ಲೋಕಸಭೆ ಚುನಾವಣೆ ನಡುವೆಯೇ ರಾಜ್ಯವನ್ನು ಬೆಚ್ಚಿ ಬೀಳಿಸಿದ 2 ಪ್ರಕರಣ: ಕೆಸರೆರಚಾಟಕ್ಕೆ ಕಾಂಗ್ರೆಸ್ -ಬಿಜೆಪಿಗೆ ವರದಾನ!

ಲೋಕಸಭೆ ಚುನಾವಣೆ ನಡುವೆ ನಡೆದ ಎರಡು ಪ್ರಕರಣಗಳು ರಾಜ್ಯವನ್ನೇ ಬೆಚ್ಚಿ ಬೀಳಿಸಿವೆ. ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿ ನೇಹಾಳನ್ನು ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದ ಹುಬ್ಬಳ್ಳಿ ಕೊಲೆ ಪ್ರಕರಣ.
ನೇಹಾ ಹೀರೆಮಠ್ ಮತ್ತು ಪ್ರಜ್ವಲ್ ರೇವಣ್ಣ
ನೇಹಾ ಹೀರೆಮಠ್ ಮತ್ತು ಪ್ರಜ್ವಲ್ ರೇವಣ್ಣ
Updated on

ಬೆಂಗಳೂರು: ಲೋಕಸಭೆ ಚುನಾವಣೆ ನಡುವೆ ನಡೆದ ಎರಡು ಪ್ರಕರಣಗಳು ರಾಜ್ಯವನ್ನೇ ಬೆಚ್ಚಿ ಬೀಳಿಸಿವೆ. ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬ ಕಾಲೇಜು ವಿದ್ಯಾರ್ಥಿನಿ ನೇಹಾಳನ್ನು ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದ ಹುಬ್ಬಳ್ಳಿ ಕೊಲೆ ಪ್ರಕರಣ, ಹಾಗೂ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಆರೋಪಿ ನಂ.2 ಆಗಿರುವ ಹಾಸನದ ಲೈಂಗಿಕ ಹಗರಣಗಳು ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಮುಖ ವಿಷಯಗಳಾಗಿವೆ.

ಮೇ 7 ರಂದು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಚುನಾವಣೆ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ.ಆದರೆ, ಕಾಂಗ್ರೆಸ್ ಮತ್ತು ಬಿಜೆಪಿಯ ನಿರೀಕ್ಷೆಗಳ ಮೇಲೆ ಅವು ಎಷ್ಟರ ಮಟ್ಟಿಗೆ ಪ್ರಭಾವ ಬೀರಬಹುದು ಎಂಬುದನ್ನು ಕಾದು ನೋಡಬೇಕು.

ಭಾನುವಾರ ಬೆಳಗಾವಿಯಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಗೆ ಕಾರಣವಾಯಿತು ಎಂದು ಆರೋಪಿಸಿದರು. ಈಗ ಪೋಷಕರು ತಮ್ಮ ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸಲು ಭಯಪಡುತ್ತಿದ್ದಾರೆ ಎಂದು ಹೇಳಿದ್ದರು.

ನೇಹಾ ಹೀರೆಮಠ್ ಮತ್ತು ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ ಸೆಕ್ಸ್ ಪ್ರಕರಣ: ಹಾಸನ, ಬೆಂಗಳೂರಿನ ರೇವಣ್ಣ ನಿವಾಸಗಳ ಮೇಲೆ SIT ದಾಳಿ, ಸಾಕ್ಷ್ಯಾಧಾರ ಸಂಗ್ರಹ!

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ವೈಯಕ್ತಿಕ ಕಾರಣದಿಂದ ಕೊಲೆ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಯುವತಿಯ ಪೋಷಕರು ಹಾಗೂ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಒಕ್ಕಲಿಗರ ಪ್ರಾಬಲ್ಯವಿರುವ ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ರಾಮನಗರ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು.

