ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ

'ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು': ಉಚ್ಛಾಟಿತ ಬಿಜೆಪಿ ನಾಯಕ ಈಶ್ವರಪ್ಪ

"ನಮ್ಮ ವಿಶ್ವನಾಯಕ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು. ಇದು ಇಡೀ ದೇಶ ಮತ್ತು ವಿಶ್ವದ ಆಶಯ" ಎಂದು ಕೆಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.
Published on

ಶಿವಮೊಗ್ಗ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ದೇಶದ ಮತ್ತು ವಿಶ್ವದ ಜನರು ಬಯಸುತ್ತಿದ್ದಾರೆ ಎಂದು ಬಿಜೆಪಿಯ ಉಚ್ಛಾಟಿತ ನಾಯಕ ಕೆಎಸ್ ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

"ನಮ್ಮ ವಿಶ್ವನಾಯಕ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು. ಇದು ಇಡೀ ದೇಶ ಮತ್ತು ವಿಶ್ವದ ಆಶಯ" ಎಂದು ಈಶ್ವರಪ್ಪ ಎಎನ್‌ಐಗೆ ತಿಳಿಸಿದ್ದಾರೆ.

ಬಿಜೆಪಿ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಶಿವಮೊಗ್ಗದಿಂದ ತಾವು ಪಕ್ಷೇತರ ಅಭ್ಯರ್ಥಿಯಾಗಿರುವ ಬಗ್ಗೆ ಮಾತನಾಡಿದ ಈಶ್ವರಪ್ಪ, ಚುನಾವಣೆಯ ನಂತರ ಬಿಜೆಪಿಯೊಂದಿಗೆ ಮತ್ತೆ ಸೇರುವ ಇರಾದೆ ಇದೆ. ರಾಜ್ಯದಲ್ಲಿ ಬಿಜೆಪಿ 27 ಸ್ಥಾನಗಳನ್ನು ಗೆಲ್ಲಬೇಕೆಂದು ನಾನು ಬಯಸುತ್ತೇನೆ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಒಂದು ಸ್ಥಾನವನ್ನು ಗೆಲ್ಲುತ್ತೇನೆ. ಇದರೊಂದಿಗೆ ಕರ್ನಾಟಕದಲ್ಲಿ ಒಟ್ಟು 28 ಸಂಸದರು ನರೇಂದ್ರ ಮೋದಿಯನ್ನು ಪ್ರಧಾನಿ ಮಾಡಲು ಕೊಡುಗೆ ನೀಡುತ್ತಾರೆ... ಬಿಜೆಪಿ ನನ್ನ ತಾಯಿ. ಚುನಾವಣೆ ನಂತರ ಮತ್ತೆ ನನ್ನ ತಾಯಿ ಬಳಿ ಹೋಗುತ್ತೇನೆ ಎಂದಿದ್ದಾರೆ.

ಕೆಎಸ್ ಈಶ್ವರಪ್ಪ
ಮೋದಿ ಫೋಟೋ ಬಳಕೆಗೆ ಅವಕಾಶ ಸಿಕ್ಕಿದೆ, ದೂರು ನೀಡಿದವರಿಗೆ ಮುಖಭಂಗವಾಗಿದೆ: ಕೆಎಸ್ ಈಶ್ವರಪ್ಪ

ಪಕ್ಷದಿಂದ 6 ವರ್ಷ ಉಚ್ಛಾಟಿಸಲಾಗಿದೆ. ಹೀಗಾಗಿ ಚುನಾವಣೆಯ ನಂತರ ಮತ್ತೆ ಬಿಜೆಪಿಗೆ ಹೇಗೆ ಹೋಗುತ್ತೀರಿ? ಎಂಬ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ''ನನಗೆ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬೇಡಿ ಎಂದು ಹೇಳಿದ್ದು, 5 ನಿಮಿಷದಲ್ಲಿ ನಾನು ಪತ್ರ ಕಳುಹಿಸಿ, ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ನಾಯಕರಿಗೆ ತಿಳಿಸಿದೆ. ಆದರೆ ಜಗದೀಶ್ ಶೆಟ್ಟರು ಅಲ್ಲಿಂದ ಕಾಂಗ್ರೆಸ್‌ಗೆ ಹೋಗಿ, ಬೆಳಗಾವಿಯಿಂದ ಬಿಜೆಪಿಗೆ ಕರೆತಂದ ನಂತರ ಮತ್ತೆ ಸೋತರು. ಅವರೂ ಪಕ್ಷವನ್ನು ತೊರೆದಿದ್ದರು. ಆದರೆ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರಲಿಲ್ಲವೇ? ಎಂದರು.

ತಮ್ಮ ಪುತ್ರ ಕೆಇ ಕಾಂತೇಶ್ ಅವರು 50 ಮಾಧ್ಯಮ ಸಂಸ್ಥೆಗಳು ತನಗೆ ಸಂಬಂಧಿಸಿದ ಯಾವುದೇ ರೀತಿಯ ಅವಹೇಳನಕಾರಿ ಪಠ್ಯ ಅಥವಾ ವೀಡಿಯೊ ತುಣುಕುಗಳನ್ನು ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ತಮ್ಮ ಮಗನ ವಿರುದ್ಧ ಎಲ್ಲರೂ ಪಿತೂರಿ ನಡೆಸುತ್ತಿದ್ದಾರೆ ಎಂದು ಹೇಳಿದರು.

''ಮಗನ ವಿಚಾರದಲ್ಲಿ ಎಲ್ಲರೂ ಷಡ್ಯಂತ್ರ ಮಾಡುತ್ತಿದ್ದಾರೆ, ನಾನು ಚುನಾವಣೆಯಲ್ಲಿ ಗೆಲ್ಲುತ್ತಿದ್ದೇನೆ. ನಮ್ಮ ವಿರೋಧಿಗಳು ಇದೆಲ್ಲ ಮಾಡುತ್ತಿದ್ದಾರೆ. ಕಳೆದ ಹಲವು ದಶಕಗಳಿಂದ ನಾವು ರಾಜಕೀಯ ಮಾಡುತ್ತಿದ್ದೇವೆ. ಕೆಲವರು ಷಡ್ಯಂತ್ರ ನಡೆಸುತ್ತಿದ್ದು, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com