ವಿಧಾನ ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ಮರಿತಿಬ್ಬೇಗೌಡಗೆ ಮಾಜಿ ಎಂಎಲ್‌ಸಿ ಮನವಿ

ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಎಂಎಲ್‌ಸಿ ಕೆಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.
ಮರಿತಿಬ್ಬೇಗೌಡ
ಮರಿತಿಬ್ಬೇಗೌಡ

ಮೈಸೂರು: ಲೋಕಸಭೆ ಚುನಾವಣೆಯ ಗದ್ದಲದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಕರ್ನಾಟಕ ವಿಧಾನ ಪರಿಷತ್​ನ ಆರು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಿಸಿದೆ. ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ರಾಜ್ಯ ಕಾಯಕ ಸಮಾಜ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಎಂಎಲ್‌ಸಿ ಕೆಸಿ ಪುಟ್ಟಸಿದ್ದಶೆಟ್ಟಿ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 24 ವರ್ಷಗಳಿಂದ ಚುನಾಯಿತರಾಗಿದ್ದ ಮಾಜಿ ಎಂಎಲ್‌ಸಿ ಮರಿತಿಬ್ಬೇಗೌಡ ಅವರು ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿಲ್ಲ. ಅವರು ಇತ್ತೀಚೆಗಷ್ಟೇ ಎಂಎಲ್‌ಸಿ ಹಾಗೂ ಜೆಡಿಎಸ್‌ಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದರು. ಈಗ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ ಎಂದರು.

ಮರಿತಿಬ್ಬೇಗೌಡರು ತಮ್ಮನ್ನು ಭೇಟಿ ಮಾಡಲು ಬರುವವರ ಜೊತೆ ಸೌಜನ್ಯದಿಂದ ವರ್ತಿಸುವುದಿಲ್ಲ. ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರಿಗೆ ವೇತನ ಹೆಚ್ಚಳವಾಗಿಲ್ಲ, ಹಳೆ ಪಿಂಚಣಿ ಯೋಜನೆ ಜಾರಿಯಾಗಿಲ್ಲ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ, ಶಿಕ್ಷಣ ಇಲಾಖೆ ಕಟ್ಟಡ ವರ್ಷಗಳೇ ಕಳೆದರೂ ದುರಸ್ತಿ ಕಂಡಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸುತ್ತೇನೆ ಎಂದರು.

ಮರಿತಿಬ್ಬೇಗೌಡ
ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 3 ರಂದು ಮತದಾನ

ಕಳೆದ 24 ವರ್ಷಗಳಿಂದ ಮರಿತಿಬ್ಬೇಗೌಡರು ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಈ ಬಾರಿ ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು ನಮಗೂ ಅವಕಾಶ ಮಾಡಿಕೊಡಿ. ನನ್ನ‌ ಪರವಾಗಿ ನಿಂತು ಗೆಲುವಿಗೆ ಸಹಕರಿಸಿ ಎಂದು ಮನವಿ ಮಾಡಿದರು.

ಮರಿತಿಬ್ಬೇಗೌಡ
ಪ್ರಜ್ವಲ್ ರೇವಣ್ಣ ವಿವಾದದ ನಡುವೆ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಸಾಧ್ಯತೆ

ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವಂತೆ ಗೌಡರಲ್ಲಿ ಮನವಿ ಮಾಡುತ್ತೇನೆ. ನಮ್ಮ ಬೆಂಬಲದಿಂದಲೇ ಅವರು ಎಂಎಲ್‌ಸಿ ಚುನಾವಣೆಯಲ್ಲಿ ಗೆದ್ದಿದ್ದರು. ಈಗ ಚುನಾವಣೆಯಿಂದ ಹಿಂದೆ ಸರಿದು ನನ್ನನ್ನು ಬೆಂಬಲಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com