ಮೋದಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಏಕೆ ಮಾತನಾಡುತ್ತಿಲ್ಲ?: ಪ್ರಿಯಾಂಕಾ ಗಾಂಧಿ

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದ ಮೂಲಕ ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
Updated on

ದಾವಣಗೆರೆ: ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದ ಮೂಲಕ ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ದೇಶದ ರಾಜಕೀಯವನ್ನು "ಸರಿಪಡಿಸಲು" ಹೊಸ ಪ್ರಧಾನಿಯನ್ನು ಆಯ್ಕೆ ಮಾಡುವ ಸಮಯ ಬಂದಿದೆ ಎಂದು ಶನಿವಾರ ಹೇಳಿದ್ದಾರೆ.

ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಪರ ಪ್ರಚಾರ ನಡೆಸಿದ ಪ್ರಿಯಾಂಕಾ ಗಾಂಧಿ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಾಸನ ಎನ್‌ಡಿಎ ಅಭ್ಯರ್ಥಿ, ಹಾಲಿ ಜೆಡಿಎಸ್ ಸಂಸದನ ಪರ ಪ್ರಧಾನಿ ಮೋದಿ ಪ್ರಚಾರ ಮಾಡುತ್ತಾರೆ. ಒಂದು ಕಡೆ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಬಗ್ಗೆ ಮಾತನಾಡುತ್ತಾರೆ. ಇನ್ನೊಂದು ಕಡೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಅಪರಾಧಿಗಳ ಪರ ನಿಲ್ಲುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸಾರ್ವಜನಿಕ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ, ನೀವು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಪರವಾಗಿ ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.

ಪ್ರಿಯಾಂಕಾ ಗಾಂಧಿ
ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ರದ್ದು ಮಾಡಿ: ಪ್ರಧಾನಿ ಮೋದಿಗೆ ಮತ್ತೊಮ್ಮೆ ಸಿಎಂ ಆಗ್ರಹ

ಇಂದು, ನಮ್ಮ ಪ್ರಧಾನಿ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ನಾಯಕನೊಂದಿಗೆ ವೇದಿಕೆಯ ಮೇಲೆ ಬಂದು ಅವರ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಅವರ ರಾಸಲೀಲೆ ವಿಡಿಯೋಗಳು ಹೊರಬಂದಾಗ, ಆ ವ್ಯಕ್ತಿ ದೇಶದಿಂದ ಪರಾರಿಯಾಗುತ್ತಾನೆ. ಪ್ರಧಾನಿ ಮತ್ತು ಗೃಹ ಸಚಿವರಿಗೂ ಈ ಬಗ್ಗೆ ತಮಗೆ ಏನೂ ತಿಳಿದಿಲ್ಲದವರಂತೆ ಜನರ ಮುಂದೆ ನಾಟಕವಾಡುತ್ತಿದ್ದಾರೆ ಎಂದರು.

ಚುನಾವಣಾ ಸಂದರ್ಭದಲ್ಲಿ ಪ್ರಧಾನಿಯವರು ತಮ್ಮ ಭಾಷಣದ ಮೂಲಕ ತಮ್ಮ ಹುದ್ದೆಯ ಘನತೆಗೆ ಕುಂದು ತಂದಿದ್ದಾರೆ ಎಂದು ಆರೋಪಿಸಿದ ಪ್ರಿಯಾಂಕಾ ಗಾಂಧಿ, ಮಹಿಳೆಯರನ್ನು ರಕ್ಷಿಸುತ್ತೇವೆ ಎಂದು ಅವರು ಯಾವ ಬಾಯಿಂದ ಹೇಳುತ್ತಾರೆ? ... ಅವರು ಚುನಾವಣಾ ವೇದಿಕೆಯಲ್ಲಿ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ, ಭಾರತದಲ್ಲಿ ಚುನಾವಣೆ ನಡೆಯುತ್ತಿದೆ..... ಹತ್ತು ವರ್ಷಗಳ ಆಡಳಿತದ ನಂತರ ನಿಮ್ಮ ಪ್ರಧಾನಿಯಿಂದ ನೀವು ಇದನ್ನು ನಿರೀಕ್ಷಿಸಿದ್ದೀರಾ? ಎಂದು ಪ್ರಶ್ನಿಸಿದರು.

"ನೀವು ಹೊಸ ಪ್ರಧಾನಿಯನ್ನು ಆಯ್ಕೆ ಮಾಡುವ ಸಮಯ ಬಂದಿದೆ. ನೀವು ಕರ್ನಾಟಕದಲ್ಲಿ ಮಾಡಿದಂತೆ ದೇಶದ ರಾಜಕೀಯವನ್ನು ಸರಿಪಡಿಸುವ ಸಮಯ ಬಂದಿದೆ. ಇದು ನಿಮ್ಮ ದೇಶ. ಅದನ್ನು ರಕ್ಷಿಸುವ ಜವಾಬ್ದಾರಿ ನಿಮ್ಮದು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com