ಕಳೆದ ಬಾರಿ ಮಾಡಿದ ತಪ್ಪಿಗೆ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕಲಬುರಗಿಯ ಗುಂಡುಗುರ್ತಿ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಮತ ಚಲಾಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.
ಮತ ಚಲಾಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.

ಕಲಬುರಗಿ: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕಲಬುರಗಿಯ ಗುಂಡುಗುರ್ತಿ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

81 ವರ್ಷ ವಯಸ್ಸಿನ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ತಮ್ಮ ಪತ್ನಿ ರಾಧಾಬಾಯಿ ಖರ್ಗೆ ಅವರೊಂದಿಗೆ ಮತಗಟ್ಟೆಗೆ ಬಂದಿದ್ದರು.

ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ಎಲ್ಲ ಉದ್ಯಮಿಗಳು, ಬಡವರು ಸೇರಿ ಈ ಬಾರಿ ಕಾಂಗ್ರೆಸ್ ಅನ್ನು ಗೆಲ್ಲಿಸುತ್ತಾರೆ. ಕಳೆದ ಬಾರಿ ಮಾಡಿದ ತಪ್ಪಿಗೆ ಜನರು ಪಶ್ಚಾತ್ತಾಪ ಪಡುತ್ತಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಭಾರಿ ಬಹುಮತದಿಂದ ಆಯ್ಕೆ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಪ್ರತಿಕ್ರಿಯೆ ಚೆನ್ನಾಗಿದೆ. ಎಲ್ಲೆಡೆಯಿಂದ ಒಳ್ಳೆಯ ವರದಿಗಳು ಬರುತ್ತಿವೆ. ಇಂಡಿಯಾಮ ಇಂಡಿಯಾ ಮೈತ್ರಿಕೂಟವು ಈ ಮೂರನೇ ಹಂತದ ಮತದಾನದಲ್ಲಿ (ರಾಷ್ಟ್ರೀಯವಾಗಿ) ಬಲವನ್ನು ಪಡೆಯುತ್ತಿದೆ. ಖಂಡಿತವಾಗಿಯೂ ಈ ಹಂತದಲ್ಲೂ ನಮಗೆ ಜನರಿಂದ ಉತ್ತಮ ಬೆಂಬಲ ಸಿಗುತ್ತದೆ ಎಂದರು.

ತನ್ನ 21ನೇ ವಯಸ್ಸಿನಲ್ಲಿ (ಈಗ 18 ವರ್ಷ) ಮತದಾನಕ್ಕೆ ಅರ್ಹತೆ ಪಡೆದ ನಂತರ ಕಲಬುರಗಿಯ ಬಸವನಗರದಿಂದಲೇ ಮತದಾನ ಮಾಡುತ್ತಿದ್ದೇನೆ. ನಾನು ಮತದಾನದ ಸ್ಥಳವನ್ನು ಬದಲಿಸಿಲ್ಲ. ನಾನು ಸಚಿವನಾದಾಗ, ವಿರೋಧ ಪಕ್ಷದ ನಾಯಕನಾದಾಗ, ಕೆಪಿಸಿಸಿ (ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ) ಅಧ್ಯಕ್ಷನಾದಾಗ, ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕನಾದಾಗ ಬಸವನಗರವನ್ನು ಮರೆತಿಲ್ಲ ಎಂದು ಹೇಳಿದರು.

ಇಲ್ಲಿನ ಜನರು ನನಗೆ ಪ್ರೀತಿ ಮತ್ತು ವಾತ್ಸಲ್ಯವನ್ನು ನೀಡಿದ್ದಾರೆ. ಅವರು ನಿಜವಾಗಿಯೂ ನನ್ನ ನಾಯಕತ್ವವನ್ನು ಅಭಿವೃದ್ಧಿಪಡಿಸಿದ್ದಾರೆ. ನನ್ನೊಂದಿಗೆ ನಿಂತ ಬಡ ಜನರಿಗೆ ನಾನು ಆಭಾರಿಯಾಗಿದ್ದೇನೆ. ನಾನು ಅವರೊಂದಿಗೆ ಇದ್ದೇನೆ ಎಂದು ಅವರು ಹೇಳಿದರು.

ಕಲಬುರಗಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಉಮೇಶ್‌ ಜಾಧವ್‌ ಸ್ಪರ್ಧಿಸಿದ್ದು, ಅವರ ವಿರುದ್ಧ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಕಣಕ್ಕಿಳಿದಿದ್ದಾರೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಮಂಗಳವಾರ ಚುನಾವಣೆ ನಡೆಯುತ್ತಿರುವ ಹದಿನಾಲ್ಕು ಕ್ಷೇತ್ರಗಳು.

ಮತ ಚಲಾಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.
Lok Sabha Election 2024 Voting Live Updates: ಬೆಳಗ್ಗೆ 11 ಗಂಟೆ ವೇಳೆಗೆ ದೇಶದಲ್ಲಿ ಶೇ. 25.41ರಷ್ಟು, ಕರ್ನಾಟಕದಲ್ಲಿ ಶೇ.24.48ರಷ್ಟು ಮತದಾನ

ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com