ರಾಜಕೀಯ

ವಿಧಾನ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ: ಬಿ ಎಸ್ ಯಡಿಯೂರಪ್ಪ

ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಕೆ: ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Published On :

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಕ್ಷೇತ್ರ ಬಿಟ್ಟು ಕೊಡಬೇಕು ಎಂಬುದರ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ವಿವರ ಬಿಡುಗಡೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಭೀಕರ ಬರಗಾಲ ಬಂದಿದೆ. ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಬರಗಾಲ ಜನರನ್ನು ಕಿತ್ತು ತಿನ್ನುತ್ತಿದೆ. ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.

ಲೋಕಸಭಾ‌ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೂ ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಅವರು ಈಗಾಗಲೇ ಚಿಂತಿಸಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 24-25 ಸ್ಥಾನಗಳನ್ನು ಗೆಲ್ಲುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ನಲ್ಲಿ ಪ್ರಧಾನಿ ಆಗುವ ಯೋಗ್ಯತೆ ಯಾರಿಗಿದೆ? ವಿಧಾನಸಭೆ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ, ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಎಲ್ಲರ ಅಭಿಪ್ರಾಯವಾಗಿದೆ ಎಂದು ತಿಳಿಸಿದರು. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕಾದರೆ ಸಿಬಿಐಗೆ ಕೊಡಬೇಕು. ಬಹುತೇಕರ ಅಭಿಪ್ರಾಯ ಇದೇ ಆಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.