
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್‌ಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಕಳೆದ ರಾತ್ರಿ ಡಿ. ಕೆ. ಶಿವಕುಮಾರ್ ಅವರು ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿಯವರ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದೆ.
ಕಾಂಗ್ರೆಸ್ ಕಾರ್ಯಕರ್ತರು “ಡಿಕೆ, ಡಿಕೆ” ಎಂದು ಘೋಷಣೆಗಳನ್ನು ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಡಿ. ಕೆ. ಶಿವಕುಮಾರ್ ಕಾರಿನಿಂದ ಕೆಳಗಿಳಿದು ಬಂದ ತಕ್ಷಣ ಅವರ ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಕಾರ್ಪೊರೇಟರ್ ಅಲ್ಲಾವುದ್ದೀನ್ ಮನಿಯಾರ್ ಮನಿಯಾರ್ ಅವರ ಕಪಾಳಕ್ಕೆ ಬಾರಿಸಿದ್ದಾರೆ ಎಂದು ತಿಳಿಸಿದೆ.
Advertisement