ಬಿವೈ ರಾಘವೇಂದ್ರ
ಬಿವೈ ರಾಘವೇಂದ್ರ

ಮೋದಿ ರ್‍ಯಾಲಿ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದೆ: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ (ಸಂದರ್ಶನ)

Published on

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಸ್ಪರ್ಧೆಗೆ ಸಾಕ್ಷಿಯಾಗುತ್ತಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರು ಸೆಣಸಾಟ ನಡೆಸಲಿದ್ದಾರೆ.

ಕರ್ನಾಟಕದ ರಾಜಕೀಯದಲ್ಲಿ ಬಂಗಾರಪ್ಪ ಮತ್ತು ಯಡಿಯೂರಪ್ಪ ಇಬ್ಬರೂ ಬಗರ್ ಹುಕುಂ ಜಮೀನು, ಬಂಧಿತ ಕಾರ್ಮಿಕರು, ಶರಾವತಿ ನದಿ ತೆರವು ಹಾಗೂ ಜಿಲ್ಲೆಯ ಒಣಪ್ರದೇಶದಳಿಗೆ ನೀರಾವರಿಯಂತಹ ಜನರ ಸಮಸ್ಯೆಗಳಿಗಾಗಿ ಹೋರಾಡಿ ರಾಜ್ಯ ರಾಜಕಾರಣಕ್ಕೆ ಬಂದವರಾಗಿದ್ದು, ಇಬ್ಬರೂ ಜಿಲ್ಲೆಯ ಬೆಳವಣಿಗೆಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇದೀಗ ಎರಡು ಕುಟುಂಬಗಳ ಎರಡನೇ ತಲೆಮಾರಿನವರು ಮುಖಾಮುಖಿಯಾಗುತ್ತಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡುವೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಬಿ.ವೈರಾಘವೇಂದ್ರ ಅವರು ಮಾತನಾಡಿದ್ದು, ಮೋದಿ ರ್‍ಯಾಲಿ ಪಕ್ಷದ ಕಾರ್ಯಕರ್ತರ ಹುರಿದುಂಬಿಸಿದೆ, ದೊಡ್ಡ ಅಂತರದಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಸಂದರ್ಶನದ ಆಯ್ದ ಭಾಗಗಳು ಇಂತಿವೆ..

Q

ಪ್ರಚಾರ ಹೇಗೆ ನಡೆಯುತ್ತಿದೆ?

A

ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ವಾತಾವರಣ ನನ್ನ ಪರವಾಗಿದೆ. ಒಂದು ತಿಂಗಳ ಹಿಂದೆ ಪ್ರಧಾನಿ ಮೋದಿ ಅವರ ಪ್ರಚಾರ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ.

Q

ಕ್ಷೇತ್ರದ ಜನರು ಯಾವ ಸಮಸ್ಯೆಗಳ ಕುರಿತು ಧ್ವನಿ ಎತ್ತುತ್ತಿದ್ದಾರೆ?

A

ಸಾಕಷ್ಟು ಜನರು ಇನ್ನೂ ತಮ್ಮ ಮನೆಗಳ ಹಕ್ಕು ಪತ್ರಗಳಿಗಾಗಿ ಕಾಯುತ್ತಿದ್ದಾರೆ. ಅರಣ್ಯ ಹಕ್ಕು ಕಾಯಿದೆಯಡಿ ಅರಣ್ಯವಾಸಿಗಳಿಗೆ ನ್ಯಾಯ ಒದಗಿಸುವುದು, ಶರಾವತಿ ಯೋಜನೆಯಿಂದ ತೆರವುಗೊಂಡವರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವುದು, ಡೀಮ್ಡ್ ಅರಣ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ. ಇವುಗಳಲ್ಲಿ ಕೆಲವು ವಿಷಯಗಳು ಕೇಂದ್ರ ಮಟ್ಟದಲ್ಲಿ ಪರಿಹರಿಸಬಹುದಾದರೂ, ಇತರೆ ವಿಷಯಗಳಲ್ಲಿ ಸವಾಲುಗಳಿವೆ. ಅದೇನೇ ಇದ್ದರೂ, ನನ್ನ ಬದ್ಧತೆ ಸ್ಥಿರವಾಗಿದೆ.

Q

ನಟರು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಗೀತಾ ಅವರಿಗೆ ಗೆಲ್ಲಲು ಅವಕಾಶವಿದೆ ಎಂದು ನೀವು ನಂಬುತ್ತೀರಾ?

A

ನಾನು ಕಲಾವಿದರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದರೂ, ನಟರ ಪ್ರಚಾರದ ಪ್ರಭಾವವು ಮತಗಳಾಗಿ ಪರಿವರ್ತನೆಯಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನಟರ ಗ್ರಹಿಕೆ ಪ್ರಾಯೋಗಿಕ ಸಮಸ್ಯೆಗಳಿಂದ ಭಿನ್ನವಾಗಿದೆ. ನನಗೆ ನಿಜವಾದ ಹೀರೋಗಳು ನನ್ನ ಮತದಾರರು.