ಇದರಿಂದ ಉಂಟಾದ ಹಾನಿಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ, ಅನೇಕ ಕಾಂಗ್ರೆಸ್ ನಾಯಕರು ನೇಹಾ ಅವರ ಪೋಷಕರನ್ನು ಭೇಟಿಯಾಗಿ ಕ್ಷಮೆಯಾಚಿಸಿದರು. ಏಕೆಂದರೆ ಈ ಸಮಸ್ಯೆಯು ಉತ್ತರ ಕರ್ನಾಟಕದಲ್ಲಿ ಪಕ್ಷದ ಅಭ್ಯರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಅವರಿಗೆ ಮನವರಿಕೆಯಾಗಿತ್ತು.

ಆದರೆ ರಾಜ್ಯದಲ್ಲಿ ಜೆಡಿಎಸ್ ತನ್ನ ಮೈತ್ರಿಕೂಟದ ಪಾಲುದಾರನಾಗಿರುವುದರಿಂದ ಪ್ರಜ್ವಲ್ ಪ್ರಕರಣದಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನ ಉನ್ನತ ನಾಯಕರು ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು, ಈ ವಿಷಯದ ಬಗ್ಗೆ ಅವರ ಮೌನವನ್ನು ಪ್ರಶ್ನಿಸಿದರು.

ನೇಹಾ ಹೀರೆಮಠ್ ಮತ್ತು ಪ್ರಜ್ವಲ್ ರೇವಣ್ಣ
ರಾಮನಗರ: ಯುವತಿ ಜೊತೆಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ವಾಟ್ಸಪ್ ಕಾಲ್, ಅಪರಿಚಿತರ ವಿರುದ್ಧ FIR ದಾಖಲು

ಈ ಹಗರಣವು ತಮ್ಮ ಪಕ್ಷಕ್ಕೆ ಮುಜುಗರ ತಂದಿದೆ ಎಂಬುದನ್ನು ಕೆಲವು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಂಡಿದ್ದಾರೆ. ಆದರೆ ಇದು 14 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿಯ ಭವಿಷ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಸಂತ್ರಸ್ತೆ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಇಲ್ಲಿ ಕೊಲೆ ಪ್ರಕರಣ ಪ್ರಮುಖ ವಿಷಯವಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್ ಪ್ರಜ್ವಲ್ ಪ್ರಕರಣವನ್ನು ವಿಶೇಷವಾಗಿ ಮಹಿಳೆಯರ ಮತ ಸೆಳೆಯಲು ಬಳಸಿಕೊಳ್ಳುತ್ತಿದೆ. ಹುಬ್ಬಳ್ಳಿಯಲ್ಲೂ ಮಹಿಳಾ ಘಟಕದ ಸದಸ್ಯರು ಪ್ರತಿಭಟನೆ ನಡೆಸಿದರು. ‘ಹುಬ್ಬಳ್ಳಿ ಕೊಲೆ ಪ್ರಕರಣವನ್ನು ಬಿಜೆಪಿ ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿರುವಾಗ ನಾವು ಪ್ರಜ್ವಲ್ ಪ್ರಕರಣವನ್ನು ಪ್ರಸ್ತಾಪಿಸಬೇಕಲ್ಲವೇ?’ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಪ್ರಶ್ನಿಸಿದ್ದಾರೆ. ಬಿಜೆಪಿ ಪರ ಪ್ರಚಾರದಲ್ಲಿ ನಿರತರಾಗಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಪ್ರಜ್ವಲ್ ಪ್ರಕರಣದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ತಿರುಗೇಟು ನೀಡಿದರು.

ಹುಬ್ಬಳ್ಳಿಯಲ್ಲಿ ಬುಧವಾರ ಮಾತನಾಡಿದ್ದ ಅಮಿತ್ ಶಾ ಅತ್ಯಾಚಾರಿಗಳ ಜೊತೆ ಬಿಜೆಪಿ ನಿಲ್ಲುವುದಿಲ್ಲ. ಆರೋಪಿಗಳು ದೇಶ ಬಿಟ್ಟು ಪರಾರಿಯಾಗದಂತೆ ಕಾಂಗ್ರೆಸ್ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕಿತ್ತು ಎಂದು ಹೇಳಿದರು. ಅವರು ಹುಬ್ಬಳ್ಳಿಯಲ್ಲಿ ನೇಹಾ ಅವರ ಪೋಷಕರನ್ನು ಭೇಟಿಯಾದರು. ಕರ್ನಾಟಕದಲ್ಲಿ ಮಹಿಳೆಯರ ಸುರಕ್ಷತೆಯ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com