ರಾಜ್ಯದಲ್ಲೀಗ MLC ಚುನಾವಣೆ ಕಾವು: ಬಹುಮತದತ್ತ ಕಾಂಗ್ರೆಸ್ ಚಿತ್ತ; ಪ್ರಜ್ವಲ್ ಕೇಸ್ ಬೆನ್ನಲ್ಲೇ BJP-JDS ಸೀಟು ಹಂಚಿಕೆ ಕೌತುಕ!

ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ರಾಜಕೀಯ ಪಕ್ಷಗಳು ಬಿಡುವು ತೆಗೆದುಕೊಳ್ಳುವ ಮನಸ್ಥಿತಿಯಲ್ಲಿಲ್ಲ. ವಿಧಾನಪರಿಷತ್‌ ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿವೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು, ಇದರೊಂದಿಗೆ ಸಭಾಪತಿ ಸ್ಥಾನವೂ ಪಕ್ಷದ ಪಾಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ರಾಜಕೀಯ ಪಕ್ಷಗಳು ಬಿಡುವು ತೆಗೆದುಕೊಳ್ಳುವ ಮನಸ್ಥಿತಿಯಲ್ಲಿಲ್ಲ. ವಿಧಾನಪರಿಷತ್‌ ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿವೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸುವ ಸಾಧ್ಯತೆ ಇದ್ದು, ಇದರೊಂದಿಗೆ ಸಭಾಪತಿ ಸ್ಥಾನವೂ ಪಕ್ಷದ ಪಾಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಮುಂದಿನ ಕೆಲವು ವಾರಗಳಲ್ಲಿ, ಹಲವು ಹಾಲಿ ಎಂಎಲ್‌ಸಿಗಳ ಅವಧಿ ಮುಕ್ತಾಯವಾಗಲಿದ್ದು, ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳು ಸೇರಿದಂತೆ 18 ಕೌನ್ಸಿಲ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪ್ರಸ್ತುತ, ಪರಿಷತ್ತಿನ ಅಧ್ಯಕ್ಷರು ಸೇರಿದಂತೆ 75 ಸದಸ್ಯರ ಸದನದಲ್ಲಿ 70 ಎಂಎಲ್‌ಸಿಗಳಿದ್ದು, ಅವರಲ್ಲಿ ಕೆಲವರು ಕೆಲವು ತಿಂಗಳ ಹಿಂದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರೊಂದಿಗೆ 18 ಹುದ್ದೆಗಳು ಖಾಲಿಯಾಗಲಿವೆ. ಇವರಲ್ಲಿ 11 ಮಂದಿ ಶಾಸಕರಿಂದ ಆಯ್ಕೆಯಾಗಿದ್ದರೆ, ಆರು ಮಂದಿ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಂದ ಆಯ್ಕೆಯಾಗಿದ್ದಾರೆ. ವಿಧಾನಸಭೆ 136 ಶಾಸಕರನ್ನು ಹೊಂದಿದ್ದು, ಕಾಂಗ್ರೆಸ್ ಮೇಲುಗೈ ಹೊಂದಿದೆ. ಹೀಗಾಗಿ ಎಂಟು ಎಂಎಲ್‌ಸಿಗಳನ್ನು ಆಯ್ಕೆ ಮಾಡುವ ಅವಕಾಶವನ್ನು ಪಡೆದಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ನಾಲ್ವರನ್ನು ಮಾತ್ರ ಆಯ್ಕೆ ಮಾಡಬಹುದಾಗಿದೆ.

