ಮಲೆನಾಡಿನ ಅಧಿಪತ್ಯಕ್ಕಾಗಿ 2 ಕುಟುಂಬಗಳ ಘರ್ಷಣೆ; ಪುತ್ರನಿಗೆ ರಾಜಕೀಯ ನೆಲೆ ಕಲ್ಪಿಸಲು ಈಶ್ವರಪ್ಪ ಹೋರಾಟ!

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅನುಭವಿ ರಾಜಕಾರಣಿ ಹಾಗೂ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಂಶಸ್ಥರ ಘರ್ಷಣೆಗೆ ವೇದಿಕೆ ಸಜ್ಜಾಗಿದೆ.
ಈಶ್ವರಪ್ಪ, ರಾಘವೇಂದ್ರ ಮತ್ತು ಗೀತಾ
ಈಶ್ವರಪ್ಪ, ರಾಘವೇಂದ್ರ ಮತ್ತು ಗೀತಾ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅನುಭವಿ ರಾಜಕಾರಣಿ ಹಾಗೂ ಇಬ್ಬರು ಮಾಜಿ ಮುಖ್ಯಮಂತ್ರಿಗಳ ವಂಶಸ್ಥರ ಘರ್ಷಣೆಗೆ ವೇದಿಕೆ ಸಜ್ಜಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಕುಟುಂಬಗಳ ನಡುವೆ 2009 ರಲ್ಲಿ ಆರಂಭವಾದ ಈ ಘರ್ಷಣೆ 15 ವರ್ಷಗಳ ನಂತರವೂ ಮುಂದುವರೆದಿದೆ.

ಶಿವಮೊಗ್ಗ ಕ್ಷೇತ್ರದಿಂದ ಲ್ಲಿ ಬಿಜೆಪಿಯಿಂದ, ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ಎಸ್.ಬಂಗಾರಪ್ಪ ಪುತ್ರಿ ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್‌ ವಿರುದ್ಧ ಕಣಕ್ಕಿಳಿದಿದ್ದಾರೆ. ಶಿವಮೊಗ್ಗ ಕ್ಷೇತ್ರವನ್ನು ಪ್ರಬಲ ಕೇಸರಿ ನೆಲೆ ಎಂದು ಪರಿಗಣಿಸಲಾಗಿದೆ ಮತ್ತು ಇಬ್ಬರು ಪ್ರಮುಖ ನಾಯಕರಿಗೆ ಅನುಭವಿ ಬಿಜೆಪಿ ರಾಜಕಾರಣಿ ಮತ್ತು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾಜಿ ಸಿಎಂ ಬಂಗಾರಪ್ಪ ಅವರ ಆಡಳಿತ ಕೆಲವು ದಶಕಗಳ ಕಾಲ ನಡೆಯಿತು. ಕರ್ನಾಟಕ ಕಾಂಗ್ರೆಸ್ ಪಕ್ಷ, ಕಾಂಗ್ರೆಸ್ ಹಾಗೂ ಬಿಜೆಪಿ ಟಿಕೆಟ್‌ಗಳಲ್ಲಿ ಸ್ಪರ್ಧಿಸಿದ್ದರು. ಅವರು ತಮ್ಮ ಕೊನೆಯ ಚುನಾವಣೆಯಲ್ಲಿ 2009 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ರಾಘವೇಂದ್ರ ವಿರುದ್ಧ ಸ್ಪರ್ಧಿಸಿದರು. 52,889 ಮತಗಳ ಅಂತರದಿಂದ ಬಂಗಾರಪ್ಪ ಸೋತರು ಅದಾದ, ನಂತರ ಅವರ ರಾಜಕೀಯ ಭವಿಷ್ಯ ಕುಸಿಯಲಾರಂಭಿಸಿತು. ಅಂದಿನಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎರಡು ಕುಟುಂಬಗಳ ನಡುವೆ ಘರ್ಷಣೆಗೆ ಸಾಕ್ಷಿಯಾಗಿದೆ.

ಈಶ್ವರಪ್ಪ, ರಾಘವೇಂದ್ರ ಮತ್ತು ಗೀತಾ
ಮೋದಿ ಫೋಟೋ ಬಳಕೆಗೆ ಅವಕಾಶ ಸಿಕ್ಕಿದೆ, ದೂರು ನೀಡಿದವರಿಗೆ ಮುಖಭಂಗವಾಗಿದೆ: ಕೆಎಸ್ ಈಶ್ವರಪ್ಪ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಗ್ರಾಫ್ 2004 ರಿಂದ ಏರುಗತಿಯಲ್ಲಿತ್ತು, ಅಂದಿನಿಂದ ಇಲ್ಲಿಯವರೆಗೆ ಕೆಲವು ಅಡಚಣೆಗಳ ಹೊರತಾಗಿಯೂ ಬಿಎಸ್ ವೈ ತಮ್ಮ ರಾಜಕೀಯ ಜೀವನದಲ್ಲಿ ಹಿಂತಿರುಗಿ ನೋಡಲಿಲ್ಲ. 2014 ರ ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರು ಜೆಡಿಎಸ್‌ನಲ್ಲಿ ಗೀತಾ ಶಿವರಾಜಕುಮಾರ್ ವಿರುದ್ಧ ಸ್ಪರ್ಧಿಸಿದ್ದರು. 3,65,580 ಮತಗಳ ಅಂತರದಿಂದ ಅವರನ್ನು ಸೋಲಿಸಿದರು.

