ದಾವಣಗೆರೆ: ರಾಜಕೀಯ ಕುಟುಂಬದಲ್ಲಿದ್ದರೂ ಎರಡು ದಶಕಗಳ ನಂತರ ಚುನಾವಣಾ ಕಣಕ್ಕೆ ಪ್ರಭಾ ಮಲ್ಲಿಕಾರ್ಜುನ್ ಎಂಟ್ರಿ!

ರಾಜಕೀಯ ಕುಟುಂಬದಿಂದ ಬಂದು ಎರಡು ದಶಕಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಬಾರಿಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
ಪ್ರಭಾ ಮಲ್ಲಿಕಾರ್ಜುನ್
ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ರಾಜಕೀಯ ಕುಟುಂಬದಿಂದ ಬಂದು ಎರಡು ದಶಕಗಳಿಂದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದ ಪ್ರಭಾ ಮಲ್ಲಿಕಾರ್ಜುನ್ ಅವರು ಈ ಬಾರಿಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ಕುತೂಹಲವೆಂದರೆ, ಮೊದಲ ಬಾರಿಗೆ ದಾವಣಗೆರೆಯಲ್ಲಿ ಇಬ್ಬರು ಮಹಿಳೆಯರ ನಡುವೆ ಸ್ಪರ್ಧೆ ನಡೆಯಲಿದೆ. ಪ್ರಭಾ ಅವರು ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಅವರನ್ನು ಎದುರಿಸುತ್ತಿದ್ದಾರೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರವನ್ನು ಬಿಜೆಪಿ 1999 ರಿಂದ ಗೆಲ್ಲುತ್ತಾ ಬಂದಿದೆ. ದಂತ ವೈದ್ಯೆಯಾಗಿರುವ 48 ವರ್ಷದ ಪ್ರಭಾ ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಅವರ ಪತ್ನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ದಾವಣಗೆರೆ ದಕ್ಷಿಣ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸೊಸೆ.ಗಾಯತ್ರಿ ಅವರು ನಾಲ್ಕು ಬಾರಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಿ ಎಂ ಸಿದ್ದೇಶ್ವರ ಅವರ ಪತ್ನಿ. ಯಾರೇ ಗೆದ್ದರೂ ದಾವಣಗೆರೆ ಮೊದಲ ಮಹಿಳಾ ಸಂಸದೆ.

ಈ ಬಾರಿಯ ಚುನಾವಣೆಯಲ್ಲಿ ಆಯ್ಕೆಯಾದರೆ ಆರೋಗ್ಯ, ಶಿಕ್ಷಣ, ಉದ್ಯೋಗ, ನೀರಾವರಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಪ್ರಭಾ ಹೇಳಿದರು. ಮಹಿಳೆಯರ ಸ್ವಯಂ ಸಬಲೀಕರಣ, ಕರಕುಶಲ ಕೈಗಾರಿಕೆಗಳ ಸ್ಥಾಪನೆ ಮತ್ತು ಗೃಹಾಧಾರಿತ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಅವರು ಉತ್ಸುಕನಾಗಿದ್ದೇನೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ನಿಜವಾಗಿಯೂ ಚೆನ್ನಾಗಿ ಕೆಲಸ ಮಾಡಿದೆ. ಇದು ಮಹಿಳಾ ಪರವಾಗಿದೆ ಎಂದು ಪ್ರಭಾ ಹೇಳಿದರು.

ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ ಲೋಕಸಭಾ ಕ್ಷೇತ್ರ 2024: ಹಳೆ ರಾಜಕೀಯ ಕುಟುಂಬಗಳಿಂದ ಹೊಸ ಅಭ್ಯರ್ಥಿಗಳಿಗೆ ಮಣೆ!

ಆಸ್ಪತ್ರೆ ಮತ್ತು ಆಂಬ್ಯುಲೆನ್ಸ್‌ ಸೇವೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಬಯಸುತ್ತೇನೆ. ಮಹಿಳೆಯರ ಮಾನಸಿಕ ಆರೋಗ್ಯದ ಕಡೆಗೆ ಗಮನ ಕೇಂದ್ರಿಕರಿಸಲಾಗುವುದು. ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಮಹಿಳೆಯರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ತಿಂಗಳಿಗೆ ಕನಿಷ್ಠ ಒಂದು ದಿನ ಮೀಸಲಿಡಬೇಕೆಂದು ನಾವು ಬಯಸುತ್ತೇವೆ ಎಂದು ಅವರು ಪಿಟಿಐ ಸಂದರ್ಶನದಲ್ಲಿ ಹೇಳಿದರು.