ಮೇಲ್ಮನೆಯಲ್ಲಿ ಕಾಂಗ್ರೆಸ್‌ಗೆ ಬಹುಮತವಿಲ್ಲದ ಕಾರಣ ವಿಧಾನಸಭೆಯಲ್ಲಿ ಅಂಗೀಕರಿಸಿದ ಹಲವು ಮಸೂದೆಗಳು ಪರಿಷತ್ತಿನಲ್ಲಿ ಹಾಗೆಯೇ ಉಳಿದಿವೆ. ಇಷ್ಟು ದಿನ, 75 ಸದಸ್ಯರಲ್ಲಿ 29 ಎಂಎಲ್‌ಸಿಗಳನ್ನು ಹೊಂದಿದ್ದೆವು. ಈ ಬಾರಿ ಎಂಟರಿಂದ ಒಂಬತ್ತು ಸ್ಥಾನಗಳನ್ನು ಹೆಚ್ಚು ಪಡೆದರೆ, ಬಹುಮತ ಸಾಧಿಸುತ್ತೇವೆ. ಇದರಿಂದ ಮಸೂದೆಗಳನ್ನು ಅಂಗೀಕರಿಸಬಹುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಂಗ್ರಹ ಚಿತ್ರ
ವಿಧಾನ ಪರಿಷತ್ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ನಾಯಕ ಮರಿತಿಬ್ಬೇಗೌಡಗೆ ಮಾಜಿ ಎಂಎಲ್‌ಸಿ ಮನವಿ

ಈ ನಡುವೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಕಾಂಗ್ರೆಸ್ ಈಗಾಗಲೇ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಬಿಜೆಪಿ ಇನ್ನೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ.

ಪ್ರತಿ ಕ್ಷೇತ್ರಕ್ಕೆ ಪಕ್ಷವು ಈಗಾಗಲೇ ಎರಡು ಅಥವಾ ಮೂರು ಹೆಸರನ್ನು ಶಿಫಾರಸು ಮಾಡಿದೆ. ಒಂದು ದಿನದಲ್ಲಿ ಹೈಕಮಾಂಡ್ ಅಂತಿಮ ಹೆಸರನ್ನು ನೀಡುವ ನಿರೀಕ್ಷೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಈ ಬಾರಿಯ ವಿಧಾನ ಪರಿಷತ್ತಿನ ಆರು ಸ್ಥಾನಗಳ ಚುನಾವಣೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಕೂಟಕ್ಕೆ ಅಗ್ನಿಪರೀಕ್ಷೆ ಎದುರು ಮಾಡಲಿದೆ.

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ತಾರಕಕ್ಕೇರಿರುವ ಈ ಸಂದರ್ಭದಲ್ಲಿ ಉಭಯ ಪಕ್ಷಗಳು ಹೇಗೆ ಸ್ಥಾನ ಹೊಂದಾಣಿಕೆ ಮಾಡಿಕೊಂಡು ಪರಿಷತ್ ಚುನಾವಣೆ ಎದುರಿಸುತ್ತವೆ ಎಂಬುದು ಕುತೂಹಲ ಮೂಡಿಸಿದೆ.

ಸಂಗ್ರಹ ಚಿತ್ರ
ಪ್ರಜ್ವಲ್ ರೇವಣ್ಣ ವಿವಾದದ ನಡುವೆ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ ಸಾಧ್ಯತೆ

ವಿಧಾನಪರಿಷತ್ ಮೂರು ಪದವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಗುರುವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ಈ ಪೈಕಿ ಜೆಡಿಎಸ್ ಕಳೆದ ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್ ಭೋಜೇಗೌಡ ಪ್ರತಿನಿಧಿಸುತ್ತಿದ್ದರು. ಈ ಪೈಕಿ ಮರಿತಿಬ್ಬೇಗೌಡ ಈಗಾಗಲೇ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಹೀಗಾಗಿ ಈ 6 ಕ್ಷೇತ್ರಗಳ ಪೈಕಿ ಬಿಜೆಪಿಯು ಭೋಜೇಗೌಡ ಪ್ರತಿನಿಧಿಸುತ್ತಿರುವ ಕ್ಷೇತ್ರವನ್ನು ಮಾತ್ರ ಜೆಡಿಎಸ್'ಗೆ ಬಿಟ್ಟುಕೊಡುವ ಉದ್ದೇಶ ಹೊಂದಿದೆ. ಆದರೆ, ಜೆಡಿಎಸ್ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನೂ ಬಿಟ್ಟುಕೊಡುವಂತ ಬೇಡಿಕೆ ಇಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com