2018ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಂಶವಾಹಿ ಘರ್ಷಣೆ ಆರಂಭವಾಯಿತು. ಬಂಗಾರಪ್ಪ ಅವರ ಎರಡನೇ ಪುತ್ರ ಮಧು ಎಸ್ ಬಂಗಾರಪ್ಪ ಅವರು ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧಿಸಿ 52,148 ಮತಗಳ ಅಂತರದಿಂದ ಪರಾಭವಗೊಂಡರು. ಮತ್ತೆ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಘವೇಂದ್ರ (ಬಿಜೆಪಿ) ಮತ್ತು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಒಮ್ಮತದ ಅಭ್ಯರ್ಥಿಯಾಗಿದ್ದರು, ಅಂದಿನಿಂದ ಮಧು ಬಂಗಾರಪ್ಪ ಮತ್ತು ಯಡಿಯೂರಪ್ಪ ಕುಟುಂಬಗಳ ನಡುವೆ ಈ ಘರ್ಷಣೆ ಮುಂದುವರೆದಿದೆ.

ಈ ಕೌಟುಂಬಿಕ ಪೈಪೋಟಿಯು ಪ್ರತಿ ಚುನಾವಣೆಯಲ್ಲೂ ಬೆಳೆಯುತ್ತಿರುವಂತೆ ತೋರುತ್ತಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಇದು ಎರಡು ಕುಟುಂಬಗಳ ಸದಸ್ಯರು ಪರಸ್ಪರರ ವಿರುದ್ಧ ವೈಯಕ್ತಿಕ ಆರೋಪಗಳನ್ನು ಮಾಡುವುದರೊಂದಿಗೆ ಕೆಟ್ಟ ಬೆಳವಣಿಗೆಗೆ ನಾಂದಿಯಾಯಿತು. ಕಳೆದ ಹಲವು ದಶಕಗಳಲ್ಲಿ ಮಾಜಿ ಸಿಎಂ ಎಸ್ ಬಂಗಾರಪ್ಪ ಸೇರಿದಂತೆ ಜಿಲ್ಲೆಯ ರಾಜಕಾರಣಿಗಳಿಂದ ಇಂತಹ ವೈಯಕ್ತಿಕ ದಾಳಿಯನ್ನು ನಾನು ನೋಡಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಈಶ್ವರಪ್ಪ, ರಾಘವೇಂದ್ರ ಮತ್ತು ಗೀತಾ
1992 ರಲ್ಲಿ ರಾಜೀವ್ ಗಾಂಧಿ ಮಹಿಳಾ ಮೀಸಲಾತಿ ತಂದ ಮೇಲೆ ಇಂದಿರಾ ಗಾಂಧಿ ಪ್ರಧಾನಿಯಾದ್ರು! ಗೀತಾ ಭಾಷಣ ವೈರಲ್

ಈ ಚುನಾವಣೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಪೂರೈಕೆ, ಶರಾವತಿ ಒತ್ತುವರಿ ತೆರವು, ಬಗರ್ ಹುಕುಂ ಸಾಗುವಳಿದಾರರ ಹಕ್ಕುಗಳ ರಕ್ಷಣೆ, ಯಡಿಯೂರಪ್ಪನವರು ಸಿಎಂ ಆಗಿದ್ದ ಅವಧಿಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದೆ. ‘ರಾಜಕೀಯ ಪೈಪೋಟಿ’ಯ ತೀವ್ರತೆಯನ್ನು ಕಾಂಗ್ರೆಸ್ ಅರ್ಥಮಾಡಿಕೊಂಡಿದ್ದು, ಶಿವಮೊಗ್ಗದಲ್ಲಿ ಕಳೆದುಹೋದ ರಾಜಕೀಯ ನೆಲೆಯನ್ನು ಗೆಲ್ಲುವ ಗುರಿ ಹೊಂದಿದೆ.

ಪುತ್ರ ಕಾಂತೇಶ್ ಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈಶ್ವರಪ್ಪ ಪಕ್ಷೇತರರಾಗಿ ಕಣಕ್ಕಿಳಿದಿರುವುದು ಯಡಿಯೂರಪ್ಪ ಅವರ ಕುಟುಂಬದ ಮೇಲೆ ವೈಯಕ್ತಿಕ ದ್ವೇಷಕ್ಕೆ ಕಾರಣವಾಗಿದೆ. ಬಿಎಸ್‌ವೈ ಕುಟುಂಬದ ಮೂವರು ಪಕ್ಷದ ವಿವಿಧ ಹುದ್ದೆ ಮತ್ತು ಖಾತೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಬಿಜೆಪಿ ಸೇರಿದ್ದರಿಂದ ಅವರನ್ನು ಕಡೆಗಣಿಸಲಾಗಿದೆ ಎಂದು ಕೆಲ ಕಾಂಗ್ರೆಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಮಗನ ರಾಜಕೀಯ ಜೀವನಕ್ಕಾಗಿ ಆಯಕಟ್ಟಿನ ಜಾಗದಲ್ಲಿ ನೆಲೆಯನ್ನು ಕಲ್ಪಿಸಿಕೊಡಲು ಈಶ್ವರಪ್ಪ ಮುಂದಾಗಿದ್ದಾರೆ. ಹೀಗಾಗಿ ಇದು ಎರಡು ಮಾಜಿ ಸಿಎಂಗಳ ಕುಟುಂಬಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ. ಹಾಲಿ ಸಂಸದರು ತಮ್ಮ ಗೆಲುವಿನ ಓಟವನ್ನು ಮುಂದುವರೆಸುತ್ತಾರೋ ಅಥವಾ ಗೀತಾ ಶಿವರಾಜಕುಮಾರ್ ಗೆ ಶಿವಮೊಗ್ಗ ಜನ ಮಣೆ ಹಾಕುತ್ತಾರೋ ಕಾದು ನೋಡಬೇಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com