ಪ್ರಜ್ವಲ್ ಲೈಂಗಿಕ ಹಗರಣ: ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು? MLC ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ?

ಪರಿಷತ್ತು, ಜಿಪಂ/ ತಾಪಂ, ಬಿಬಿಎಂಪಿ ಚುನಾವಣೆಗಳಿಗೆ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಹೇಳಿಕೊಂಡಿದ್ದರೂ, ಲೈಂಗಿಕ ಹಗರಣವು ಕೇಸರಿ ಪಕ್ಷದ ನಾಯಕರನ್ನು ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮರುಚಿಂತನೆ ನಡೆಸುವಂತೆ ಮಾಡಿದೆ.
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ

ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಭಾಗಿಯಾಗಿರುವ ಲೈಂಗಿಕ ಹಗರಣ, ಜೂನ್ 3 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿಗೆ 6 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮೇಲೆ ಈ ವಿಷಯ ಪರಿಣಾಮ ಬೀರುವ ಸಾಧ್ಯತೆಯಿದೆ.

ಪ್ರಸ್ತುತ ಲೋಕಸಭೆ ಚುನಾವಣೆಯನ್ನು ಎರಡೂ ಪಕ್ಷಗಳು ಒಟ್ಟಾಗಿ ಎದುರಿಸುತ್ತಿವೆ. ಪರಿಷತ್ತು, ಜಿಪಂ/ ತಾಪಂ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗಳಿಗೆ ಮೈತ್ರಿ ಮುಂದುವರಿಯಲಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಹೇಳಿಕೊಂಡಿದ್ದರೂ, ಲೈಂಗಿಕ ಹಗರಣವು ಕೇಸರಿ ಪಕ್ಷದ ನಾಯಕರನ್ನು ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮರುಚಿಂತನೆ ನಡೆಸುವಂತೆ ಮಾಡಿದೆ.

ಮೂಲಗಳ ಪ್ರಕಾರ, ಈ ವಿಷಯವು ನಿರಂತರವಾಗಿ ಮಾಧ್ಯಮಗಳಲ್ಲಿ ಪ್ರಜ್ವಲಿಸುತ್ತಿದೆ ಮತ್ತು ಸಾರ್ವಜನಿಕ ಅಭಿಪ್ರಾಯವೂ ಪ್ರಜ್ವಲ್ ವಿರುದ್ಧವಾಗಿದೆ. ಹೀಗಾಗಿ ಕೆಲವು ಬಿಜೆಪಿ ನಾಯಕರು ಮೈತ್ರಿ ಬಗ್ಗೆ ಮರುಚಿಂತನೆ ನಡೆಸಬೇಕೆಂದು ವರಿಷ್ಠರು ಬಯಸುತ್ತಿದ್ದಾರೆ ಎಂದು ಮೂಲವೊಂದು ತಿಳಿಸಿದೆ. ಬಿಜೆಪಿಯ ಉನ್ನತ ನಾಯಕತ್ವವು ಮೈತ್ರಿಯಲ್ಲಿ ಎಲ್ಲವೂ ಚೆನ್ನಾಗಿದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆ, ಅದರ ನಡುವೆಯೇ ಈ ಭಿನ್ನರಾಗಗಳು ಕೇಳಿ ಬರುತ್ತಿವೆ. ಏತನ್ಮಧ್ಯೆ, ಕಾಂಗ್ರೆಸ್ ನಾಯಕರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಲು ಲೈಂಗಿಕ ಹಗರಣವನ್ನು ಬಳಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಜ್ವಲ್ ಪರ ಪ್ರಚಾರ ಮಾಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನೇರವಾಗಿ ವಾಗ್ದಾಳಿ ನಡೆಸಿದರು. ರಾಹುಲ್ ಅವರು ಪ್ರಜ್ವಲ್ ಅವರನ್ನು "ಮಾಸ್ ರೇಪಿಸ್ಟ್" ಎಂದು ಕರೆದರು ಮತ್ತು ಈ ವಿಷಯದ ಬಗ್ಗೆ ಮೌನವಾಗಿರುವುದಕ್ಕೆ ಮೋದಿಯನ್ನು ತರಾಟೆಗೆ ತೆಗೆದುಕೊಂಡರು. ಪ್ರಜ್ವಲ್ ದೇಶದಿಂದ ಪಲಾಯನ ಮಾಡಲು ಕೇಂದ್ರ ಸಹಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಆದಾಗ್ಯೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದರು, 2019 ರಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಮಾಡಿಕೊಂಡಾಗ ಪ್ರಜ್ವಲ್ ಲೋಕಸಭೆಗೆ ಚುನಾಯಿತರಾಗಿದ್ದರು ಎಂದು ಸಮರ್ಥಿಸಿಕೊಂಡರು. ಪ್ರಜ್ವಲ್ ಬಂಧನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.

