ಕಲಬುರಗಿಯಲ್ಲಿ ವ್ಯಾಪಕ ಪ್ರವಾಸ; ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು, ವ್ಯಾಪಕ ಪ್ರವಾಸ ಮಾಡುತ್ತಿರುವುದನ್ನು ಪ್ರಶ್ನಿಸಿರುವ ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಖರ್ಗೆ ಅವರು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು, ವ್ಯಾಪಕ ಪ್ರವಾಸ ಮಾಡುತ್ತಿರುವುದನ್ನು ಪ್ರಶ್ನಿಸಿರುವ ಬಿಜೆಪಿ ನಾಯಕರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಖರ್ಗೆ, ಕಲಬುರಗಿ ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ಸೇರಿದಂತೆ ಕೆಲವು ಮುಖಂಡರು ನಾನು ಕಲಬುರಗಿ ಜಿಲ್ಲೆಯಲ್ಲಿ ಬೀಡುಬಿಟ್ಟು ವ್ಯಾಪಕ ಪ್ರವಾಸ ಮಾಡುತ್ತಿರುವ ಬಗ್ಗೆ ತಮ್ಮ ಭಾಷಣದಲ್ಲಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿ ಜಿಲ್ಲೆಗೆ ಎರಡು ಬಾರಿ ಭೇಟಿ ನೀಡಿದ್ದಾರೆ, ಬಿಜೆಪಿಯ ಹಲವು ನಾಯಕರು ಕ್ಷೇತ್ರಕ್ಕೆ ಹಲವು ಬಾರಿ ಭೇಟಿ ನೀಡಿದ್ದಾರೆ, ಕೆಲವು ಆರ್‌ಎಸ್‌ಎಸ್ ಕಾರ್ಯಕರ್ತರು ಹಲವು ದಿನಗಳಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ ಎಂದರು.

ಬಿಜೆಪಿ ನಾಯಕರೇ ಪ್ರಚಾರದಲ್ಲಿ ತೊಡಗಿದ್ದರೂ, ಅವರು ನನ್ನ ಪ್ರಚಾರದ ಬಗ್ಗೆ ಆಕ್ಷೇಪಿಸುತ್ತಿದ್ದಾರೆ. ಇದು (ಕಲಬುರಗಿ ಜಿಲ್ಲೆ) ನನ್ನ ‘ಕರ್ಮಭೂಮಿ’, ಇಲ್ಲಿನ ನೆಲ ಮತ್ತು ಜಲ ನನ್ನದು, ನಾನು ಈ ನೆಲಕ್ಕೆ ಅಂಟಿಕೊಂಡಿದ್ದೇನೆ, ಅದು ಸಹಜ. ಈ ಎಲ್ಲ ವಿಷಯ ಗೊತ್ತಿದ್ದೂ ಆಕ್ಷೇಪ ಎತ್ತುತ್ತಿದ್ದಾರೆ. ನನ್ನನ್ನು ಪ್ರಶ್ನಿಸುತ್ತಿದ್ದಾರೆ ಎಂದು ಖರ್ಗೆ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ
ದ್ವೇಷ ಭಾಷಣ ಮಾಡುವ ಬದಲು ನಿಮ್ಮ ಸರ್ಕಾರದ ಸಾಧನೆಗಳ ಮೇಲೆ ಮತ ಕೇಳಿ: ಪ್ರಧಾನಿ ಮೋದಿಗೆ ಖರ್ಗೆ

ದೇಶದಾದ್ಯಂತ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಸಿಗುತ್ತಿರುವ ಬೆಂಬಲ ಉತ್ತೇಜನಕಾರಿಯಾಗಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ನೀಡಿದ ಐದು ಭರವಸೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದನ್ನು ಜನರು ನೋಡಿದ್ದಾರೆ. ಕಾಂಗ್ರೆಸ್ ತಾನು ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಎಂದು ಅವರು ಅರ್ಥಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.

I.N.D.I.A ಬಣ ಅಧಿಕಾರಕ್ಕೆ ಬಂದರೆ ಐದು ನ್ಯಾಯಗಳು ಮತ್ತು 25 ಖಾತರಿಗಳನ್ನು ಜಾರಿಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಈ ಬಾರಿ I.N.D.I.A ಬಣ ಅಧಿಕಾರಕ್ಕೆ ಬರಲಿದ್ದು, ಜನರು ಎನ್‌ಡಿಎಯನ್ನು ತಿರಸ್ಕರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com