ರಾಜಕೀಯ ಮಹಿಳೆಯರಿಗೆ ಎಷ್ಟು ಕಷ್ಟ ಎಂಬುದರ ಕುರಿತು ಪ್ರತಿಕ್ರಿಯಿಸಿದ ಅವರು,ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿ ಇದ್ದು, ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕು. ಅವರು ಗಂಡನ ಹಿಂದೆ ನಿಲ್ಲುವ ಅಗತ್ಯವಿಲ್ಲ. ಮಹಿಳೆಯರು ಮುಂದೆ ಬರಬೇಕು. ಪ್ರತಿ ಕ್ಷೇತ್ರದಲ್ಲಿ ಶೇಕಡಾ 50 ರಷ್ಟು ಮಹಿಳಾ ಮತದಾರರಿದ್ದು, ಅವರ ಫರವಾಗಿ ಧ್ವನಿ ಎತ್ತಬೇಕಾದ ಅಗತ್ಯವಿದೆ. ಮಹಿಳೆಯಾಗಿ, ನಾನು ಖಂಡಿತವಾಗಿಯೂ ಅವರ ಸಮಸ್ಯೆಗಳನ್ನು ಪರಿಹರಿಸಬಲ್ಲೆ -- ಅವರ ಮಾನಸಿಕ ಆರೋಗ್ಯ, ಆರ್ಥಿಕ ಸ್ವಾತಂತ್ರ್ಯ, ಅವರ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಸಮಾಜದಲ್ಲಿ ಅವರಿಗೆ ಗೌರವ ಮತ್ತು ಪ್ರಾಮುಖ್ಯತೆ ಬಗ್ಗೆ ಗಮನ ಹರಿಸಲಾಗುವುದು ಎಂದು ತಿಳಿಸಿದರು

ಪ್ರಭಾ ಮಲ್ಲಿಕಾರ್ಜುನ್
ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ವಿರುದ್ಧದ ವಿಚಾರಣೆ ರದ್ದುಗೊಳಿಸಿದ ಹೈಕೋರ್ಟ್!

ಕುತೂಹಲವೆಂದರೆ ಪ್ರಭಾ ಮತ್ತು ಗಾಯತ್ರಿ ಇಬ್ಬರೂ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮ್ಮ ರಾಜಕೀಯ ಹಿನ್ನೆಲೆಯು ಹೇಗೆ ಸಹಾಯ ಮಾಡುತ್ತಿದೆ ಎಂಬುದರ ಕುರಿತು ಮಾತನಾಡಿದ ಪ್ರಭಾ, "ನಾನು ಈ ಕುಟುಂಬಕ್ಕೆ ಬಂದು 26 ವರ್ಷಗಳು ಕಳೆದಿವೆ. ಹಾಗಾಗಿ ಇಲ್ಲಿಯವರೆಗೆ ಪ್ರತಿ ಎಂಎಲ್ಎ ಮತ್ತು ಎಂಪಿ ಚುನಾವಣೆಗಳಲ್ಲಿ ನನ್ನ 'ಕಾರ್ಯಕರ್ತ'ಗಳೊಂದಿಗೆ ಪ್ರಚಾರ ಮಾಡುತ್ತಿದ್ದೇನೆ ಮತ್ತು ಮನೆಗೆ ಬರುವ ಜನರೊಂದಿಗೆ ರಾಜಕೀಯ ಅಥವಾ ಆಸ್ಪತ್ರೆಗೆ ಸಂಬಂಧಿಸಿದ ಯಾವುದೇ ವಿಷಯಗಳ ಬಗ್ಗೆ ಮಾತನಾಡುತ್ತಿರುತ್ತೇನೆ. ಹೀಗೆ ಒಂದಲ್ಲಾ ಒಂದು ಕಾರಣದಿಂದ ಜನರೊಂದಿಗೆ ಸಂಪರ್ಕದಲ್ಲಿದ್ದು, ಚುನಾವಣೆಯಲ್ಲಿ ಗೆಲ್ಲಲು ನೆರವಾಗಲಿದೆ ಎಂದರು.

ಕುಟುಂಬ ರಾಜಕಾರಣದ ಪ್ರತಿಸ್ಪರ್ಧಿಯಾಗಿ ಎಂಪಿ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಭಾ ಮಲ್ಲಿಕಾರ್ಜುನ್ ಅವರೇ ಬೇಕು ಎಂದು ಸಾರ್ವಜನಿಕ ಸಮೀಕ್ಷೆಯ ಮೂಲಕ ನಮ್ಮ ಕಾರ್ಯಕರ್ತರು ಒಲವು ವ್ಯಕ್ತಪಡಿಸಿದ್ದರಿಂದ ನನನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com