒಗ್ಗಟ್ಟಿಲ್ಲದ ಕಾರಣ ಚನ್ನಪಟ್ಟಣದಿಂದ ಅಮಿತ್ ಶಾ ರೋಡ್ ಶೋ: ಡಿಕೆ ಶಿವಕುಮಾರ್

ಜೆಡಿಎಸ್ ನಾಯಕರು ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನಮ್ಮ ರಾಜಕೀಯ ಎದುರಾಳಿ ಡಾ. ಕೆ ಸುಧಾಕರ್ ಪರ ನಾನು ನಿಲ್ಲುವುದಿಲ್ಲ. ಹೀಗಾಗಿ ನಾನು ಕಾಂಗ್ರೆಸ್​ ಸೇರುತ್ತಿದ್ದೇನೆ ಎಂದು ಕೆ.ಪಿ ಬಚ್ಚೇಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com