ಪ್ರಜ್ವಲ್ ರೇವಣ್ಣ
ವಿಧಾನ ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ಮರಿತಿಬ್ಬೇಗೌಡಗೆ ಮಾಜಿ ಎಂಎಲ್‌ಸಿ ಮನವಿ

ಆದರೆ, ಈ ಹಗರಣ ಜೆಡಿಎಸ್-ಬಿಜೆಪಿ ಮೈತ್ರಿಯ ಮೇಲೆ ಪರಿಣಾಮ ಬೀರುವುದು ಬಹುತೇಕ ಖಚಿತವಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಕೇಸರಿ ಪಕ್ಷವು ಪರಿಷತ್ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಿರುವುದರಿಂದ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಒಳಗಿನವರು ಹೇಳುತ್ತಾರೆ. ಬಹುತೇಕ ಬಿಜೆಪಿ ರಾಜ್ಯ ನಾಯಕರು ಲೈಂಗಿಕ ಹಗರಣದಿಂದ ಅಸಮಾಧಾನಗೊಂಡಿದ್ದು, ಮೈತ್ರಿ ಮುಂದುವರಿಸಲು ಅಷ್ಟೊಂದು ಉತ್ಸುಕರಾಗಿಲ್ಲ ಎಂದು ಬಲ್ಲ ಮೂಲಗಳು ಬಹಿರಂಗಪಡಿಸಿವೆ. ಬಿಜೆಪಿ ನಾಯಕರ ಒಂದು ವಿಭಾಗವು ಹೈಕಮಾಂಡ್ ಬಲವಂತದ ನಂತರ ಲೋಕಸಭೆ ಚುನಾವಣೆಗೆ ಮೈತ್ರಿಯನ್ನು ಒಪ್ಪಿಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.

ಆಗಿದ್ದು ಆಯಿತು ಎಂದು ಪಕ್ಷದ ವರಿಷ್ಠರು ಹೇಳಿ ಮೈತ್ರಿಯನ್ನು ಕೊನೆಗೊಳಿಸಿದರೆ ಅಥವಾ ಲೈಂಗಿಕ ಹಗರಣದಿಂದ ಪಕ್ಷಕ್ಕೆ ಉಂಟಾದ ಹಾನಿಯನ್ನು ಕಡಿಮೆ ಮಾಡಲು ಪರಿಷತ್ತಿನ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೆ ಆಶ್ಚರ್ಯವಿಲ್ಲ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ನಮ್ಮ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಳ್ಳದೆ ಉನ್ನತ ನಾಯಕರು ಮೈತ್ರಿ ಮಾಡಿಕೊಂಡಿದ್ದಾರೆ. ಇನ್ನುಳಿದ ನಾಲ್ಕು ಹಂತದ ಲೋಕಸಭಾ ಚುನಾವಣೆಗಳಲ್ಲಿ ಅಥವಾ ಮುಂದಿನ ಪರಿಷತ್ತಿನ ಚುನಾವಣೆಯಲ್ಲಿ ಪಕ್ಷವನ್ನು ಕಾಂಗ್ರೆಸ್ ಮತ್ತು ಐಎನ್‌ಡಿಐಎ ಬಣಗಳು ಗುರಿಯಾಗಿಸಿಕೊಳ್ಳದಂತೆ ನಿರ್ಧಾರ ತೆಗೆದುಕೊಳ್ಳುವುದು ಅವರಿಗೆ ಬಿಟ್ಟದ್ದು ಎಂದು ಬಿಜೆಪಿಯ ಪ್ರಮುಖ ನಾಯಕರೊಬ್ಬರು ಹೇಳಿದರು. ಅದರ ನಾಯಕರು ಮಾಡದ "ಅಪರಾಧ" ಕ್ಕಾಗಿ ಪಕ್ಷವನ್ನು ಗುರಿಯಾಗಿಸಿಕೊಂಡು ಪ್ರಶ್ನಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com