Q

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ನಿಮ್ಮ ಗೆಲುವಿಗೆ ಅಡ್ಡಿಯಾಗಬಹುದು ಎಂದು ನೀವು ನೋಡುತ್ತೀರಾ?

A

ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಜನರಿಗೆ 5 ಕೆಜಿ ಅಕ್ಕಿ ನೀಡುತ್ತಿರುವುದು ಮೋದಿ ಸರ್ಕಾರ. ಯುವ ನಿಧಿ ಯೋಜನೆಯಡಿ, ಎಲ್ಲಾ ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ಸ್ಟೈಫಂಡ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಈಗ 2022-23ರಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಸ್ಟೈಫಂಡ್ ನೀಡುವುದಾಗಿ ಹೇಳುತ್ತಿದೆ. ಲಕ್ಷಗಟ್ಟಲೆ ನಿರುದ್ಯೋಗಿ ಯುವಕರಿರುವಾಗ ಕೆಲವರಿಗೆ ಮಾತ್ರ ಸ್ಟೈಫಂಡ್ ನೀಡಲಾಗುತ್ತಿದೆ. ಡ್ಯೂಟಿ ಸ್ಟ್ಯಾಂಪ್ ಅನ್ನು ಹೆಚ್ಚಿಸಲಾಗಿದೆ. ಎಲ್ಲ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡುತ್ತಿದೆ. 32 ಕೋಟಿ ಬಡ ಮಹಿಳೆಯರು ಅರ್ಹರಿದ್ದರೂ ಸರಕಾರಕ್ಕೆ 32 ಸಾವಿರ ಕೋಟಿ ರೂ. ಆಗುತ್ತದೆ. ಆದರೆ, ನಮ್ಮ ದೇಶದ ಬಜೆಟ್ 45 ಲಕ್ಷ ಕೋಟಿ ರೂ. ಆಗಿದೆ. ಅಭಿವೃದ್ಧಿ, ರಕ್ಷಣೆ, ಸಂಬಳ ಇತ್ಯಾದಿಗಳಿಗೆ ಹಣವನ್ನು ಹೇಗೆ ತರುತ್ತಾರೆ?

Q

ವಿಐಎಸ್ಎಲ್ ಉಕ್ಕು ಕಾರ್ಖಾನೆ ಮುಚ್ಚುವ ಭೀತಿ ಬಗ್ಗೆ ಏನು ಹೇಳುತ್ತೀರಿ?

A

ನಷ್ಟದಲ್ಲಿರುವ ಪಿಎಸ್‌ಯುಗಳನ್ನು ಸರ್ಕಾರ ಕೈಬಿಟ್ಟಿದೆ. ಆದರೆ, ನಾನು VISL ಅನ್ನು ಬಿಟ್ಟುಕೊಟ್ಟಿಲ್ಲ. ಭವಿಷ್ಯದಲ್ಲಿಯೂ ಬಿಡುವುದಿಲ್ಲ. ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಸಾಕಷ್ಟು ಹಣವನ್ನು ತರಲಾಗುವುದು.ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಯೋಜನೆಗಳ ಅಗತ್ಯವಿದೆ?

Q

ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಯೋಜನೆಗಳ ಅಗತ್ಯವಿದೆ?

A

ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಗಳನ್ನು ತರಲು ಪ್ರಯತ್ನಿಸುತ್ತೇನೆ. ತಮ್ಮ ಊರಿನಲ್ಲಿ ಇಂಟರ್ನೆಟ್ ಸಂಪರ್ಕವಿಲ್ಲದ ಕಾರಣ ಅನೇಕ ಯುವಕರು ಶಿವಮೊಗ್ಗ ನಗರದಲ್ಲಿ ಬಾಡಿಗೆ ಕೊಠಡಿಗಳಲ್ಲಿ ವಾಸವಿದ್ದಾರೆ. ಹೀಗಾಗಿ ಮೊಬೈಲ್ ಟವರ್‌ಗಳನ್ನು ಅಳವಡಿಸಿದರೆ ಯುವಕರು ತಮ್ಮ ಊರುಗಳಿಂದಲೇ ಕೆಲಸ ಮಾಡಲು ಸಾಧ್ಯವಾಗುತ್ತದೆ. ತೀರ್ಥಹಳ್ಳಿಯಲ್ಲಿ 100 ಎಕರೆ ಜಾಗದಲ್ಲಿ ಸೈನಿಕ ಶಾಲೆಯನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ, ಗುಣಮಟ್ಟದ ಶಿಕ್ಷಣ ಮತ್ತು ಸ್ಥಳೀಯ ಯುವಕರಿಗೆ ಅವಕಾಶಗಳನ್ನು ಒದಗಿಸುವ ಅವಕಾಶವನ್ನು ಖಚಿತಪಡಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com