ನಾವು ಗೆಲ್ಲುತ್ತೇವೆ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್‌ಗೆ ಶಾಕ್ ಆಗಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಚುನಾವಣಾ ಫಲಿತಾಂಶದ ಪರಿಣಾಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಎದುರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ಹೇಳಿದ್ದಾರೆ.
ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ

ಶಿವಮೊಗ್ಗ: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಚುನಾವಣಾ ಫಲಿತಾಂಶದ ಪರಿಣಾಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಎದರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಂಗಳವಾರ ಹೇಳಿದ್ದಾರೆ.

ಮತ ಚಲಾಯಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಂದು ವಿಷಯ ಖಚಿತ: ಫಲಿತಾಂಶ ಹೊರಬಿದ್ದ ನಂತರ ಫಲಿತಾಂಶದ ಪರಿಣಾಮವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮೇಲೆ ಬೀಳಲಿದೆ ಎಂದರು.

ಖಾತರಿಗಳಿಂದ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ. ಜೂನ್ 4 ರಂದು ಮತ ಎಣಿಕೆ ಆರಂಭವಾಗುವ ವೇಳೆಗೆ ಅವರಿಗೆ ಶಾಕ್ ಆಗಲಿದೆ. ಕಾಂಗ್ರೆಸ್ ಸರ್ಕಾರದ ತಾತ್ಕಾಲಿಕ ಭರವಸೆಗಳಿಗಿಂತಲೂ ಬಿಜೆಪಿ ಮತ್ತು ಪ್ರಧಾನಿ ಮೋದಿಯವರ ಖಾಯಂ ಭರವಸೆಗಳನ್ನು ಜನರು ನಂಬಿದ್ದಾರೆ ಎಂಬುದನ್ನು ಜನತೆ ತೋರಿಸಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

'ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಎರಡನೇ ಮತ್ತು ಅಂತಿಮ ಹಂತದ ಮತದಾನ ಇಂದು ನಡೆಯುತ್ತಿದೆ. ಬಿಜೆಪಿಯ ಎಲ್ಲ ಕಾರ್ಯಕರ್ತರು 'ಮೇ ಸಾತ್ ಕೋ ಮೋದಿ ಜಿ ಕೆ ಸಾಥ್' ಎಂಬ ಪ್ರತಿಜ್ಞೆಯನ್ನು ತೆಗೆದುಕೊಂಡು ತಮ್ಮ ಪ್ರಯತ್ನದಲ್ಲಿ ತೊಡಗಿದ್ದಾರೆ. ನನಗೆ ಸಂಪೂರ್ಣ ವಿಶ್ವಾಸವಿದೆ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ನಾವು 25 ಲೋಕಸಭಾ ಸ್ಥಾನಗಳನ್ನು ಗೆದ್ದಿದ್ದೆವು. ಜೆಡಿಎಸ್ ಜೊತೆ ಸೇರಿ ಈ ಬಾರಿಯೂ ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ' ಎಂದು ವಿಜಯೇಂದ್ರ ಹೇಳಿದರು.

ನೀವು ಎಲ್ಲಿಗೆ ಹೋದರೂ ಪ್ರಧಾನಿ ನರೇಂದ್ರ ಮೋದಿ ಅವರ ಅಲೆ ಗೋಚರಿಸುತ್ತಿದೆ. ಇತ್ತೀಚೆಗೆ ಪ್ರಧಾನಿ ಮೋದಿ ಅವರು ಕರ್ನಾಟಕದ ಐದು ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎಲ್ಲೆಡೆ ಬಿಜೆಪಿಗೆ ಬೆಂಬಲವಿದೆ. ರಾಜ್ಯಾಧ್ಯಕ್ಷನಾಗಿ 28 ಸಂಸದೀಯ ಕ್ಷೇತ್ರಗಳಲ್ಲಿ ಸಂಚರಿಸಿದ್ದೇನೆ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಫಲಿತಾಂಶ ಬರಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಚ್ಚರಿಯ ಫಲಿತಾಂಶಗಳನ್ನು ನೋಡಲಿದೆ ಮತ್ತು ಜನರು ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.

ಬಿವೈ ವಿಜಯೇಂದ್ರ
1992 ರಲ್ಲಿ ರಾಜೀವ್ ಗಾಂಧಿ ಮಹಿಳಾ ಮೀಸಲಾತಿ ತಂದ ಮೇಲೆ ಇಂದಿರಾ ಗಾಂಧಿ ಪ್ರಧಾನಿಯಾದ್ರು! ಗೀತಾ ಭಾಷಣ ವೈರಲ್

ಲೋಕಸಭಾ ಚುನಾವಣೆಯಲ್ಲಿ ಜಾತಿ ಸಮೀಕರಣಗಳು ಕೆಲಸ ಮಾಡುವುದಿಲ್ಲ, ಎಲ್ಲರೂ ಪ್ರಧಾನಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ. ಕಾಂಗ್ರೆಸ್‌ನ ಭರವಸೆಗಳು ಸಹ ಕಾರ್ಯನಿರ್ವಹಿಸುವುದಿಲ್ಲ. ಜನರು ಪ್ರಧಾನಿಯವರ ಭರವಸೆಗಳು ಮತ್ತು ಯೋಜನೆಗಳನ್ನು ನಂಬಲಿದ್ದಾರೆ. ಕಳೆದ 10 ವರ್ಷಗಳಲ್ಲಿ ಬಿಜೆಪಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಹಿನ್ನೆಲೆಯಲ್ಲಿ ಪಕ್ಷಕ್ಕೆ ಅನುಕೂಲಕರ ವಾತಾವರಣವಿದೆ ಎಂದು ಅವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com