ರಾಮನಗರ: ಯುವತಿ ಜೊತೆಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಾಟ್ಸಪ್ ಕಾಲ್, ಅಪರಿಚಿತರ ವಿರುದ್ಧ FIR ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಯುವತಿಯದ್ದು ಎನ್ನಲಾದ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ. ಈ ಕುರಿತು ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈರಲ್ ವಿಡಿಯೋದಲ್ಲಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್
ವೈರಲ್ ವಿಡಿಯೋದಲ್ಲಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಯುವತಿಯದ್ದು ಎನ್ನಲಾದ ಸಂಭಾಷಣೆಯ ವಿಡಿಯೋ ವೈರಲ್ ಆಗಿದೆ. ಈ ಕುರಿತು ನಗರದ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತೆಯೂ ಆಗಿರುವ 25 ವರ್ಷದ ಯುವತಿಯೇ ಖುದ್ಧಾಗಿ ಠಾಣೆಗೆ ಬಂದು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಸಕ ಇಕ್ಬಾಲ್ ಹುಸೇನ್ ಮತ್ತು ನನ್ನ ನಡುವಿನ ಸಂಬಂಧ ತಂದೆ, ಮಗಳ ಸಂಬಂಧವಾಗಿದೆ. ನನ್ನ ಜೊತೆಯಾಗಲಿ ಅಥವಾ ಬೇರೆಯವರ ಜೊತೆಯಾಗಲಿ ಅವರು ಅಸಭ್ಯವಾಗಿ ವರ್ತಿಸಲ್ಲ ಎಂದು ದೂರಿನಲ್ಲಿ ಯುವತಿ ಉಲ್ಲೇಖಿಸಿದ್ದಾರೆ.

ವೈರಲ್ ವಿಡಿಯೋದಲ್ಲಿ ರಾಮನಗರ ಶಾಸಕ ಇಕ್ಬಾಲ್ ಹುಸೇನ್
Prajwal Revanna ಅಶ್ಲೀಲ ವಿಡಿಯೋ ವೈರಲ್ ಬೆನ್ನಲ್ಲೇ, ಸುದ್ದಿಗೆ ಗ್ರಾಸವಾದ ಕಾಂಗ್ರೆಸ್ ಶಾಸಕರ ವಾಟ್ಸಪ್ ಕಾಲ್!

ನಾನು ಶಾಸಕರೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ನಲ್ಲಿ ಮಾತನಾಡಿರುವಂತೆ ಅಶ್ಲೀಲ ವಿಡಿಯೋ ಸೃಷ್ಟಿಸಿರುವ ತಮ್ಮಣ್ಣಗೌಡ ಗುಂಡ್ಕಲ್ ಎಂಬುವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅದನ್ನು ಹಂಚಿಕೊಂಡು ನನ್ನ ಮಾನಕ್ಕೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com